ಬೆಂಗಳೂರು: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ. ಅರಣ್ಯ ಹುತಾತ್ಮರು ಮನುಕುಲದ, ಜೀವ ಸಂಕುಲದ ಸಂರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ (National Forest Martyrs Day) ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರಣ್ಯ ಭವನದಲ್ಲಿನ ಹುತತ್ಮರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಅನುಪಾತಕ್ಕೆ ತಕ್ಕಷ್ಟು ಅರಣ್ಯವಿಲ್ಲ. ಆದ್ದರಿಂದ ಅರಣ್ಯೀಕರಣ ಹೆಚ್ಚಾಗಬೇಕು. ಕಾಡು ಮತ್ತು ವನ್ಯ ಪ್ರಾಣಿ ಸಂಪತ್ತಿನ ರಕ್ಷಣೆ ಕೇವಲ ಅರಣ್ಯಾಧಿಕಾರಿಗಳು ಮತ್ತು ಸಿಬ್ಬಂದಿಯ ಕರ್ತವ್ಯ ಎಂದರೆ ನಾವು ನಮ್ಮ ಹೊಣೆಗಾರಿಕೆಯಿಂದ ತಪ್ಪಿಸಿಕೊಂಡಂತಾಗುತ್ತದೆ ಎಂದರು.
ಇದನ್ನೂ ಓದಿ- ಪುಷ್ಪ ರಾಜ್ ಹಾಡಿಗೆ ರೀಲ್ಸ್ ಮಾಡಿ ಶೇರ್ ಮಾಡಿದ ವಸತಿ ಸಚಿವ ಜಮೀರ್ ಅಹ್ಮದ್ ಖಾನ್: ವೈರಲ್ ವಿಡಿಯೋಗೆ ನೆಟ್ಟಿಗರು ಏನಂದ್ರು?
ರಾಜ್ಯದಲ್ಲಿ ಆನೆ, ಹುಲಿಗಳ ಸಂಖ್ಯೆ ಹೆಚ್ಚುತ್ತಿರುವುದು ಸಂತೋಷದ ಸಂಗತಿ. ಆದರೆ ಪ್ರಾಣಿ-ಮನುಷ್ಯ ಸಂಘರ್ಷ ತಪ್ಪಿಸಿ ಮಾನವ, ಪ್ರಾಣಿ ಸಂಪತ್ತನ್ನು ಕಾಪಾಡುವ ದಿಕ್ಕಿನಲ್ಲಿ ಇನ್ನಷ್ಟು ಪರಿಣಾಮಕಾರಿ ಕೆಲಸಗಳು ಆಗಬೇಕಿದೆ. ಇದಕ್ಕಾಗಿ ಲಭ್ಯ ಇರುವ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.
ಅರಣ್ಯ ಹುತಾತ್ಮರ ಕುಟುಂಬಕ್ಕೆ ನೀಡುವ ಪರಿಹಾರ ಮೊತ್ತವನ್ನು 30 ರಿಂದ 50 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಅರಣ್ಯ ಹುತಾತ್ಮರು ಮನುಕುಲದ ಸಂರಕ್ಷಕರು. ಇವರ ತ್ಯಾಗ ಅರಣ್ಯ ಸಂರಕ್ಷಣೆಗೆ ಸ್ಫೂರ್ಥಿಯಾಗಲಿ ಎಂದು ಹಾರೈಸಿದರು.
ಇದನ್ನೂ ಓದಿ- ಅಭಿವೃದ್ಧಿ ಪತ್ರಿಕೋದ್ಯಮ ಮತ್ತು ಪರಿಸರ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಆಹ್ವಾನ
ಅರಣ್ಯ ಮತ್ತು ಜೀವಶಾಸ್ತ್ರ ಇಲಾಖೆಯ ಸಚಿವ ಈಶ್ವರ್ ಖಂಡ್ರೆ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಹುತಾತ್ಮರ ಕುಟುಂಬದ ಸದಸ್ಯರು ಮತ್ತು ಬಂಧುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Facebook Link - https://bit.ly/3Hhqmcj
Youtube Link - https://www.youtube.com/watch?v=kr-YIH866cM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.