ಈ ಬಾರಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಮಹತ್ವದ ಅಂಶಗಳೇನು ಗೊತ್ತೇ?

      

Last Updated : Apr 6, 2018, 01:22 PM IST
ಈ ಬಾರಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿನ ಮಹತ್ವದ ಅಂಶಗಳೇನು ಗೊತ್ತೇ? title=

ಬೆಂಗಳೂರು: ಇದೇನು ಕಾಂಗ್ರೆಸ್ ಪಕ್ಷ ಆಗಲೇ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿಬಿಟ್ಟಿದೆಯೇ ಎಂದು ಹುಬ್ಬೇರಿಸಬೇಡಿ, ಕಾರಣ ಈ ಬಾರಿಯ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಭಿನ್ನವಾದ ಪ್ರಣಾಳಿಕೆಯ ಬಿಡುಗಡೆ ಮಾಡುವ ತಯಾರಿ ನಡೆಸಿದೆ. 

ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ವೀರಪ್ಪ ಮೊಯಲಿ " ಹೌದು ನಾವು ಈ ಬಾರಿ  ಪ್ರತಿ ಜಿಲ್ಲೆಗೊಂದರಂತೆ ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಯೋಜನೆಯನ್ನು ರೂಪಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇದರ ಜೊತೆಗೆ ಬೆಳಗಾವಿ, ಕಲಬುರ್ಗಿ, ಬೆಂಗಳೂರು, ಮೈಸೂರು ನಾಲ್ಕು ಪ್ರಾದೇಶಿಕವಾರು ಪ್ರಣಾಳಿಕೆಯನ್ನು ಬಿಡುಗಡೆ ಮಾಡುವ ಯೋಜನೆಯನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ಆ ಮೂಲಕ ವಿಕೇಂದ್ರೀಕೃತ ಅಭಿವೃದ್ದಿ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಣೆ ಮಾಡುವ ಸಾಧ್ಯತೆ ಇದೆ.

ಈ ಹಿಂದೆ ದೇಶದಲ್ಲಿ ಆಮ್ ಆದ್ಮಿ ಪಕ್ಷವು ಸಹಿತ ದೆಹಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಿ ಕ್ಷೇತ್ರಕ್ಕೆ ಒಂದರಂತೆ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿತ್ತು. ಈ ಬಾರಿ ಇದೆ ಮೇ 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಗೆದ್ದು ಅಧಿಕಾರಕ್ಕೆ ಬರುವ ಗುರಿ ಇಟ್ಟಿಕೊಂಡಿರುವ ಕಾಂಗ್ರೆಸ್ ಪಕ್ಷವು ಭಿನ್ನವಾದ ಕಾರ್ಯತಂತ್ರಗಳನ್ನು ಚುನಾವಣೆಯಲ್ಲಿ ರೂಪಿಸಿಸುತ್ತಿದೆ.

Trending News