ಅತಿ ಮಳೆ ಕಾರಣದಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

Written by - Zee Kannada News Desk | Last Updated : May 20, 2022, 06:47 PM IST
  • ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.
  • ಜನ ಹಾಗೂ ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಅತಿ ಮಳೆ ಕಾರಣದಿಂದ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ  title=
file photos

ಧಾರವಾಡ : ಜಿಲ್ಲೆಯಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ಎಲ್ಲಾ ಶಾಲೆ,ಕಾಲೇಜುಗಳಿಗೆ ಇಂದು ಮೇ.20 ರಂದು  ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರಜೆ ಘೋಷಿಸಿದ್ದಾರೆ.ಹವಾಮಾನ ಇಲಾಖೆಯು ಮಳೆ ಮುಂದುವರೆಯುವ ಸಾಧ್ಯತೆಯ ಮುನ್ಸೂಚನೆ ನೀಡಿದೆ.ಇಂದು ಮೇ.20 ರಂದು ಜಿಲ್ಲೆಯ ಎಲ್ಲಾ ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. 

ಇದನ್ನೂ ಓದಿ: Google Map ನಿರ್ದೇಶನದಂತೆ ಸಾಗಿ ನಾಲೆಗೆ ಬಿದ್ದ ಕಾರು

ನಿನ್ನೆ ಮೇ.19 ಇಡೀ ದಿನ ಮತ್ತು ರಾತ್ರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಳೆಯಾಗಿದೆ.ತಾಲೂಕಿನ ನೋಡಲ್ ಅಧಿಕಾರಿಗಳು ವರದಿಗಳನ್ನು ಕಳಿಸುತ್ತಿದ್ದಾರೆ.ಜನ ಹಾಗೂ  ಜಾನುವಾರುಗಳ ಸುರಕ್ಷತೆಗೆ ಸಾರ್ವಜನಿಕರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.ಕಳೆದ ಎರಡಮೂರು ದಿನಗಳಿಂದ ಆಗುತ್ತಿರುವ ಮಳೆ ನಿನ್ನೆಯಿಂದ ನಿರಂತರವಾಗಿ ಸುರಿಯುತ್ತಿದೆ.ಸಾರ್ವಜನಿಕರಿಗೆ ಅತಿ ಮಳೆಯಿಂದ ಆಗಿ ಯಾವುದೇ ರೀತಿಯ ಸಮಸ್ಯೆಗಳು ಉಂಟಾದರೆ ತಕ್ಷಣ ಸಂಪರ್ಕಿಸಲು ಅನಕೂಲವಾಗುವಂತೆ ಜಿಲ್ಲಾಡಳಿತವು ಸಹಾಯವಾಣಿಗಳನ್ನು ಆರಂಭಿಸಿದೆ.

ಇದನ್ನೂ ಓದಿ: Viral Video : ಚಿಪ್ಸ್ ಕದಿಯಲು ಹೋಗುವಾಗ ನಾಯಿಯನ್ನು ಕೂಡಾ ಜೊತೆಗಾರನನ್ನಾಗಿಸಿತು ಕೋತಿ

ಜಿಲ್ಲಾಧಿಕಾರಿಗಳ ಕಚೇರಿ- 1077, ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರ ಕಚೇರಿ- 112, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ- 0836-2233201 ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರ ಕಚೇರಿ- 0836-2213888 ಹಾಗೂ 82778-03778 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News