ಆತ್ಮ ನಿರ್ಭರರಾಗಬೇಕೇ? ಇಗೋ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ..! ಈಗಲೇ ಅರ್ಜಿ ಸಲ್ಲಿಸಿ

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ zomoto, Swiggy, Uber, ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/- ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು.ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Last Updated : Nov 22, 2020, 06:16 PM IST
ಆತ್ಮ ನಿರ್ಭರರಾಗಬೇಕೇ? ಇಗೋ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ..! ಈಗಲೇ ಅರ್ಜಿ ಸಲ್ಲಿಸಿ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ zomoto, Swiggy, Uber, ಮೊದಲಾದ ಸಂಸ್ಥೆಗಳಲ್ಲಿ ಉದ್ಯೋಗ ಪಡೆದು, ಮನೆಬಾಗಿಲಿಗೆ ಉತ್ಪನ್ನ ತಲುಪಿಸುತ್ತಿರುವ ಹಿಂದುಳಿದ ವರ್ಗಗಳಿಗೆ ಸೇರಿದ ಪ್ರವರ್ಗ-1, ಪ್ರವರ್ಗ 2ಎ, 3ಎ ಮತ್ತು 3ಬಿಗೆ ಸೇರಿದ ಯುವಕರಿಗೆ ಬೈಕ್ ಕೊಂಡುಕೊಳ್ಳಲು ನಿಗಮದಿಂದ ರೂ. 25,000/- ಗಳ ಸಹಾಯಧನ ಹಾಗೂ ಉಳಿಕೆ ಮೊತ್ತ ಬ್ಯಾಂಕ್ ಅಥವಾ ಆರ್ಥಿಕ ಸಂಸ್ಥೆಗಳ ಮೂಲಕ ಸಾಲ ಪಡೆಯುವುದು.ಈ ಸೌಲಭ್ಯ ಪಡೆಯ ಬಯಸುವವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮೀನುಗಾರಿಕೆ ಮಾಡಿ ಆತ್ಮ ನಿರ್ಭರರಾಗಿ, ಇಗೋ ಇಲ್ಲಿದೆ ನಿಮಗೊಂದು ಸುವರ್ಣಾವಕಾಶ....!

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದರೆ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು.

ಮನೆಯಲ್ಲಿ ಆರ್ಥಿಕ ಸಮಸ್ಯೆಯೇ? ಹಾಗಿದ್ರೆ ಪ್ರತಿ ಸೋಮವಾರ ಈ ಕೆಲಸ ಮಾಡಿ

ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗದ ಫಲಾಫೇಕ್ಷಿಗಳು, ಅವರು ವಾಸಿಸುತ್ತಿರುವ ಆಯಾ ಜಿಲ್ಲೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವುದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಉಚಿತ ಅರ್ಜಿಗಳನ್ನು ಪಡೆಯುವುದು. ಅಲ್ಲದೆ ನಿಗಮದ ವೆಬ್‍ಸೈಟ್ www.dbcdc.karnataka.gov.in ಇಲ್ಲಿ ಪಡೆಯಬಹುದಾಗಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ/ದಾಖಲಾತಿಗಳೊಂದಿಗೆ ಆನ್‍ಲೈನ್ ಅಥವಾ ಆಫ್ ಲೈನ್ ಮೂಲಕ ದಿನಾಂಕ: 19-12-2020 ರೊಳಗೆ ಸಲ್ಲಿಸುವುದು. ನಂತರ ಬರುವ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ ಸೈಟ್: www.dbcdc.karnataka.gov.in ಹಾಗೂ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ (ನಿ), ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Trending News