ಕೋಚಿಮುಲ್‌ನಲ್ಲಿ ನೇಮಕಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಡಾ.ಕೆ.ಸುಧಾಕರ್‌ ಆಕ್ರೋಶ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ ಎಂದ ಮಾಜಿ ಸಚಿವ ಡಾ. ಕೆ. ಸುಧಾಕರ್‌,

Written by - Prashobh Devanahalli | Edited by - Krishna N K | Last Updated : Dec 19, 2023, 04:39 PM IST
  • ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ ನೇಮಕಾತಿ
  • ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಲೀಕ್‌
  • ತನಿಖೆಗೆ ಆದೇಶಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಡಾ. ಕೆ ಸುಧಾಕರ್‌ ಎಚ್ಚರಿಕೆ
ಕೋಚಿಮುಲ್‌ನಲ್ಲಿ ನೇಮಕಕ್ಕೆ ಮುನ್ನವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಡಾ.ಕೆ.ಸುಧಾಕರ್‌ ಆಕ್ರೋಶ title=

ಚಿಕ್ಕಬಳ್ಳಾಪುರ : ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು, ಈ ಕುರಿತು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೂಡಲೇ ಕಾಂಗ್ರೆಸ್‌ ಸರ್ಕಾರ ಇದರ ವಿರುದ್ಧ ತನಿಖೆಗೆ ಆದೇಶಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಡಾ.ಕೆ.ಸುಧಾಕರ್‌ ಅವರು ಮಾಡಿರುವ ಟ್ವೀಟ್ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ರದ್ದು ಮಾಡಿದ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಬಣ್ಣ ಬಯಲಾಗಿದೆ. 

ಇದನ್ನೂ ಓದಿ: ಕೋವಿಡ್‌ಗೆ ಆರೋಗ್ಯ ಇಲಾಖೆಯಿಂದ ಹೊಸ ಗೈಡ್‌ಲೈನ್ಸ್‌

ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನವೇ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭ್ಯರ್ಥಿಗಳ ಹೆಸರಿನ ಮುಂದೆ ಅವರನ್ನು ಶಿಫಾರಸ್ಸು ಮಾಡಿದ ವ್ಯಕ್ತಿಗಳ ಹೆಸರನ್ನು ಸಹ ನಮೂದಿಸಿರುವುದನ್ನು ಗಮನಿಸಿದರೆ ನೇಮಕಾತಿ ಎಷ್ಟು ಪಾರದರ್ಶಕವಾಗಿ ನಡೆದಿದೆ ಎಂದು ತಿಳಿಯುತ್ತದೆ.

ಈ ಇಡೀ ನೇಮಕಾತಿ ಪ್ರಕ್ರಿಯೆಯೇ ಒಂದು ದೊಡ್ಡ ಹಗರಣವೆಂದು ಮೇಲ್ನೋಟಕ್ಕೆ ಸ್ಪಷ್ಟವಾಗಿದ್ದು, ಪ್ರಾಮಾಣಿಕ ಹಾಗೂ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಈ ನೇಮಕಾತಿಯನ್ನು ಕೂಡಲೇ ರದ್ದುಪಡಿಸಿ, ನಿಷ್ಪಕ್ಷಪಾತ ತನಿಖೆಗೆ ಆದೇಶ ನೀಡಬೇಕೆಂದು ಮಾನ್ಯ ಮುಖ್ಯಮಂತ್ರಿಗಳಲ್ಲಿ ಆಗ್ರಹಿಸುತ್ತೇನೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರದ್ದು ಮಾಡಿತು. ಜಿಲ್ಲೆ ರಚನೆಯಾದ 16 ವರ್ಷಗಳ ನಂತರ ಚಿಕ್ಕಬಳ್ಳಾಪುರಕ್ಕೆ ಒಂದು ಪ್ರತ್ಯೇಕ ಹಾಲು ಒಕ್ಕೂಟ ದಕ್ಕಿತೆಂದು ಸಂಭ್ರಮಿಸುವ ಮೊದಲೇ ಕಾಂಗ್ರೆಸ್ ಸರ್ಕಾರ ರೈತರ ಕನಸನ್ನು ನುಚ್ಚು ನೂರು ಮಾಡಿತು.

ಇದನ್ನೂ ಓದಿ:ಪ್ರಧಾನಿ ಮೋದಿಯವರನ್ನು ಭೇಟಿಯಾದ CM ಸಿದ್ಧರಾಮಯ್ಯ

ರಾಜ್ಯದಲ್ಲಿ ಹಾಲು ಉತ್ಪಾದನೆ ಮಾಡುವ ಪ್ರಮುಖ ಜಿಲ್ಲೆಗಳಲ್ಲಿ ಚಿಕ್ಕಬಳ್ಳಾಪುರ ಮುಂಚೂಣಿಯಲ್ಲಿದ್ದು ಹೈನುಗಾರಿಕೆಯಿಂದಲೇ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಜಿಲ್ಲೆಯಲ್ಲಿ ಒಟ್ಟು ಸುಮಾರು 1.75 ಲಕ್ಷ ರಾಸುಗಳಿದ್ದು ಜಿಲ್ಲೆಯ ಐದು ತಾಲ್ಲೂಕುಗಳಿಂದ ಪ್ರತಿನಿತ್ಯ ಸುಮಾರು 3.5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ. 2 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಚಾಮರಾಜನಗರ ಹಾಗೂ 50,000 ಲೀಟರ್ ಹಾಲು ಉತ್ಪಾದಿಸುವ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಕೂಡ ಪ್ರತ್ಯೇಕ ಹಾಲು ಒಕ್ಕೂಟಗಳಿದ್ದರೂ ಚಿಕ್ಕಬಳ್ಳಾಪುರಕ್ಕೆ ಮಾತ್ರ ಪ್ರತ್ಯೇಕ ಒಕ್ಕೂಟ ನೀಡದೆ ಕಾಂಗ್ರೆಸ್ ಪಕ್ಷ ದಶಕಗಳಿಂದ ಜಿಲ್ಲೆಯ ರೈತರಿಗೆ, ಹೈನುಗಾರಿಕೆ ಉದ್ಯಮಕ್ಕೆ ಅನ್ಯಾಯ ಮಾಡುತ್ತಾ ಬಂದಿತ್ತು.  

ಆಡಳಿತಾತ್ಮಕ ದೃಷ್ಟಿಯಿಂದ, ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆ. ಆದರೆ ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಒಂದು ವರ್ಷದಿಂದ ನಡೆಯುತ್ತಿದ್ದ ಪ್ರತ್ಯೇಕ ಒಕ್ಕೂಟವನ್ನು ಧಿಡೀರನೆ ನಿಲ್ಲಿಸಿ, ಬಿಜೆಪಿ ಸರ್ಕಾರದ ಆದೇಶವನ್ನು ಏಕಾಏಕಿ ರದ್ದು ಮಾಡಿ ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸಕ್ಕೆ ಕೈ ಹಾಕಿತು.

ಇದನ್ನೂ ಓದಿ:ಆರೋಗ್ಯ ಇಲಾಖೆಯಿಂದ ಕೊರೋನಾಗೆ ಹೊಸ ಗೈಡ್‌ ಲೈನ್ಸ್‌

ಈ ನೇಮಕಾತಿ ಹಗರಣ ಗಮನಿಸಿದರೆ, ಪ್ರತ್ಯೇಕ ಒಕ್ಕೂಟವನ್ನು ವಿರೋಧಿಸುವ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ದುರುದ್ದೇಶ ಏನೆಂದು ಅರ್ಥವಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಅಪಾರದರ್ಶಕವಾಗಿದ್ದು, ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದ್ದರಿಂದ ಈ ನೇಮಕಾತಿಯನ್ನು ಈ ಕೂಡಲೇ ರದ್ದು ಮಾಡಿ ನಿಷ್ಪಕ್ಷಪಾತ ತನಿಖೆಗೆ ಆದೇಶ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News