/kannada/photo-gallery/this-south-star-has-helped-more-than-500-families-these-are-the-netizens-who-are-the-real-heroes-221337 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!!  ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 500ಕ್ಕೂ ಹೆಚ್ಚು ಕುಟುಂಬಗಳಿಗೆ ನೆರವಾಗಿದ್ದಾರೆ ಈ ಸೌತ್ ಸ್ಟಾರ್!! ರಿಯಲ್ ಹೀರೋ ಇವರೇ ಎಂದ ನೆಟ್ಟಿಗರು 221337

ಕಲಬುರ್ಗಿ: ಅತಿ ಹೆಚ್ಚು ಬಡವರು, ಗುಳೆ ಹೋಗುವವರು ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚಾಗಿದ್ದಾರೆ. ಹೀಗಾಗಿ ಪ್ರದೇಶದ ಅಭಿವೃದ್ಧಿಗೆ ನಮ್ಮ ಸರ್ಕಾರ ವಿಶೇಷ ಒತ್ತು ನೀಡಿದೆ ಎಂದು ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿಗಳಾದ ಗೋವಿಂದ  ಎಂ‌ ಕಾರಜೋಳ (Govind M Karajola) ಹೇಳಿದರು.

ಕಲಬುರಗಿಯಲ್ಲಿ ಇಂದು ನಡೆದ ಕಲ್ಯಾಣ ಕರ್ನಾಟಕ (Kalyana Karnataka) ಉತ್ಸವದಲ್ಲಿ ಮಾತನಾಡಿದ ಅವರು, ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ಹಿಂದಿನ ಅವಧಿಯಲ್ಲಿ ಕಲಬುರ್ಗಿಯಲ್ಲಿ ಸಂಪುಟ ಸಭೆ ನಡೆಸಿ ಈ ಭಾಗದ ಯೋಜನೆಗಳಿಗೆ ಅನುದಾನ ನೀಡಿದ್ದರು. ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ ಹಿಂದೆ ನಾಮಕರಣ ಮಾಡಿದ್ದಾರೆ. ಅವರು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ ಎಂದು ಬಣ್ಣಿಸಿದರು.

ಶಿಕ್ಷಣ, ಧರ್ಮ ಸಂಸ್ಕೃತಿ ಉಳುವಿಗೆ ಮಠ, ಆಶ್ರಮಗಳ ಪರಿಶ್ರಮ ಅಪಾರ: ಡಿಸಿಎಂ ಗೋವಿಂದ ಕಾರಜೋಳ

ಸಮಾಜ ಕಲ್ಯಾಣ ಇಲಾಖೆಯಿಂದ ಈ ಭಾಗದಲ್ಲಿ ₹30 ಕೋಟಿ ವೆಚ್ಚದಲ್ಲಿ ವಸತಿ ನಿಲಯ ನಿರ್ಮಿಸಿದ್ದು, ಕೆಲವೊಂದು ಪೂರ್ಣಗೊಂಡಿವೆ. ಅವುಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಮುಖ್ಯಮಂತ್ರಿ ನೆರವೇರಿಸಿದರು ಎಂದರು.

ಕಳೆದ ವರ್ಷ ರಾಜ್ಯದಲ್ಲಿ ಬರ, ನೆರೆ ಮತ್ತು ಪ್ರವಾಹದ ಸಂಕಷ್ಟ ಇತ್ತು. ಈ ವರ್ಷ ನೆರೆ ಮತ್ತು ಕೊರೊನಾ ಸಂಕಷ್ಟ ಎದುರಾಗಿದೆ. ಈ ಸಂಕಷ್ಟಗಳ ಮಧ್ಯೆಯೂ ನಮ್ಮ ಸರ್ಕಾರ ಅಭಿವೃದ್ಧಿಗೆ ಒತ್ತು ನೀಡುತ್ತಿದೆ ಎಂದು ಹೇಳಿದರು.

ಸಾವಯವ ಕೃಷಿಗೆ ಆದ್ಯತೆ ನೀಡಲು ಡಿಸಿಎಂ ಗೋವಿಂದ ಎಂ ಕಾರಜೋಳ ಕರೆ

ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. ಈ ಭಾಗದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

Section: 
English Title: 
Emphasis on the development of welfare Karnataka: Govinda Karajola
News Source: 
Home Title: 

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು: ಗೋವಿಂದ ಕಾರಜೋಳ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು: ಗೋವಿಂದ ಕಾರಜೋಳ
Yes
Is Blog?: 
No
Tags: 
Facebook Instant Article: 
Yes
Highlights: 

ಗುಲಾಮಗಿರಿಯ ಸಂಕೇತ ಕಳಚಲು ಈ ಭಾಗಕ್ಕೆ ಕಲ್ಯಾಣ ಕರ್ನಾಟಕ ಎಂದು ವರ್ಷದ ಹಿಂದೆ ನಾಮಕರಣ

ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕನಸುಗಾರ ಯಡಿಯೂರಪ್ಪ ಎಂದು ಬಣ್ಣಿಸಿದ ಗೋವಿಂದ  ಎಂ‌ ಕಾರಜೋಳ 

ಕಲ್ಯಾಣ ಕರ್ನಾಟಕ ಪ್ರದೇಶ ಸೇರಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರ ಶ್ರಮಿಸುತ್ತಿದೆ. 

Mobile Title: 
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಒತ್ತು: ಗೋವಿಂದ ಕಾರಜೋಳ
Publish Later: 
Yes
Publish At: 
Thursday, September 17, 2020 - 11:31
Created By: 
Yashaswini V
Updated By: 
Yashaswini V