ಬೆಂಗಳೂರು : ರಾಜ್ಯದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ ಡ್ರಗ್ಸ್ ದಂಧೆಯನ್ನು ತೀವ್ರ ಹತೋಟಿಕೆ ತಂದಿದ್ದೇವೆ.ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ.ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ಪೇನ್ ಕಿಲ್ಲರ್ ಮಾತ್ರೆಗಳಿಂದ ನಮಗೆ ಆತಂಕವಿದೆ ಎಂದರು.ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ.ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
ಇದನ್ನೂ ಓದಿ : ಬೆಳ್ಳಂಬೆಳಗ್ಗೆ ರಸ್ತೆಗಿಳಿದ ಗಜರಾಜ, ಸಂಚಾರ ಅಸ್ತವ್ಯಸ್ತ
ಪೇನ್ ಕಿಲ್ಲರ್ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಇದಕ್ಕೆ ಕಾನೂನು ಬೇರೆ ಇದೆ.ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.
ರಾಜ್ಯದಲ್ಲಿ ಗಾಂಜಾ ಸೇರಿದಂತೆ ಇನ್ನಿತರ ಮಾದಕ ದ್ರವ್ಯಗಳನ್ನು ನಿಯಂತ್ರಿಸಿದ್ದೇವೆ. ಪ್ರಕರಣಗಳ ಅಂಕಿ-ಅಂಶಗಳನ್ನು ಗಮನಿಸಿದಾಗ ಬಹಳಷ್ಟು ಕಡಿಮೆಯಾಗಿದೆ.ಎಲ್ಲಾ ರೀತಿಯ ನಿಯಂತ್ರಣಕ್ಕೆ ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಸುಮಾರು ಪ್ರಕರಣಗಳಲ್ಲಿ ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದರು.
ಮೂರು ಜಿಲ್ಲೆಗಳಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿರುವುದು ಕಂಡು ಬಂದಿದೆ. ಈ ಪ್ರಕರಣಗಳಲ್ಲಿ ಎಲ್ಲರನ್ನು ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಪ್ಯಾಲೆಸ್ತೀನ್‌ಗೆ ಬೆಂಬಲಿಸುತ್ತೇವೆ ಎಂದು ಹೇಳಿಕೆ ಕೊಟ್ಟಿದೆ.ಹೀಗಾಗಿ ಇದರಲ್ಲಿ ನಮ್ಮ ತಪ್ಪೇನಿದೆ ಎಂದು ವಾದಿಸಿದ್ದಾರೆ.ಆದರೂ ಅವರನ್ನು ಬಂಧಿಸಿದ್ದೇವೆ.
ಇದನ್ನೂ ಓದಿ : ನಾವು ಈ ಹಿಂದೆ ನ್ಯಾಯ ಕೊಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ
ನಾಗಮಂಗಲ ಪ್ರಕರಣದಲ್ಲಿ ತನಿಖೆಗೂ ಮುನ್ನ ಕ್ಲಿನ್‌ಚಿಟ್ ಆರೋಪದ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಇದನ್ನು ದೊಡ್ಡ ಸಮಸ್ಯೆ ಮಾಡುವ ನಿಟ್ಟಿನಲ್ಲಿ ಬಿಜೆಪಿಯವರು ಹೇಳಿಕೆ ನೀಡುತ್ತಿದ್ದಾರೆ. ನಾವು ಕಾನೂನು ಪ್ರಕಾರ ಏನೆಲ್ಲ ಕ್ರಮ ತೆಗೆದುಕೊಳ್ಳಬೇಕು, ಅದೆಲ್ಲವನ್ನು ಕೂಡ ಮುಲಾಜಿಲ್ಲದೆ ಮಾಡಿದ್ದೇವೆ. ಮುಂದಿನ ತನಿಖೆಯಲ್ಲಿ ಏನೆಲ್ಲ ವಿಚಾರಗಳು ಹೊರ ಬರುತ್ತವೆ, ಅದರ ಆಧಾರದ ಮೇಲೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ವುದೇ ರೀತಿಯ ಮುಲಾಜಿಲ್ಲದೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನೂರು ಸಲ ಹೇಳುತ್ತೇನೆ. ದಿನಕ್ಕೆ ಒಬ್ಬೊಬ್ಬರಂತೆ ಬಿಜೆಪಿ ಮುಖಂಡರು ನಾಗಮಂಗಲ ವಿಚಾರದಲ್ಲಿ ಹೇಳಿಕೆ ನೀಡುತ್ತಿದ್ದಾರೆ.
ಶಾಸಕ ಮುನಿರತ್ನನನ್ನು ಏಕಾಏಕಿ ಬಂಧಿಸಿಲ್ಲ.ಅವರ ವಿರುದ್ಧ ದೂರು ಕೊಟ್ಟಿದ್ದರು. ಇದಕ್ಕೆ ಪೂರಕವಾದ ವಿಡಿಯೋ ನೀಡಿದ್ದರು.ಅದನ್ನು ಆಧರಿಸಿ ಬಂಧಿಸಲಾಗಿದೆ. ಈಗಾಗಲೇ ಧ್ವನಿ ಮಾದರಿಯನ್ನು ಸಂಗ್ರಹಿಸಿ ಎಫ್‌ಎಸ್ಎಲ್ ಪರೀಕ್ಷೆಗೆ ಕಳುಹಿಸಿದ್ದಾರೆ.ವರದಿ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.