ಇಡಿಯಿಂದ ಬಿಬಿಎಂಪಿ ಮಾಜಿ ಮಹಿಳಾ ಕಾರ್ಪೋರೇಟರ್‌ಗೆ ಸೇರಿದ 3.35 ಕೋಟಿ ರೂ ಆಸ್ತಿ ಮುಟ್ಟುಗೋಲು

ಅಕ್ರಮ ಹಣಕಾಸು ಆರೋಪ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ.ಗೌರಮ್ಮ ದಂಪತಿಗೆ ಸೇರಿದ 3.35 ಕೋಟಿ ರೂ. ಮೌಲ್ಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ‌.

Written by - VISHWANATH HARIHARA | Edited by - Manjunath N | Last Updated : Aug 3, 2022, 12:12 AM IST
ಇಡಿಯಿಂದ ಬಿಬಿಎಂಪಿ ಮಾಜಿ ಮಹಿಳಾ ಕಾರ್ಪೋರೇಟರ್‌ಗೆ ಸೇರಿದ 3.35 ಕೋಟಿ ರೂ ಆಸ್ತಿ ಮುಟ್ಟುಗೋಲು title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಅಕ್ರಮ ಹಣಕಾಸು ಆರೋಪ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಸದಸ್ಯೆ ಸಿ.ಜಿ.ಗೌರಮ್ಮ ದಂಪತಿಗೆ ಸೇರಿದ 3.35 ಕೋಟಿ ರೂ. ಮೌಲ್ಯ ಆಸ್ತಿಯನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ‌.

ಬಿಬಿಎಂಪಿ ಅಜಾದ್‌ನಗರ ವಾರ್ಡ್ ಮಾಜಿ ಸದಸ್ಯೆ ಸಿ.ಜಿ. ಗೌರಮ್ಮ ವಿರುದ್ಧ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದಡಿ ಲೋಕಾಯುಕ್ತ ಪೊಲೀಸರು ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆ ಅಧಿಕಾರಿಗಳು ತನಿಖೆ ನಡೆಸಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದರು. ಕಾರ್ಪೋರೇಟರ್ ಆಗಿದ್ದಾಗ ಗೌರಮ್ಮ, ಅಧಿಕಾರ ದುರುಪಯೋಗಪಡಿಸಿಕೊಂಡಿದ್ದರು.ತನ್ನ ಪತಿ ಗೋವಿಂದರಾಜು ಜೊತೆ ಸೇರಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಸಿದ್ದರು.

ಇದನ್ನೂ ಓದಿ: ಮಂಕಿಪಾಕ್ಸ್ ಕುರಿತು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಿಎಂ ಸೂಚನೆ

ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಹಾಗೂ ಸ್ಥಿರಾಸ್ತಿಗಳನ್ನು ಸಂಪಾದನೆ ಮಾಡಿದ್ದರು. 2010ರಿಂದ 13ರ ವರೆಗೆ 3.46 ಕೋಟಿ ರೂ. ಮೌಲ್ಯದ ಕೃಷಿ ಭೂಮಿ, ಮನೆ, ಪ್ಲ್ಯಾಟ್ ಮತ್ತು ವಾಣಿಜ್ಯ ಮಳಿಗೆಗಳನ್ನು ಸಂಪಾದಿಸಿರುವುದ ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.

ಇದನ್ನೂ ಓದಿ: ಮಂಕಿಪಾಕ್ಸ್ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ: ಸಚಿವ ಸುಧಾಕರ್

ಈ ಅಂಶಗಳನ್ನು ಪರಿಗಣಿಸಿ ಅಕ್ರಮ ಹಣಕಾಸು ಸಂಪಾದನೆ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು 3.35 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ ಎಂದು ಇಡಿ ಮೂಲಗಳು ಮಾಹಿತಿ ನೀಡಿವೆ.

2012ರಲ್ಲಿ ನಡೆದ ಆರ್‌ಟಿಐ ಕಾರ್ಯಕರ್ತ ಲಿಂಗರಾಜು ಕೊಲೆ ಪ್ರಕರಣದಲ್ಲಿ ಗೌರಮ್ಮ, ಗೋವಿಂದರಾಜು ಸೇರಿ 12 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಶಿಕ್ಷೆ ವಿಧಿಸಿ ನ್ಯಾಯಾಲಯ 2020ರಲ್ಲಿ ತೀರ್ಪು ಸಹ ನೀಡಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News