ಬೆಂಗಳೂರು : ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಅಂದರೆ ನಾಳೆಯಿಂದ ಮೂರು ದಿನಗಳ ಕಾಲ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ. ಈ ವಿಚಾರವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮೂರು ದಿನಗಳವರೆಗೆ ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸದಾ ಕಾರಣ ಸಾರ್ವಜನಿಕರು ಸಹಕಾರ ನೀಡುವಂತೆ ಪ್ರಿಯಾಂಕ್ ಖರ್ಗೆಕೋರಿದ್ದಾರೆ. ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇದನ್ನೂ ಓದಿ : ವಿಧಾನಪರಿಷತ್ʼನಲ್ಲಿ ವಿಪಕ್ಷಗಳ ಗಲಾಟೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗಿದೆ. ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಪ್ ಮೂಲಕ ನಿರ್ವಹಿಸಲು ಕ್ರಮವಹಿಸಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : ಒಂದು ಬಸ್ʼನಲ್ಲಿ ಬರೋಬ್ಬರಿ 120 ಮಕ್ಕಳ ಪ್ರಯಾಣ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.