ಮೈಸೂರು : ಮುಡಾದಲ್ಲಿನ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಮೂಡಾ ಕಚೇರಿ ಮೇಲೆ ಇಡಿ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧದ ಕೇಸ್ ಸೇರಿದಂತೆ ಮುಡಾದಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಇಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ದಾಳಿ ಹಿನ್ನೆಲೆಯಲ್ಲಿ ಮುಡಾ ಕಚೇರಿಯ ಮುಖ್ಯದ್ವಾರಕ್ಕೆ ಬೀಗ ಹಾಕಲಾಗಿದೆ.
ಇಡಿ ಅಧಿಕಾರಿಗಳ ಭೇಟಿ ಹಿನ್ನೆಲೆಯಲ್ಲಿ ಮೂಡಾದಲ್ಲಿ ಸಾರ್ವಜನಿಕರ ಸೇವಾ ಕಾರ್ಯಗಳು ಸ್ಥಗಿತಗೊಂಡಿವೆ. ಇಂದು ಮತ್ತು ನಾಳೆ ಒಟ್ಟು ಎರಡು ದಿನಗಳ ಕಾಲ ಪರಿಶೀಲನೆ ನಡೆಯಲಿದೆ. 15ಕ್ಕೂ ಹೆಚ್ಚು ಇಡಿ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.ಇಡಿ ತಂಡಕ್ಕೆ ಸಿ ಆರ್ ಪಿ ಎಫ್ ಯೋಧರಿಂದ ರಕ್ಷಣೆ ನೀಡಲಾಗಿದೆ.
ಇದನ್ನೂ ಓದಿ : ರಾಜ್ಯದಲ್ಲಿ ರಂಗೇರಿದ ಮಿನಿ ಸಮರ
ಮೂಡಾದಲ್ಲಿ 50:50 ಅನುಪಾತದಡಿ ನಿವೇಶನ ಹಂಚಿಕೆಯಲ್ಲಿ ಬಹುಕೋಟಿ ಹಗರಣದ ಆರೋಪ ಕೇಳಿ ಬಂದಿತ್ತು. ಈ ಆರೋಪದ ಹಿನ್ನೆಲೆಯಲ್ಲಿ ಇದೀಗ ಜಾರಿ ನಿರ್ದೇಶನಾಲಯದಿಂದ ತನಿಖೆ ಆರಂಭವಾಗಿದೆ. ಮೂಡಾದಲ್ಲಿ ಸಾವಿರಾರು ಕೋಟಿ ಹಣಕಾಸಿನ ಅವ್ಯವಹಾರ ನಡೆದಿರುವ ಬಗ್ಗೆ ಆರ್ ಟಿ ಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ದೂರು ಸಲ್ಲಿಸಿದ್ದರು.
VIDEO | Karnataka: Enforcement Directorate (ED) team conducts searches at Mysuru Urban Development Authority (MUDA) office #Mysuru.#MUDA
(Full video available on PTI Videos - https://t.co/n147TvqRQz) pic.twitter.com/pZqXHgw0cq
— Press Trust of India (@PTI_News) October 18, 2024
ಇಡಿ ಅಧಿಕಾರಿಗಳ ತಂಡ ಮೂಡಾಗೆ ಭೇಟಿ ನೀಡಿರುವ ಬಗ್ಗೆ ಮೂಡಾ ಕಾರ್ಯದರ್ಶಿ ಪ್ರಸನ್ನಕುಮಾರ್ ಮಾಹಿತಿ ನೀಡಿದ್ದಾರೆ. ಅವರು ಕೇಳುವ ಎಲ್ಲಾ ಮಾಹಿತಿಗಳನ್ನು ನೀಡುತ್ತೇವೆ.ಇಂದು ಮತ್ತು ನಾಳೆ ಇಡಿ ಅಧಿಕಾರಿಗಳ ತಂಡ ಕಡತಗಳ ಪರಿಶೀಲನೆ ನಡೆಸಲಿದೆ.ಇಡಿ ಅಧಿಕಾರಿಗಳು ನಿರ್ದೇಶನ ನೀಡಿದರೆ ಹೆಚ್ಚಿನ ಮಾಹಿತಿ ನೀಡುತ್ತೇವೆ.
ಅಲ್ಲಿಯವರೆಗೂ ಸಹಕಾರ ನೀಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಭಾರೀ ಮಳೆಯಿಂದಾಗಿ ನೀರಿನಲ್ಲಿ ಕೊಚ್ಚಿ ಹೋದ ದವಸ ಧಾನ್ಯಗಳು
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.