ಇನ್ಮುಂದೆ ತಿಂಗಳಿಗೊಮ್ಮೆ ನಡೆಯಲಿದೆ ಸಿಎಂ ಜನತಾದರ್ಶನ

ಜನತಾದರ್ಶನ ಕಾರ್ಯಕ್ರಮವನ್ನು ತಿಂಗಳಿಗೊಮ್ಮೆ ನಡೆಸುವಂತೆ ಮುಖ್ಯಮಂತ್ರಿಗಳಿಗೆ ವೈದ್ಯರ ಸಲಹೆ.  

Last Updated : Sep 20, 2018, 08:20 AM IST
ಇನ್ಮುಂದೆ ತಿಂಗಳಿಗೊಮ್ಮೆ ನಡೆಯಲಿದೆ ಸಿಎಂ ಜನತಾದರ್ಶನ title=

ಬೆಂಗಳೂರು: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೆಪ್ಟೆಂಬರ್ 1 ರಿಂದ ಅಧಿಕೃತ ಚಾಲನೆ ನೀಡಿದ ಜನತಾದರ್ಶನ ಕಾರ್ಯಕ್ರಮವನ್ನು ತಿಂಗಳಿಗೊಮ್ಮೆ ನಡೆಸುವಂತೆ ವೈದ್ಯರು ಅವರಿಗೆ ಸಲಹೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇನ್ನುಮುಂದೆ ಜನತಾದರ್ಶನ ಕಾರ್ಯಕ್ರಮ ತಿಂಗಳಿಗೊಮ್ಮೆ ನಡೆಯಲಿದೆ. ಒಂದು ತಿಂಗಳು ಬೆಂಗಳೂರಿನಲ್ಲಿ ಒಂದು ತಿಂಗಳು ಜಿಲ್ಲಾ ಕೇಂದ್ರದಲ್ಲಿ ಜನತಾದರ್ಶನ ನಡೆಸಲಾಗುವುದು. ದಿನಾಂಕ ಹಾಗೂ ಸ್ಥಳವನ್ನು ಮುಂಚಿತವಾಗಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಸೆಪ್ಟೆಂಬರ್ 1 ರಿಂದ ಅಧಿಕೃತ ಚಾಲನೆ ನೀಡಿದ್ದ ಜನತಾದರ್ಶನ ಕಾರ್ಯಕ್ರಮ ಸೆ. 15ರಂದು ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದಿತ್ತು. ಜನತಾ ದರ್ಶನಕ್ಕೆ ಜನಸಾಗರವೇ ಹರಿದು ಬಂದಿತ್ತು. ಕುಮಾರಸ್ವಾಮಿ ಅವರು ಬೆಳಗಾವಿಯ ಜನತಾ ದರ್ಶನದಲ್ಲಿ ಅಹವಾಲುಗಳನ್ನು ಸ್ವೀಕರಿಸಿದರು.

Trending News