ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ : ಪಂಚೆ, ಶಲ್ಯ,ದೋತಿ, ಸೀರೆಯಲ್ಲಿಯೇ ಬರಬೇಕು ದೇವಾಲಯಕ್ಕೆ

20 ದಿನದ ಹಿಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ  ದೇವಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು.

Written by - Ranjitha R K | Last Updated : Aug 15, 2024, 05:26 PM IST
  • ಶೃಂಗೇರಿ ಶಾರದಾ ಪೀಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.
  • ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿಯಾಗಿದೆ.
  • ಇಂದಿನಿಂದಲೇ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದೆ.
ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿ : ಪಂಚೆ, ಶಲ್ಯ,ದೋತಿ, ಸೀರೆಯಲ್ಲಿಯೇ ಬರಬೇಕು ದೇವಾಲಯಕ್ಕೆ  title=

ಚಿಕ್ಕಮಗಳೂರು : ಶೃಂಗೇರಿ ಶಾರದಾ ಪೀಠದಲ್ಲಿ ಇಂದಿನಿಂದ ವಸ್ತ್ರ ಸಂಹಿತೆ ಜಾರಿಯಾಗಿದೆ.ಇಂದಿನಿಂದಲೇ ಈ ವಸ್ತ್ರ ಸಂಹಿತೆಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿ  20 ದಿನಗಳ ಹಿಂದೆ ಆದೇಶ ಹೊರಡಿಸಿತ್ತು. ಆದರೆ ಇಂದಿನಿಂದ ಈ ನೀತಿ ಜಾರಿಗೆ ಬಂದಿದೆ. 

ಶೃಂಗೇರಿ ಶಾರದಾ ಪೀಠಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ.ಇಲ್ಲಿ ಶಾರದಾ ಪೂಜೆ,ಅಕ್ಷರಾಭ್ಯಾಸ ಮಾಡಿಸಿದರೆ ಮಕ್ಕಳ ವಿದ್ಯಾಭ್ಯಾಸ ಅಡೆ ತಡೆಯಿಲ್ಲದೆ ಮುಂದುವರಿಯುತ್ತದೆ ಎನ್ನುವ ನಂಬಿಕೆಯಿದೆ.ಇದೀಗ ಶೃಂಗೇರಿ ಶಾರದಾ ಪೀಠಕ್ಕೆ ಬರುವ ಭಕ್ತರಿಗಾಗಿ ವಸ್ತ್ರ ಸಂಹಿತೆಯನ್ನು ಜಾರಿಗೆ ಮಾಡಲಾಗಿದೆ. 

ಇದನ್ನೂ ಓದಿ : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ನಿಲ್ಲಿಸುವ ಪ್ರಶ್ನೆಯೇ ಇಲ್ಲ: ದಿನೇಶ್ ಗುಂಡೂರಾವ್ 

ವಸ್ತ್ರ ಸಂಹಿತೆ ಜಾರಿ ಹಿನ್ನೆಲೆಯಲ್ಲಿ ಪಂಚೆ, ಶಲ್ಯ,ದೋತಿ, ಸೀರೆಯಲ್ಲಿ ಪೀಠಕ್ಕೆ  ಭಕ್ತರು ಬರುತ್ತಿದ್ದಾರೆ.ಈ ಹಿನ್ನೆಲೆಯಲ್ಲಿ ಇಂದು ದೇವಾಲಯ ಆವರಣ  ಭಾರತೀಯ ಸಂಸ್ಕೃತಿಯ ತಾಣವಾಗಿತ್ತು.20 ದಿನದ ಹಿಂದೆ ಈ ವಿಚಾರಕ್ಕೆ ಸಂಬಂಧಿಸಿದಂತೆ  ದೇವಾಲಯ ಆಡಳಿತ ಮಂಡಳಿ ಆದೇಶ ಹೊರಡಿಸಿತ್ತು.ದೇವರು,ಗುರುಗಳ ದರ್ಶನಕ್ಕೆ ಬರುವವರು ಸಾಂಪ್ರಾದಾಯಿಕ ಉಡುಗೊರೆಯಲ್ಲಿರುವಂತೆ ಸೂಚನೆ ನೀಡಲಾಗಿದೆ. 

ಇಂದಿನಿಂದ ವಸ್ತ್ರ ಸಂಹಿತೆ ಅಧಿಕೃತವಾಗಿ ಜಾರಿಗೆ ಬಂದಿದೆ.ದೇವಾಲಯ ಜಾರಿಗೊಳಿಸಿದ ವಸ್ತ್ರ ಸಂಹಿತೆ ಪದ್ಧತಿಯನ್ನು ಭಕ್ತವೃಂದ ಕೂಡಾ ಸ್ವಾಗತಿಸಿದೆ.  

ಇದನ್ನೂ ಓದಿ : Guarantee schemes: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News