ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ

Hubballi : ಚನ್ನಗಿರಿ ಪ್ರಕರಣದಲ್ಲಿ ಡಿವೈಎಸ್ಪಿ, ಸಿಪಿಐ ಅಮಾನತ್ತು ಮಾಡಿ ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.

Written by - Prashobh Devanahalli | Edited by - Zee Kannada News Desk | Last Updated : May 25, 2024, 11:53 PM IST
  • ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ ಎಂದು ಖಂಡಿಸಿದರು.
  • ಪೊಲೀಸರ ನೈತಿಕ ಬಲ ಕುಗ್ಗಿಸಿದ್ದಾರೆ ಸಿಎಂ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದರು.
  • ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ
ಚನ್ನಗಿರಿ ಪ್ರಕರಣದಲ್ಲಿ DYSP, CPI ಅಮಾನತ್ತು: ಪೊಲೀಸ್ ಬಲ ಕುಗ್ಗಿಸಿದ ಸಿಎಂ title=

DYSP, CPI suspended in Channagiri case : ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿಎಂ ಈ ಧೋರಣೆ ನೋಡಿದರೆ ಪೊಲೀಸರು ಠಾಣೆ ಬಿಟ್ಟು ಓಡಿ ಹೋಗಬೇಕು ಎಂಬಂತಿದೆ ಎಂದು ಖಂಡಿಸಿದರು.

ಮುಸ್ಲಿಂರಷ್ಟೇ ಅಲ್ಲ, ಯಾರೇ ಆದರೂ ಸರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿ, ವಾಹನ ಜಖಂಗೊಳಿಸಿ ಗಲಭೆ ಎಬ್ಬಿಸುವುದು ಖಂಡನೀಯ. ಆದರೆ, ಈ ಪ್ರಕರಣದಲ್ಲಿ ಸಿಎಂ ಪೊಲೀಸರ ಮೇಲೆ ಕ್ರಮ ಕೈಗೊಂಡಿದ್ದಾರೆ ಎಂದು ಜೋಶಿ ಆಕ್ಷೇಪಿಸಿದರು.

ಇದನ್ನು ಓದಿ : ನಿಮ್ಮ ಕಿಚನ್ ನಲ್ಲಿರುವ ಜಿರಳೆಗಳನ್ನು ಓಡಿಸಲು ಬೇಸತ್ತು ಹೋಗಿದೀರಾ! ಇಲ್ಲಿದೆ ಕೆಲವು ಟ್ರಿಕ್ಸ್

ಅಪರಾಧ ಹಿನ್ನೆಲೆಯಲ್ಲಿ ಪೊಲೀಸರು ವ್ಯಕ್ತಿಯನ್ನು ಕರೆತಂದು ವಿಚಾರಣೆ ನಡೆಸಿದ್ದಾರೆ. ಆ ವೇಳೆ ಆತನಿಗೆ ಆರೋಗ್ಯ ಸಮಸ್ಯೆಯಾಗಿದೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಸಿಎಂ ಆದೇಶದಂತೆ DYSP ಮತ್ತು CPI ಅಮಾನತ್ತು ಪಡಿಸುವುದು ಯಾವ ನ್ಯಾಯ? ಎಂದು ಪ್ರಶ್ನಿಸಿದರು.

ನೇಹಾ, ಅಂಜಲಿ ಹತ್ಯೆ ಪ್ರಕರಣದಲ್ಲಿ ಇಲ್ಲದ ತ್ವರಿತ ಕ್ರಮ ಚನ್ನಗಿರಿಯಲ್ಲೇಕೆ?: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ, ಅಂಜಲಿ ಕೊಲೆ ಪ್ರಕರಣದಲ್ಲಿ ಕೈಗೊಳ್ಳದ ತ್ವರಿತ ಕ್ರಮವನ್ನು ಸಿಎಂ ಸಿದ್ದರಾಮಯ್ಯ ಚನ್ನಗಿರಿ ಪ್ರಕರಣದಲ್ಲಿ ಏಕೆ? ಕೈಗೊಂಡರು ಎಂದು ಜೋಶಿ ಪ್ರಶ್ನಿಸಿದರು.

ತುಷ್ಟೀಕರಣದ ರಾಜಕಾರಣರಿಂದ ಅರಾಜಕತೆ: ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ. ಇದರಿಂದ ಅರಾಜಕತೆ ನಿರ್ಮಾಣವಾಗುತ್ತಿದೆ ಎಚ್ಚರವಿರಲಿ ಎಂದು ಜೋಶಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ಇದನ್ನು ಓದಿ : ಮೆಗಾಸ್ಟಾರ್ ಚಿರಂಜೀವಿ ಸಿನಿಮಾದಲ್ಲಿ ಆಶಿಕಾ ರಂಗನಾಥ್...ಯಾವ ಚಿತ್ರ?

ರಾಮೇಶ್ವರ ಕೆಫೆ ಪ್ರಕರಣದಲ್ಲಿ ಇದನ್ನೇ ಮಾಡಿದರು. ನೇಹಾ, ಅಂಜಲಿ ಹತ್ಯೆ ಹೀಗೆ ಯಾವುದೇ ಘಟನೆಗಳಲ್ಲಿ ತ್ವರಿತ ಕ್ರಮ ಕೈಗೊಳ್ಳಲಿಲ್ಲ. ತನಿಖೆ ಆಗಬೇಕು ಎಂದರು. ಆದರೆ, ಚನ್ನಗಿರಿ ಪ್ರಕರಣದಲ್ಲಿ ಮಾತ್ರ ತನಿಖೆ  ಆಗಬೇಕು ಅನಿಸಲಿಲ್ಲವೇ? ತಕ್ಷಣ ಪೊಲೀಸ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದ್ದಾರೆ. ಇದು ಪೊಲೀಸರ ಬಲವನ್ನು ಕುಗ್ಗಿಸುವಂತಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಆಕ್ಷೇಪಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News