ದುಬಾರಿ ಶುಲ್ಕ ಪಾವತಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅಳಲು ತೋಡಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್

ದುಬಾರಿ ಶುಲ್ಕ ಪಾವತಿ ಸವಾಲನ್ನು ಪೋಷಕರು ಮತ್ತು ಖಾಸಗಿ ಶಾಲಾ ವ್ಯವಸ್ಥಾಪಕ ಮಂಡಳಿಯವರು ಕುಳಿತು ಚರ್ಚೆ ಮಾಡಬೇಕು. ಇಬ್ಬರೂ ಆರೋಗ್ಯಕರ ಸಹಕಾರ ನೀಡಬೇಕು ಎಂದು ಮನವಿ ಮಾಡಿ ನಯವಾಗಿ ಜವಾಬ್ದಾರಿಯಿಂದ ಜಾರಿಕೊಂಡಿರುವ ಸುರೇಶ್ ಕುಮಾರ್.  

Written by - Yashaswini V | Last Updated : Dec 21, 2020, 11:13 AM IST
  • ಇದು ಅವರು ಸಚಿವನಾಗಿ ಎದುರಿಸುತ್ತಿರುವ ದೊಡ್ಡ ಸಮಸ್ಯೆಯಂತೆ
  • ಶಿಕ್ಷಣ ಸಚಿವರಾಗಿ ಖಾಸಗಿ ಶಾಲೆಗಳಿಗೆ ಅವರು ಸಹಾಯ ಮಾಡುತ್ತಿಲ್ಲವಂತೆ
  • ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರು ಬಂದು ಮನವಿ ಮಾಡಿಕೊಂಡಿದ್ದಾರಂತೆ
ದುಬಾರಿ ಶುಲ್ಕ ಪಾವತಿ ಬಗ್ಗೆ ಫೇಸ್‌ಬುಕ್‌ನಲ್ಲಿ ಅಳಲು ತೋಡಿಕೊಂಡ ಶಿಕ್ಷಣ ಸಚಿವ ಸುರೇಶ್ ಕುಮಾರ್  title=
Private schools expensive fees (File Image)

ಬೆಂಗಳೂರು: ಲಾಕ್ಡೌನ್ ವೇಳೆ ಸ್ಕೂಲ್ ಇರಲಿಲ್ಲ, ಜೊತೆಗೆ ಕೊರೊನಾ ಕಷ್ಟ ಇದೆ. ದುಬಾರಿ ಶುಲ್ಕ ಭರಿಸಲು ಸಾಧ್ಯವಿಲ್ಲ ಎಂಬುದು ಪೋಷಕರ ಅಳಲು. ಕೊರೊನಾ ನಮ್ಮ ಮೇಲೂ ಕೆಂಗಣ್ಣು ಬೀರಿದೆ ನಿಗಧಿತ ಶುಲ್ಕ ಪಾವತಿ ಎಂಬುದು ಖಾಸಗಿ ಶಾಲೆಗಳ ವಾದ. ಶಾಲೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಂಡಿರುವ ವೇಳೆ 'ಶುಲ್ಕದ ಸಮಸ್ಯೆ ಉಂಟಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ (S Suresh Kumar) ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರ ಸಂಪೂರ್ಣ ವಿವರ ಈ ರೀತಿ ಇದೆ.

ಸಚಿವನಾಗಿ ಎದುರಿಸುತ್ತಿರುವ ಸಮಸ್ಯೆಗಳ ಪೈಕಿ ದೊಡ್ಡ ಸಮಸ್ಯೆಯಿದು. ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವಿನ ಶುಲ್ಕದ ವಿಚಾರ. ಕೊರೋನಾ ಎಲ್ಲಾ ಕ್ಷೇತ್ರಗಳ ಮೇಲೂ ಕರಾಳ ಛಾಯೆ ಚಾಚಿದೆ. ಎಲ್ಲಾ ಕ್ಷೇತ್ರಗಳು ಆರ್ಥಿಕವಾಗಿ ಜರ್ಜರಿತವಾಗಿವೆ. ಆರ್ಥಿಕವಾಗಿ ಸಾಕಷ್ಟು ಶಕ್ತಿವಂತರಾಗಿದ್ದ ಕಾಲದಲ್ಲಿ ಕೆಲವು ಪೋಷಕರು ದುಬಾರಿ ಶುಲ್ಕ ತೆಗೆದುಕೊಳ್ಳುವ ಶಾಲೆಗಳಿಗೆ ಮಕ್ಕಳನ್ನು ಸೇರಿಸಿದ್ದರು.

ಅದೂ ಹೇಗೆ? 
ರಾತ್ರಿಯಿಡೀ ಶಾಲೆಯ ಮುಂದೆ ಸಾಲು ನಿಂತು ಶಾಲೆಯ ಅಡ್ಮಿಶನ್ ಅರ್ಜಿ ಪಡೆದು‌ ಕೆಲವು ಗಣ್ಯರಿಂದ ಶಿಫಾರಸು ಪತ್ರ ಪಡೆದು ಕೊನೆಗೂ ತಮ್ಮ ಮಕ್ಕಳಿಗೆ ಆ ಶಾಲೆಯಲ್ಲಿ ಸೀಟು ದೊರಕಿದಾಗ ಪೋಷಕರಿಗೆ ಆಗಿರುವ ಆನಂದ ಊಹಾತೀತ  ಇದೇ ಶಾಲೆಯಲ್ಲಿ ನಮ್ಮ ಮಗು ಓದಬೇಕು ಎಂಬ ಹಂಬಲದಿಂದ ಕೆಲವು ಬಾರಿ ಹಠದಿಂದ ಮಕ್ಕಳನ್ನು ಸೇರಿಸಿರುವ ಪ್ರಕರಣಗಳು ಅನೇಕರಲ್ಲಿದೆ. 

Coronavirus ಬಿಕ್ಕಟ್ಟಿನ ನಡುವೆ ತೆರೆಯಲಿದೆಯೇ ಶಾಲಾ-ಕಾಲೇಜು? ಗೃಹ ಸಚಿವಾಲಯ ಹೇಳಿದ್ದೇನು?

ಅದೇ ಶಾಲೆಯ ವಿರುದ್ಧ ಅದೇ ಪೋಷಕರು ಘೋಷಣೆ ಹಾಕುವ ಸ್ಥಿತಿ ಬಂದಿದೆ. ಏಕೆಂದರೆ ಆ ಪೋಷಕರು ಇಂದು ಆರ್ಥಿಕವಾಗಿ ತುಸು ದುರ್ಬಲರಾಗಿದ್ದಾರೆ. ಆದ್ರೆ ಶಾಲೆಗಳ ಮುಖ್ಯಸ್ಥರು ತಮ್ಮ ಶಿಕ್ಷಕರಿಗೆ ಸಂಬಳ ಕೊಡಲು ಸಾಧ್ಯವಾಗ್ತಿಲ್ಲ. ಈಗ ಪೋಷಕರು ಶುಲ್ಕ ಕಟ್ಟುತ್ತಿಲ್ಲ ಎಂದು ಹೇಳುತ್ತಿದ್ದಾರೆ.‌ ಸರ್ಕಾರದ ವಿರುದ್ಧ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ.

ಶಿಕ್ಷಣ ಸಚಿವ ಖಾಸಗಿ ಶಾಲೆಗಳಿಗೆ ಸಹಾಯ ಮಾಡುತ್ತಿಲ್ಲ ಎಂಬ ಕೂಗು ಕೇಳುತ್ತಿದೆ.‌ ಶಿಕ್ಷಣ ಸಚಿವ ಖಾಸಗಿ ಶಾಲೆಗಳಿಗೆ ಅಂಕುಶ ಹಾಕುತ್ತಿಲ್ಲ ಎಂಬ ಕೂಗೂ ಕೇಳುತ್ತಿದೆ. ನನಗೆ ಪೋಷಕರ ಕಷ್ಟದ ಅರಿವು ಇದೆ.

ಎಷ್ಟೋ ಜನ ಕಳೆದ ಎಂಟು ತಿಂಗಳಲ್ಲಿ ಕೆಲಸ ಕಳೆದು ಕೊಂಡಿದ್ದಾರೆ. ಅವರ ಸಂಬಳದ ಶೇಕಡ 25ರಷ್ಟು ಇಂದು ಅವರಿಗೆ ಬರುತ್ತಿಲ್ಲ.‌ಅಂತಹವರಿಗೆ ತಾವು ಬಯಸಿ ತಮ್ಮ ಮಕ್ಕಳನ್ನು ಸೇರಿಸಿದ್ದ ಶಾಲೆಗಳಿಗೆ ದುಬಾರಿ ಶುಲ್ಕ ಕಟ್ಟಲು ಇಂದು ಅಸಾಧ್ಯವಾಗಿದೆ. ಅಂಥವರಿಗೆ ಈ ವರ್ಷ ಶುಲ್ಕ ರಿಯಾಯಿತಿ ಬೇಕು ಎಂದು ಅನಿಸಿದರೆ ತಪ್ಪಲ್ಲ.

ಇದನ್ನೂ ಓದಿ: ಸ್ಕೂಲ್ ತೆರೆಯುವ ಮುನ್ನ ಶುಲ್ಕ ವಿಧಿಸದಂತೆ ಸರ್ಕಾರದ ಸೂಚನೆ, ಆನ್‌ಲೈನ್ ಕ್ಲಾಸ್ ಮುಚ್ಚಿದ ಶಾಲೆಗಳು

ಖಾಸಗಿ ಶಾಲೆಗಳ ಶಿಕ್ಷಕರು ಕಳೆದ  ವೇತನವಿಲ್ಲದೇ ಪರದಾಡುತ್ತಿದ್ದಾರೆ. ಕಳೆದ ಎಂಟು ತಿಂಗಳಿಂದ ಪರದಾಡುತ್ತಿರುವ ಪರಿಸ್ಥಿತಿ ನಮ್ಮ ಮುಂದೆ ಇದೆ. ಅನೇಕ ಶಿಕ್ಷಕರು ಜೀವನ ನಿರ್ವಹಣೆಗಾಗಿ ಬೇರೆ ಬೇರೆ ಕೆಲಸ ಮಾಡುತ್ತಿದ್ದಾರೆ.‌ ತರಕಾರಿ ಮಾರುವುದು, ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಕೆಲಸ ಮಾಡುವುದು.‌ ಇಂಥ ಪ್ರಸಂಗಗಳು ವರದಿಯಾಗುತ್ತಿವೆ.

ಖಾಸಗಿ ಶಾಲೆಗಳ (Private Schools) ವ್ಯವಸ್ಥಾಪಕರ ವಾದವೆಂದರೆ ಪೋಷಕರು ಶುಲ್ಕ ಕಟ್ಟದಿದ್ದರೆ ಶಿಕ್ಷಕರಿಗೆ ಸಂಬಳ ಕೊಡುವುದು ಹೇಗೆ ಎಂದು? ಖಾಸಗಿ ಶಾಲೆಗಳ ಶಿಕ್ಷಕರಿಗೆ ಹಣಕಾಸಿನ ಸಹಾಯ ನೀಡಬೇಕೆಂಬುದು ಆಗ್ರಹ ಅದಕ್ಕಾಗಿ ನಾವು ಸರ್ಕಾರದಲ್ಲಿ ಯೋಚಿಸಿದ್ದೇವು ಬೇರೆ ಬೇರೆ ಕ್ರಮಗಳ ಬಗ್ಗೆ ಯೋಚಿಸಿದರೂ ಅದು ಕಾರ್ಯಗತವಾಗಲಿಲ್ಲ ಏಕೆಂದರೆ ಸರಕಾರದ ಹಣಕಾಸಿನ ಪರಿಸ್ಥಿತಿ ಆಶಾದಾಯಕವಾಗಿಲ್ಲ ಕಳೆದ ವಾರ ಖಾಸಗಿ ಶಾಲೆಗಳ ಮುಖ್ಯಸ್ಥರ ಸಂಘಟನೆಯ ಪ್ರತಿನಿಧಿಗಳು ನನ್ನನ್ನು ಭೇಟಿ ಮಾಡಿದ್ದರು ತಮ್ಮ ಕಷ್ಟಗಳನ್ನೆಲ್ಲ ವಿವರಿಸಿದರು

ಕಡೆಗೂ ಶಾಲೆಗಳನ್ನು ಆರಂಭಿಸಲು ಒಪ್ಪಿಗೆ ಸೂಚಿಸಿದ ರಾಜ್ಯ ಸರ್ಕಾರ

ಆಗ ನಾನು ಹೇಳಿದ ಮಾತು ಹೀಗಿತ್ತು; ಪೋಷಕರು ಮತ್ತು ನಿಮ್ಮ ನಡುವೆ ಆರೋಗ್ಯಕರ ಸಂಬಂಧ ಇರಬೇಕು ಆ ಪೋಷಕರು ನಿಮ್ಮ ಶಾಲೆಯನ್ನು ಪ್ರೀತಿಸಿ ಇದೇ ಶಾಲೆ ಬೇಕೆಂದು ಸೇರಿಸಿದ್ದಾರೆ. ನೀವು ಶಾಲಾ ವ್ಯವಸ್ಥಾಪಕ ಮಂಡಳಿ ರಚಿಸಿ ಆ ವೇದಿಕೆಯಡಿ ಪೋಷಕರ ಜೊತೆ ಏಕೆ ಮಾತನಾಡಬಾರದು? ಪೋಷಕರ ಸಮಸ್ಯೆಯನ್ನು ಏಕೆ ಆಲಿಸಬಾರದು? ನಂತರ ನಿಮ್ಮ ಪರಿಸ್ಥಿತಿಯನ್ನು ಪೋಷಕರಿಗೆ ಏಕೆ ವಿವರಿಸಬಾರದು? ಇಬ್ಬರ ನಡುವೆ ಸಂವಾದದ ನಂತರ ಇಬ್ಬರಿಗೂ ಹಿತಕರವೆನಿಸುವ ಸೂತ್ರ ಏಕೆ ತೀರ್ಮಾನಿಸ ಬಾರದು? ಆ ಮುಖ್ಯಸ್ಥರು ಚರ್ಚೆ ಮಾಡುತ್ತೇವೆ ಎಂದಿದ್ದಾರೆ.‌ ಕೊರೋನಾ ಮಹಾಮಾರಿಯ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಆಡಳಿತಾತ್ಮಕ ವೆಚ್ಚಕ್ಕೆ ಮಾತ್ರ  ಶುಲ್ಕ ತೆಗೆದುಕೊಳ್ಳುತ್ತೇವೆ. ಪೋಷಕರ ಜೊತೆಗೆ ನಾವು ನಿಲ್ಲುತ್ತೇವೆ ಎಂಬ ಮಾತು ಶಾಲೆಗಳಿಂದ ಬಂದರೆ ಶಾಲೆಯ ಅಸ್ತಿತ್ವಕ್ಕಾಗಿ ನಾವು ಇಷ್ಟು ಶುಲ್ಕ ಕೊಡಲು ಸಿದ್ದ ಎಂದು ಪೋಷಕರು ಘೋಷಿಸಿದರೆ ಆಗ ಸಮಸ್ಯೆಗೆ ಪರಿಹಾರ ಸರಳವಾಗುವುದು.

ಇದನ್ನೂ ಓದಿ: ಮೋದಿ ಸರ್ಕಾರದ ಭರ್ಜರಿ ತಯಾರಿ: ನಿಮ್ಮೂರ ಅಂಗನವಾಡಿ, ಶಾಲೆ, ಪಂಚಾಯ್ತಿಯಲ್ಲೂ ಸಿಗಲಿದೆ ಕರೋನಾ ಲಸಿಕೆ

ಅನೇಕ ಶಾಲೆಗಳಲ್ಲಿ (Schools) ಪೋಷಕರಿಗೆ ಗೇಟಿನ ಒಳಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ಕೇಳಿ ಬಂದಿದೆ. ಆಗ ಸಹಜವಾಗಿ ಪೋಷಕರು ಗೇಟಿನ ಆಚೆ ನಿಂತು ಘೋಷಣೆ ಕೂಗುವ ಪರಿಸ್ಥಿತಿ ಬಂದೊದಗುತ್ತದೆ. ಈ ವಾರ ಬೆಂಗಳೂರಿನಲ್ಲಿ ಖಾಸಗಿ ಶಾಲೆಗಳ ಸಂಘಟನೆಗಳು ಪ್ರತಿಭಟನೆ ಮಾಡಿವೆ.‌‌ ಪೋಷಕರು ಸಹ ಪ್ರತಿಭಟನೆ ಮಾಡಿದ್ದಾರೆ. ಖಾಸಗಿ ಶಾಲೆಗಳು ಮತ್ತು ಪೋಷಕರ ನಡುವಿನ ಈ ಸಂಘರ್ಷದಲ್ಲಿ ಮಕ್ಕಳ ಪರಿಸ್ಥಿತಿ ಬಗ್ಗೆ ನಾವು ಯೋಚಿಸಬೇಕು. ಈ ಪರಿಸ್ಥಿತಿಯಲ್ಲಿ ಇಬ್ಬರಿಗೂ ಹಿತಕರವಾದ ಪರಿಹಾರ ಹುಡುಕುವ ಜವಾಬ್ದಾರಿ ನನ್ನ ಪಾಲಿಗೆ ಬಂದಿದೆ ಇದು ಬಹಳ ಕಷ್ಟ ಸಹ.

ಪೋಷಕರು ಖಾಸಗಿ ಶಾಲಾ ಶಿಕ್ಷಕರ ಪರಿಸ್ಥಿತಿ ನನಗೆ ಅರ್ಥವಾಗಿದೆ. ಆರ್ಥಿಕವಾಗಿ ಶಕ್ತಿವಂತರಾಗಿ ರವರು ಮಕ್ಕಳ ಶುಲ್ಕ ಪಾವತಿ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಕೋವಿಡ್-19ರ ನೆಪ ಮುಂದಿಡುತ್ತಿರುವ ಪ್ರಸಂಗಗಳು ನಡೆಯುತ್ತಿವೆ.‌ ಶ್ರೀಮಂತ ಶಾಲೆಗಳನ್ನು ಹೊರತು ಪಡಿಸಿ ಬಜೆಟ್ ಶಾಲೆಗಳೆಂದು ಕರೆಯಲ್ಪಡುವ ಮಧ್ಯಮ ದರ್ಜೆ ಶಾಲೆಗಳು ಎದುರಿಸುತ್ತಿರುವ ಕಷ್ಟ ಅಪಾರ.

ಮಧ್ಯಪ್ರದೇಶದಲ್ಲಿ ಈ ವಾರದಿಂದಲೇ ಶಾಲೆ ತೆರೆಯಲು ನಡೆದಿದೆ ಸಿದ್ಧತೆ
 
ಕೋವಿಡ್-19 (Covid 19) ಪ್ರಾರಂಭ ಆದಾಗಿನಿಂದಲೂ ನಾನು ಪೋಷಕರ ಪರವಾಗಿ ಕ್ರಮ ಕೈಗೊಂಡಿದ್ದೇನೆ. ಪೋಷಕರ ಪರಿಸ್ಥಿತಿಯನ್ನು ಶಾಲೆಗಳು ಅರ್ಥಮಾಡಿಕೊಳ್ಳಬೇಕು. ತಮ್ಮ ಶಾಲೆಗಳ ಶಿಕ್ಷಕರ ಜೀವನ ನಿರ್ವಹಣೆಯ ಕುರಿತು ಪೋಷಕರು ಯೋಚಿಸಬೇಕು. ಇಂದು ಈ ಮಹಾಮಾರಿಯ ಕಾರಣ ಪೋಷಕರು ಮತ್ತು ಖಾಸಗಿ ಶಾಲೆಗಳ ನಡುವೆ ಉಂಟಾಗಿರುವ ಅಪನಂಬಿಕೆಯನ್ನು ದೂರ ಮಾಡುವುದು ಒಂದು ದೊಡ್ಡ ಸವಾಲು.‌‌ ಈ ಸವಾಲನ್ನು ಎದುರಿಸುವಲ್ಲಿ ಪೋಷಕರು ಮತ್ತು ಖಾಸಗಿ ಶಾಲಾ ವ್ಯವಸ್ಥಾಪಕ ಮಂಡಳಿಯವರು ಇಬ್ಬರೂ ಆರೋಗ್ಯಕರ ಸಹಕಾರ ನೀಡಬೇಕೆಂದು ನನ್ನ ಮನವಿ.

ಇದನ್ನೂ ಓದಿ: ಕರೋನಾವೈರಸ್ ನಡುವೆಯೂ ಈ ರಾಜ್ಯದಲ್ಲಿ ಜನವರಿ 1ರಿಂದ ತೆರೆಯಲಿವೆ ಶಾಲೆಗಳು

ಈ ಮೂಲಕ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ದುಬಾರಿ ಶುಲ್ಕ ಪಾವತಿಸುವ ವಿಷಯಕ್ಕೆ ಸಂಬಂಧಿಸಿದಂತೆ ಉಂಟಾಗಿರುವ ದುಬಾರಿ ಸಮಸ್ಯೆಯಿಂದ ನಯವಾಗಿ ಜಾರಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ. ಸರ್ಕಾರ ಇಬ್ಬರೂ ಮಾತನಾಡಲು ವೇದಿಕೆ ಒದಗಿಸಬೇಕು. ಮತ್ತು ಸೂಕ್ತ ಸಲಹೆ ಸೂಚನೆ ನೀಡಿ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News