S Suresh Kumar : SSLC - ದ್ವಿತೀಯ PUC ಪರೀಕ್ಷೆ ರದ್ದು? ಈ ಸುದ್ದಿ ನಿಜಾನಾ ಇಲ್ಲಿದೆ ನೋಡಿ!

ಈಗ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಹುರುಳು ಇಲ್ಲ. ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು.

Last Updated : May 17, 2021, 12:46 PM IST
  • SSLC - ದ್ವಿತೀಯ PUC ಪರೀಕ್ಷೆ ರದ್ದು
  • ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಹೀಗಾಗಲೆ ಮುಂದೂಡಲಾಗಿದೆ .
  • ಈಗ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಹುರುಳು ಇಲ್ಲ
S Suresh Kumar : SSLC - ದ್ವಿತೀಯ PUC ಪರೀಕ್ಷೆ ರದ್ದು? ಈ ಸುದ್ದಿ ನಿಜಾನಾ ಇಲ್ಲಿದೆ ನೋಡಿ! title=

ಬೆಂಗಳೂರು : ಇದೇ ತಿಂಗಳು ನಡೆಯಬೇಕಿದ್ದ ದ್ವಿತೀಯ ಪಿಯುಸಿ ಹಾಗೂ ಮುಂದಿನ ತಿಂಗಳು 21ರಿಂದ ನಡೆಯಬೇಕಿದ್ದ ಹತ್ತನೇ ತರಗತಿಯ ಪರೀಕ್ಷೆಯನ್ನು ಕೊರೋನಾ ಕಾರಣದಿಂದಾಗಿ ರಾಜ್ಯ ಸರ್ಕಾರ ಹೀಗಾಗಲೆ ಮುಂದೂಡಲಾಗಿದೆ.

ಆದರೆ ಇದರ ನಡುವೆಯೇ ಈ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಹಲವಾರು ಸುದ್ದಿಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌(S Suresh Kumar) ಅವರಿಗೂ ಹಲವಾರು ಕರೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ : BC Patil : ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ₹ 50 ಸಾವಿರ ಪರಿಹಾರ ಘೋಷಿಸಿದ ಕೃಷಿ ಸಚಿವ!

ಅದೇನೆಂದರೆ, ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹತ್ತನೇ ತರಗತಿ ಮತ್ತು  ದ್ವಿತೀಯ ಪಿಯು‌ಸಿ ಪರೀಕ್ಷೆ(SSLC-Second PUC Exams 2021)ಗಳನ್ನು ಮುಂದೂಡಲಾಗಿದೆಯೇ ಹೊರತು ರದ್ದು ‌ಪಡಿಸುವ ಬಗ್ಗೆ ಸದ್ಯಕ್ಕೆ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ.

ಇದನ್ನೂ ಓದಿ : Heavy Rain : ಗುಜರಾತಿನತ್ತ ಪಯಣ ಬಳಸಿದ ತೌಕ್ತೆ ಸೈಕ್ಲೋನ್ : ರಾಜ್ಯದಲ್ಲಿ ಮೇ 20ರವರೆಗೆ ಭಾರೀ ಮಳೆ!

ಈಗ ಹರಿದಾಡುತ್ತಿರುವ ಸುದ್ದಿಗಳಲ್ಲಿ ಯಾವುದೇ ಹುರುಳು ಇಲ್ಲ. ವಿದ್ಯಾರ್ಥಿಗಳ(Students) ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ‌ ವಿದ್ಯಾರ್ಥಿಗಳು‌ ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : Cyclone Tauktae : ತೌಕ್ತೆ ಚಂಡಮಾರುತದ ಅಬ್ಬರಕ್ಕೆ ರಾಜ್ಯದಲ್ಲಿ 4 ಜನ ಬಲಿ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News