ಶ್ರೀಗಳಿಗೆ "ಭಾರತ ರತ್ನ" ನೀಡುವಂತೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಮನವಿ

ಆಧುನಿಕ ಬಸವಣ್ಣ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿರುವುದು ಅತ್ಯಂತ ನೋವುಂಟು‌ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಸಂತಾಪ ಸೂಚಿಸಿದ್ದಾರೆ.

Last Updated : Jan 21, 2019, 03:50 PM IST
ಶ್ರೀಗಳಿಗೆ "ಭಾರತ ರತ್ನ" ನೀಡುವಂತೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಮನವಿ  title=

ತುಮಕೂರು: ಆಧುನಿಕ ಬಸವಣ್ಣ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಮಹಾಸ್ವಾಮಿಗಳು ಇಂದು ಲಿಂಗೈಕ್ಯರಾಗಿರುವುದು ಅತ್ಯಂತ ನೋವುಂಟು‌ ಮಾಡಿದೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಸಂತಾಪ ಸೂಚಿಸಿದ್ದಾರೆ.

ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾಮಾಜಿಕ, ಧಾರ್ಮಿಕ‌ ಕ್ಷೇತ್ರದಲ್ಲಿ ಅವರು ಸಲ್ಲಿಸಿದ ಸೇವೆ ಇನ್ನಾರಿಂದಲೂ‌ ಮಾಡಲಾಗದ ದೊಡ್ಡ ಸೇವೆಯಾಗಿದೆ. 111 ವರ್ಷಗಳನ್ನು ಸಂಪೂರ್ಣ ಮಾಡಿದ್ದ ಶ್ರೀಗಳ ಆರೋಗ್ಯ ಹದಗೆಟ್ಟಿತ್ತು. ವೈದ್ಯರ ಚಿಕಿತ್ಸೆಗೆ ಸ್ಪಂದಿಸದೇ ಇಂದು ಲಿಂಗೈಕ್ಯರಾಗಿದ್ದಾರೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ‌ ನಾವೆಲ್ಲರು ನಡೆಯೋಣ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಲಕ್ಷಾಂತರ ಭಕ್ತಾಧಿಗಳಿಗೆ ಆ ಭಗವಂತ ನೀಡಲಿ ಎಂದು ಪ್ರಾರ್ಥಿಸುವೆ ಎಂದರು.

ಶ್ರೀಗಳ ಸೇವೆಗೆ ಕೇಂದ್ರ ಸರಕಾರ "ಭಾರತ ರತ್ನ " ಗೌರವ ನೀಡಬೇಕು ಎಂದು ಹಿಂದಿನಿಂದಲೂ ಒತ್ತಾಯಿಸುತ್ತಿದ್ದೇವೆ. ಕೇಂದ್ರ ಸರಕಾರ ಕೂಡಲೇ ಶ್ರೀಗಳಿಗೆ ಭಾರತ ರತ್ನ ಗೌರವ ನೀಡಲಿ‌ ಎಂದು ಮನವಿ ಮಾಡುತ್ತೇನೆ ಎಂದರು.

 

Trending News