ಕಾಂಗ್ರೆಸ್ ಫೇಲ್ ಆಗುವ ಪಕ್ಷ - ಬೇಕಾಬಿಟ್ಟಿ ಪಕ್ಷ :ಬಸವರಾಜ ಬೊಮ್ಮಾಯಿ ಲೇವಡಿ

ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು.ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.   

Written by - Ranjitha R K | Last Updated : Apr 18, 2024, 02:26 PM IST
  • ಬಿ.ವೈ.ರಾಘವೇಂದ್ರ ತಂದೆಗೆ ತಕ್ಕ ಮಗ: ಬಸವರಾಜ ಬೊಮ್ಮಾಯಿ
  • ಮೋದಿ ಋಣ ತೀರಿಸಬೇಕು ಮತದಾರರಿಗೆ ಬೊಮ್ಮಾಯಿ ಕರೆ
  • ಕಾಂಗ್ರೆಸ್ ಫೇಲ್ ಆಗುವ ಪಕ್ಷ - ಬೊಮ್ಮಾಯಿ
ಕಾಂಗ್ರೆಸ್ ಫೇಲ್ ಆಗುವ ಪಕ್ಷ - ಬೇಕಾಬಿಟ್ಟಿ ಪಕ್ಷ :ಬಸವರಾಜ ಬೊಮ್ಮಾಯಿ ಲೇವಡಿ title=

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ತಂದೆಗೆ ತಕ್ಕ ಮಗ. ಜಗ ಮೆಚ್ಚಿದ ಮಗ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ. ಬೊಮ್ಮಾಯಿ ಹೇಳಿದ್ದಾರೆ. 

ಬಿ.ವೈ ರಾಘವೇಂದ್ರ ಅವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಬೃಹತ್ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು,ಕಾಂಗ್ರೆಸ್ ನವರು ಹೊಸ ಗ್ಯಾರೆಂಟಿ ಗಳನ್ನು ಘೊಷಣೆ ಮಾಡಿದ್ದಾರೆ.ಪ್ರತಿ ಮನೆ ಮಹಿಳೆಯರಿಗೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳುತ್ತಿದ್ದಾರೆ.ಲೋಕಸಭೆಯಲ್ಲಿ 543 ಸ್ಥಾನಗಳಿವೆ. ಸಂಸತ್ತಿನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು.ಕಾಂಗ್ರೆಸ್ ಲೋಕಸಭೆಗೆ ಸ್ಪರ್ಧೆ ಮಾಡಿರುವುದೇ 230 ಸ್ಥಾನಗಳಿಗೆ. ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದಿದ್ದಾರೆ. ಪರೀಕ್ಷೆಯಲ್ಲಿ ಪಾಸ್ ಆಗಲು ಕನಿಷ್ಠ 35 ಅಂಕಗಳು ಬೇಕು. ಆದರೆ, ಇವರು ಪರೀಕ್ಷೆ ಬರೆದಿರುವುದೇ 20 ಅಂಕಗಳಿಗೆ. ಹಾಗಿರುವಾಗ ಪಾಸ್ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ : ರಾಹುಲ್ ಗಾಂಧಿ ಮುಸ್ಲಿಂ ಲೀಗ್ ಧ್ವಜ ಹಿಡಿದು ಹಿಂದೂ ವಿರೋಧಿ ಕೃತ್ಯಗಳಿಗೆ ಕುಮ್ಮಕ್ಕು ನೀಡಿದ್ದಾರೆ: ಪ್ರಹ್ಲಾದ ಜೋಶಿ ಕಿಡಿ

ಪ್ರಧಾನಿ ನರೇಂದ್ರ ಮೋದಿಯವರು ಕೊವಿಡ್ ಸಂದರ್ಭದಲ್ಲಿ ದೇಶದ ನೂರಾ ಮೂವತ್ತು ಕೋಟಿ ಜನರಿಗೆ ಮೂರು ಬಾರಿ ಲಸಿಕೆ ‌ಕೊಡಿಸಿ ಎಲ್ಲರ ಜೀವ ಉಳಿಸಿದ್ದಾರೆ. ಕೊವಿಡ್ ಸಂದರ್ಭದಲ್ಲಿ 10 ಕೆಜಿ ಅಕ್ಕಿ ಕೊಟ್ಟಿದ್ದಾರೆ. ಈಗಲೂ  ಐದು ಕೆಜಿ ಅಕ್ಕಿಯನ್ನು ನರೇಂದ್ರ ಮೋದಿಯವರು ಉಚಿತವಾಗಿ ನೀಡುತ್ತಿದ್ದಾರೆ. ಪ್ರತಿಯೊಬ್ಬರ ಮನೆಗಳಿಗೂ ಗಂಗೆ ರೂಪದಲ್ಲಿ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ನಳದ ನೀರು ಕೊಡುತ್ತಿದ್ದಾರೆ. ಎಲ್ಲರಿಗೂ ಅನ್ನ, ನೀರು, ಲಸಿಕೆ ಕೊಟ್ಟು  ಜೀವ ಉಳಿಸಿದ ನರೇಂದ್ರ ಮೋದಿಯವರ ಋಣ ತೀರಿಸಬೇಕು ಎದ್ನು ಮತದಾರರಲ್ಲಿ ಮನವಿ ಮಾಡಿದ್ದಾರೆ. 

ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಎಚ್. ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಸಿ.ಟಿ.ರವಿ, ಬೈರತಿ ಬಸವರಾಜ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಶಾಸಕರಾದ ಶಾರದಾ ಪೂರ್ಯಾ ನಾಯಕ್ ಹಾಗೂ ಮತ್ತಿತರ ನಾಯಕರು ಹಾಜರಿದ್ದರು.

ಇದನ್ನೂ ಓದಿ : ರಾಜ್ಯದಲ್ಲಿ ಮುಂದಿನ ಮೂರು ದಿನ ಸುರಿಯಲಿದೆ ಕುಂಭದ್ರೋಣ ಮಳೆ ! ಈ ಜಿಲ್ಲೆಗಳನ್ನು ಬಿಡದೇ ಕಾಡಲಿದ್ದಾನೆ ಮಳೆರಾಯ !

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News