ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದೇನು?

ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಹೀನಾಯ ಸೋಲಿನ ಹೊಣೆಹೊತ್ತು ಮಾಜಿ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಿಸಿದರು.  

Last Updated : Dec 9, 2019, 05:11 PM IST
ಸಿದ್ದರಾಮಯ್ಯ ರಾಜೀನಾಮೆ ಬಗ್ಗೆ ಕೇಂದ್ರ ಸಚಿವ ಸದಾನಂದಗೌಡ ಹೇಳಿದ್ದೇನು? title=
File Image

ನವದಹೆಲಿ: ಕರ್ನಾಟಕದಲ್ಲಿ 15 ವಿಧಾನಸಭಾ ಕ್ಷೇತ್ರಗಳಿಗೆ ಡಿ.5 ರಂದು ನಡೆದಿದ್ದ ಉಪಚುನಾವಣಾ ಫಲಿತಾಂಶ ಇಂದು ಪ್ರಕಟಗೊಂಡಿದೆ. ಇದರಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ, ಕಾಂಗ್ರೆಸ್ ಕೇವಲ 2 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. ಹೊಸಕೋಟೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಶರತ್ ಬಚ್ಚೇಗೌಡ ಜನ ಸಾಧಿಸಿದ್ದಾರೆ. ಉಪಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಮಾಜಿ ಸಿಎಂ  ಸಿದ್ದರಾಮಯ್ಯ(Siddaramaiah) ತಮ್ಮ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ (DV Sadanandagowda), ಸಿದ್ದರಾಮಯ್ಯನವರ ನಿರ್ಧಾರ ಸರಿಯಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ರಾಜೀನಾಮೆ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದಗೌಡ, ಸಿದ್ದರಾಮಯ್ಯ ಅವರಿಗೆ ಕಡೆಗೂ ಬುದ್ದಿ ಬಂದಿದೆ. ಅವರಿಗೆ ಈ ಬುದ್ದಿ ಯಾವಾಗಲೋ ಬರಬೇಕಿತ್ತು. ಸಿದ್ದರಾಮಯ್ಯ ತಾನು ಮಾಡಿದ್ದೆ ಸರಿ ಎಂದು ಕೊಂಡಿದ್ದರು. ಆದರೆ ರಾಜಕೀಯದಲ್ಲಿ ಹೀಗೆ ಇರುವುದು ಸರಿಯಲ್ಲ. ಆನೆ ನಡೆದಿದ್ದೇ ದಾರಿ ಎನ್ನುವುದಕ್ಕಿಂತ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕು. ಇದರಲ್ಲಿ ಅವರು ವಿಫಲರಾಗಿದ್ದಾರೆ. ಅವರು ಸಿಎಲ್ ಪಿ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ ಅವರ ಬಗೆಗಿನ ಗೌರವ ಹೆಚ್ಚಾಗಿದೆ ಎಂದರು.

ಇದೇ ವೇಳೆ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಶರತ್ ಬಚ್ಚೇಗೌಡ ಗೆದ್ದಿರುವುದು ಜೆಡಿಎಸ್ ಪಕ್ಷದ ಸಹಕಾರದಿಂದಲ್ಲ ಎಂದು ತಿಳಿಸಿದ ಸದಾನಂದ ಗೌಡ, ಸಂಸದ ಬಚ್ಚೇಗೌಡ ಪಕ್ಷವಿರೋಧಿ ಚಟುವಟಿಕೆ ನಡೆಸಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Trending News