ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ - ಆರೋಗ್ಯ ಸಚಿವ ಕೆ. ಸುಧಾಕರ

  ರಾಜ್ಯದ ಆರೋಗ್ಯ ಸೇವೆಯಲ್ಲಿ ಗುಣಾತ್ಮಕವಾಗಿ ಅಮೂಲಾಗ್ರ ಬದಲಾವಣೆಗೆ ಚಿಂತಸಲಾಗಿದ್ದು, ಉತ್ತರ ಕರ್ನಾಟಕದ ಡಿಮ್ಹಾನ್ಸ್ ಆಸ್ಪತ್ರೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯೊಂದಿಗೆ ಸಂಯೋಜಿಸಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುವುದು ಮತ್ತು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ ಹಾಗೂ ಅವರ ವೇತನ ಹೆಚ್ಚಳ ಮಾಡಲು ಚಿಂತಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ. ಸುಧಾಕರ ಹೇಳಿದರು.

Last Updated : Nov 22, 2020, 04:11 PM IST
ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ - ಆರೋಗ್ಯ ಸಚಿವ ಕೆ. ಸುಧಾಕರ title=

ಧಾರವಾಡ:  ರಾಜ್ಯದ ಆರೋಗ್ಯ ಸೇವೆಯಲ್ಲಿ ಗುಣಾತ್ಮಕವಾಗಿ ಅಮೂಲಾಗ್ರ ಬದಲಾವಣೆಗೆ ಚಿಂತಸಲಾಗಿದ್ದು, ಉತ್ತರ ಕರ್ನಾಟಕದ ಡಿಮ್ಹಾನ್ಸ್ ಆಸ್ಪತ್ರೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯೊಂದಿಗೆ ಸಂಯೋಜಿಸಿ ಮೇಲ್ದರ್ಜೆಗೇರಿಸಲು ಕ್ರಮ ವಹಿಸಲಾಗುವುದು ಮತ್ತು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ ಹಾಗೂ ಅವರ ವೇತನ ಹೆಚ್ಚಳ ಮಾಡಲು ಚಿಂತಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ: ಕೆ. ಸುಧಾಕರ ಹೇಳಿದರು.

ಅವರು  ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಆವರಣದಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ನಿರ್ಮಿಸಿರುವ ಬೇಂದ್ರೆ ಬ್ಲಾಕ್ ನೂತನ ಕಟ್ಟಡ ಹಾಗೂ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸ್ಥಾಪಿಸಿರುವ ಪೂರ್ಣ ಶರೀರದ ಸಿಟಿ ಸ್ಕ್ಯಾನ್ ಯಂತ್ರ ಹಾಗೂ ಗಣಕೀಕೃತ ಗ್ರಂಥಾಲಯ ಉದ್ಘಾಟಿಸಿ ಮಾತನಾಡಿದರು.

ದಕ್ಷಿಣ ಕರ್ನಾಟಕಕಕ್ಕೆ ನಿಮ್ಹಾನ್ಸ್ ಇರುವಂತೆ ಉತ್ತರ ಕರ್ನಾಟಕಕ್ಕೆ ಡಿಮ್ಹಾನ್ಸ್ ಇದೆ. ಇದರ ಉನ್ನತೀಕರಣದಿಂದ ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕದ ಜಿಲ್ಲೆಗಳ ಜನರಿಗೆ ಉತ್ತಮವಾದ ಮಾನಸಿಕ ಆರೋಗ್ಯ ಚಿಕಿತ್ಸೆ ಲಭ್ಯವಾಗಲಿದೆ. ಆರೋಗ್ಯವಂತ ಸಮುದಾಯವಿದ್ದಲ್ಲಿ ಮಾತ್ರ ಶಿಕ್ಷಣ, ಸಂಸ್ಕøತಿ ಹಾಗೂ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ತಿಳಿಸಿದರು.

ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯ ಲೋಕಾರ್ಪಣೆ

ನೂತನವಾಗಿ ಆಯ್ಕೆಯಾಗುವ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಹಿಂಜರಿಕೆ ಪಡುತ್ತಾರೆ. ಆದ್ದರಿಂದ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ ಹಾಗೂ ಅವರ ವೇತನದಲ್ಲಿ ಹೆಚ್ಚಳ ಮಾಡಲು ಚಿಂತಿಸಲಾತ್ತಿದೆ ಎಂದು ಸಚಿವರು ತಿಳಿಸಿದರು.ಜನರು ಖಾಯಿಲೆಗಳಿದ್ದಾಗಿಯೂ ಆಸ್ಪತ್ರೆಗೆ ತೋರಿಸಲು ಹಿಂಜರಿಕೆ ಪಡುತ್ತಾರೆ. ವಿಶೇಷವಾಗಿ ಮಾನಸಿಕ ಖಾಯಿಲೆಗಳ ಲಕ್ಷಣಗಳು ಕಂಡಾಗ ತಕ್ಷಣ ಪ್ರಾಥಿಮಿಕ ಚಿಕತ್ಸೆ ಪಡೆಯುವುದರಿಂದ ಅದರ ಗಂಭೀರ ಪರಿಣಾಮ ಮತ್ತು ತೊಂದರೆಗಳನ್ನು ತಪ್ಪಿಸಬಹುದು. ಜನರು ಮುಗ್ದತೆ, ಅರಿವಿನ ಕೊರತೆ, ಭಯದಿಂದಾಗಿ ಆಸ್ಪತ್ರೆಗೆ ಬಂದು ಪರೀಕ್ಷಿಸಿಕೊಳ್ಳಲು ಹಿಂಜರಿಕೆ ಪಡುತ್ತಾರೆ. ಸರ್ಕಾರಿ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳ ಮುಖಾಂತರ ಈ ನಿಟ್ಟಿನಲ್ಲಿ ಜನರಿಗೆ ಆರೋಗ್ಯ ತಿಳುವಳಿಕೆ ಕಾರ್ಯಕ್ರಮಗಳನ್ನು ಹೆಚ್ಚಿಸಲಾಗುವುದು ಎಂದು ಹೇಳಿದರು.

ಧಾರವಾಡ ಮೂಲದ ಕನ್ನಡತಿ ಮಾಧುರಿ ಕಾನಿಟ್ಕರ್ ಲೆಫ್ಟಿ​ನೆಂಟ್‌ ಜನ​ರಲ್‌ ಹುದ್ದೆಗೆ ಬಡ್ತಿ

ಭಾರತ ಸರ್ಕಾರದ ಆಯುಷ್ಮಾನ್ ಭಾರತ ಹಾಗೂ ಕರ್ನಾಟಕ ಸರ್ಕಾರದ ಆರೋಗ್ಯ ಕರ್ನಾಟಕ ಸೇರಿ ಎಬಿಆರ್‍ಕೆ ಆರೋಗ್ಯ ಯೋಜನೆ ರೂಪಿಸಿದ್ದು, ಕರ್ನಾಟಕ ರಾಜ್ಯದಲ್ಲಿ ಸುಮಾರು 1.15 ಕೋಟಿ  ಕುಟುಂಬಗಳು ಅಯುಷ್ಮಾನ್ ಭಾರತದ ಪ್ರಯೋಜನೆ ಪಡೆಯುತ್ತಿದ್ದು, ಇದೊಂದು ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಬಿಪಿಎಲ್ ಮತ್ತು ಎಪಿಎಲ್ ಸೇರಿದಂತೆ ಎಲ್ಲ ರೀತಿಯ ಕುಟುಂಬಗಳಿಗೆ  ಆಯುಷ್ಮಾನ್ ಭಾರತ ಯೋಜನೆಯಲ್ಲಿ 1685 ಬಗೆಯ ಖಾಯಿಲೆಗಳಿಗೆ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಸಿದರು.ದಕ್ಷಿಣ ಕರ್ನಾಟಕಕ್ಕೆ ಹೋಲಿಸಿದಾಗ ಉತ್ತರ ಕರ್ನಾಟಕದ ತಾಲೂಕುಗಳಲ್ಲಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳ ಸಂಖ್ಯೆ ಕಡಿಮೆ ಇದೆ. ವೈದ್ಯರ, ಆರೋಗ್ಯ ಸಿಬ್ಬಂದಿಯ ಕೊರತೆ ಇದೆ. ಮುಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಪರಿಹರಿಸಲು ವಿಶ್ವಸಂಸ್ಥೆಯ ನೆರವಿನಲ್ಲಿ ಕ್ರಮ ಕೈಗೊಂಡು ಹೆಚ್ಚುವರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ಮತ್ತು ಆರೋಗ್ಯ ಸಿಬ್ಬಂದಿಯನ್ನು ಹೆಚ್ಚಿಸಲಾಗುವುದು.

ಆರೋಗ್ಯ ಇಲಾಖೆಯಲ್ಲಿ ವೈದ್ಯರ, ಪ್ಯಾರಾಮೆಡಿಕಲ್, ಆರೋಗ್ಯ ಕಾರ್ಯಕತೆಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಹೆಚ್ಚಳಕ್ಕೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ಸೇವೆಯಲ್ಲಿರುವ ಸಿಬ್ಬಂದಿಗಳಿಗೆ ಹಾಗೂ ಮುಂಬರುವ ಸಿಬ್ಬಂದಿಗಳಿಗೆ ಗುಣಾತ್ಮಕ ತರಬೇತಿ ನೀಡಿ ಸಾರ್ವಜನಿಕರಿಗೆ ಉತ್ತಮ ಸೇವೆಯನ್ನು ನೀಡಲು ಮತ್ತು ಸರ್ಕಾರಿ ಆಸ್ಪತ್ರೆಗಳ ಬಗೆಗೆ ಸಾರ್ವಜನಿಕರಲ್ಲಿ ಉತ್ತಮ ಅಭಿಪ್ರಾಯ ಮೂಡಿಸಿ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದು ಅವರು ಹೇಳಿದರು.

ಕೇಂದ್ರ ಸಂಸದೀಯ ಸಚಿವರು ಆಸಕ್ತಿ ವಹಿಸಿ ಉತ್ತರ ಕರ್ನಾಟಕ ಭಾಗದಲ್ಲಿ ಏಮ್ಸ್ ಆಸ್ಪತ್ರೆಯನ್ನು ಆರಂಭಿಸಲು  ಪ್ರಯತ್ನಿಸುತ್ತಿದ್ದು, ಏಮ್ಸ್‍ದಂತಹ ಉನ್ನತ ಆರೋಗ್ಯ ಸಂಸ್ಥೆಗಳು ಈ ಭಾಗಕ್ಕೆ ಬರುವುದರಿಂದ ಇಲ್ಲಿನ ಆರೋಗ್ಯ ಸಮಸ್ಯೆಗಳ ಪರಿಹಾರದೊಂದಿಗೆ ಆರೋಗ್ಯವಂತ ಸಮಾಜ ರೂಪುಗೊಳ್ಳಲು ಸಹಕಾರಿಯಾಗುತ್ತದೆ ಎಂದು ಸಚಿವರು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ್ ಜೋಶಿ ಅವರು ಮಾತನಾಡಿ, ಧಾರವಾಡದ ಡಿಮ್ಹಾನ್ಸ್ ಸಂಸ್ಥೆಯು ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಬಿಡುಗಡೆಯಾದ ಅನುದಾನವನ್ನು ಕಡಿಮೆ ಅವಧಿಯಲ್ಲಿ ಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ರಾಷ್ಟ್ರದಲ್ಲಿಯೇ ಪ್ರಥಮವಾಗಿದೆ. ಉತ್ತಮವಾದ ಕಟ್ಟಡ, ಮೂಲಭೂತ ಸೌಕರ್ಯ ಹಾಗೂ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಅನುದಾನವನ್ನು ಸಾರ್ಥಕವಾಗಿ ಬಳಸಿಕೊಂಡಿದೆ.
 ಮಾನಸಿಕ ರೋಗಿಗಳನ್ನು ಉತ್ತಮ ಚಿಕಿತ್ಸೆ ನೀಡುವ ಮೂಲಕ ಸಮಾಜದ ಮುಖ್ಯವಾಹಿನಿಗೆ ತರುವುದು ಸವಾಲಿನ ಕೆಲಸ. ಡಿಮ್ಹಾನ್ಸ್ ಸಂಸ್ಥೆ ಆರಂಭದಿಂದಲೇ ಉತ್ತರ ಕರ್ನಾಟಕದ ಜನರಿಗೆ ಉತ್ತಮವಾದ ಸೇವೆಯನ್ನು ನೀಡುತ್ತಿದೆ. ಡಿಮ್ಹಾನ್ಸ್ ಸಂಸ್ಥೆಯನ್ನು ನಿಮ್ಹಾನ್ಸ್ ಸಂಸ್ಥೆಯ ಗುಣಮಟ್ಟಕ್ಕೆ ಬೆಳೆಸುವ ಅಗತ್ಯವಿದೆ. ರಾಜ್ಯಸಕಾರದಿಂದ ಈ ಕುರಿತು ಪ್ರಸ್ತಾವನೆ ಸಲ್ಲಿಸಿದರೆ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ಮತ್ತು ಅನುದಾನವನ್ನು ನೀಡಲು  ಕ್ರಮ ಕೈಗೊಳ್ಳಲಾಗುವುದೆಂದು ಹೇಳಿದರು. 

ಕಳೆದ ಆರು ವರ್ಷಗಳಲ್ಲಿ ಕೇಂದ್ರ ಸರ್ಕಾರವು ರಾಷ್ಟ್ರದ ವಿವಿಧ ರಾಜ್ಯಗಳಲ್ಲಿ 156 ನೂತನ ವೈದ್ಯಕೀಯ ಕಾಲೇಜುಗಳನ್ನು ಆರಂಭಿಸಲು ರಾಜ್ಯಗಳಿಗೆ ಅನುಮತಿ ನೀಡಿದೆ. ಅದರಲ್ಲಿ ಕರ್ನಾಟಕದ     ನೂತನ ನಾಲ್ಕು ವೈದ್ಯಕೀಯ ಕಾಲೇಜುಗಳು ಸೇರಿವೆ. ಕೇಂದ್ರ ಸರ್ಕಾರವು ಡಿಮ್ಹಾನ್ಸ್ ಸಂಸ್ಥೆಗೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಲ್ಲಿ ಒಟ್ಟು 15 ಕೋಟಿ 70 ಲಕ್ಷ ಅನುದಾನಕ್ಕೆ ಮಂಜೂರಾತಿ ನೀಡಿ 8.33 ಕೋಟಿ ಈಗಾಗಲೇ ಬಿಡುಗಡೆ ಮಾಡಿದೆ ಎಂದು ಅವರು ಹೇಳಿದರು.

ಕೊರೊನಾ ಭೀತಿ ಹಿನ್ನಲೆಯಲ್ಲಿ ಇ-ಮೇಲ್, ವಾಟ್ಸಪ್ ಮೂಲಕ ಸೇವೆ ನೀಡಲು ಮುಂದಾದ ಈ ಜಿಲ್ಲೆ

ಉತ್ತರ ಕರ್ನಾಟಕದ  ಡಿಮ್ಹಾನ್ಸ್ ಮತ್ತು ಕಿಮ್ಸ್ ಆಸ್ಪತ್ರೆಗಳನ್ನು ಉನ್ನತೀಕರಿಸಿ ಸಾರ್ವಜನಿಕರಿಗೆ ಉನ್ನತ ದರ್ಜೆಯ ಆರೋಗ್ಯ ಚಿಕಿತ್ಸೆ ಸಿಗುವಂತೆ ಕ್ರಮ ವಹಿಸಲು ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಅಗತ್ಯ ನೆರವು ನೀಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಮೃತ ದೇಸಾಯಿ ವಹಿಸಿದ್ದರು.ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಈರಣ್ಣ ಜಡಿ, ತಾಲೂಕಾ ಪಂಚಾಯತ್ ಅಧ್ಯಕ್ಷ ರವಿವರ್ಮಾ ಕೃಷ್ಣನಾಯಕ ಪಾಟೀಲ, ಡಿಮ್ಹಾನ್ಸ್ ಪ್ರಭಾರಿ ವೈದ್ಯಕೀಯ ಅಧೀಕ್ಷಕ ಡಾ: ಶ್ರೀನಿವಾಸ ಕೋಸಗಿ ಸೇರಿದಂತೆ ಇತರರು ಇದ್ದರು.  ಡಿಮ್ಹಾನ್ಸ್ ಸಂಸ್ಥೆಯ ನಿರ್ದೇಶಕ ಪ್ರೊ: ಮಹೇಶ ದೇಸಾಯಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸುನಂದಾ ಜಿ.ಟಿ. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ, ಜಿಲ್ಲಾ ಆರೋಗ್ಯಾಧಿಕಾರಿ ಡಾ: ಯಶವಂತ ಮದೀನಕರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ: ಶಿವಕುಮಾರ್ ಮಾನಕರ ಸೇರಿದಂತೆ ಡಿಮ್ಹಾನ್ಸ್ ಹಾಗೂ ಜಿಲ್ಲಾಸ್ಪತ್ರೆಯ ಮತ್ತು ಆರೋಗ್ಯ ಇಲಾಖೆಯ ವಿವಿಧ ವೈದ್ಯರು, ಪ್ರಾಧ್ಯಾಪಕರು, ಆರೋಗ್ಯ ಸಿಬ್ಬಂದಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.   
 

Trending News