ರಾಜ್ಯದ ಜನತೆಗೆ ಕರೆಂಟ್ ಶಾಕ್!; ಸರ್ಕಾರಕ್ಕೆ ಹಣ ಮಾಡುವುದೇ ದಂಧೆ ಆಗಿದೆ ಎಂದ ಎಚ್‌ಡಿಕೆ

ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರ್ಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ ಎಂದು ಎಚ್‍ಡಿಕೆ ಆಗ್ರಹಿಸಿದ್ದಾರೆ.  

Written by - Zee Kannada News Desk | Last Updated : Apr 4, 2022, 06:03 PM IST
  • ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ ವಿದ್ಯುತ್ ಪೂರೈಕೆ ಮಾಡದ ಸರ್ಕಾರದಿಂದ ವಿದ್ಯುತ್ ದರ ಏರಿಕೆ
  • ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ದರ ಏರಿಕೆ ಜೊತೆಗೆ ಈಗ ಕರೆಂಟ್ ಶಾಕ್ ಅನ್ನೂ ಕೊಟ್ಟಿದೆ
  • ಆತ್ಮಸಾಕ್ಷಿ ಇಲ್ಲದ ಸರ್ಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ ಎಂದು ಕಿಡಿಕಾರಿದ ಕುಮಾರಸ್ವಾಮಿ
ರಾಜ್ಯದ ಜನತೆಗೆ ಕರೆಂಟ್ ಶಾಕ್!; ಸರ್ಕಾರಕ್ಕೆ ಹಣ ಮಾಡುವುದೇ ದಂಧೆ ಆಗಿದೆ ಎಂದ ಎಚ್‌ಡಿಕೆ title=
ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ

ಬೆಂಗಳೂರು: ಅಗತ್ಯವಸ್ತುಗಳ ಬೆಲೆ ಗಗಮುಖಿಯಾಗಿದೆ. ಇದರ ಜೊತೆಗೆ ನಿರಂತರವಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ(Petrol-Diesel price Hike)ಯಾಗುತ್ತಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದೇ ವಿಚಾರವಾಗಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ(HD Kumaraswamy) ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

#ಜನರಿಗೆ_ವಿದ್ಯುತ್_ಬರೆ #ಬಡವರ_ಮೇಲೆ_ಬಿಜೆಪಿ_ಬೆಲೆ_ಏರಿಕೆ_ಸಮರ ಹ್ಯಾಶ್ ಟ್ಯಾಗ್ ಬಳಸಿ ಟ್ವೀಟ್ ಮಾಡಿರುವ ಅವರು, ‘ಬಿಜೆಪಿ ಬೆಲೆ ಏರಿಕೆಯ ಮಾರಣಕಾಂಡ ಮುಂದುವರೆದಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ದರ ಏರಿಕೆಯ ಜೊತೆ ಜೊತೆಗೇ ಈಗ ಕರೆಂಟ್ ಶಾಕ್(Electricity Bill) ಅನ್ನೂ ಕೊಟ್ಟಿದೆ. ಆತ್ಮಸಾಕ್ಷಿ ಇಲ್ಲದ ಸರ್ಕಾರಕ್ಕೆ ಹಣ ಮಾಡುವುದೇ ದಂಧೆ ಆಗಿಬಿಟ್ಟಿದೆ’ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ: Electricity Bill: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರ ಜೇಬಿಗೆ ಮತ್ತಷ್ಟು ಹೊರೆ

‘ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಮಾಡಿ ಸರಿಯಾಗಿ ವಿದ್ಯುತ್(POWER)ಪೂರೈಕೆ ಮಾಡದ ಸರ್ಕಾರ ಪ್ರತಿ ಯೂನಿಟ್ ಗೆ 35 ಪೈಸೆ ಹೆಚ್ಚಳ ಮಾಡಿದೆ. ಗುಣಮಟ್ಟದ ವಿದ್ಯುತ್ ಕೊಡಲು ಕೈಲಾಗದ ಸರ್ಕಾರವು ಬೆಲೆ ಏರಿಕೆಯಲ್ಲಿ ಮಾತ್ರ ರಾಕೆಟ್ ವೇಗದಲ್ಲಿದೆ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ಬಡವರು ಮನೆ ಕಟ್ಟುವ ಹಾಗಿಲ್ಲ, ಹೊಟ್ಟೆ ತುಂಬಾ ಊಟ ಮಾಡುವಂತಿಲ್ಲ, ಬಡವ ಈಗ ಬೆಳಕಲ್ಲಿಯೂ ಇರುವಂತಿಲ್ಲ. ಬಡವರ ವಿರುದ್ಧ ಬಿಜೆಪಿ ಬೆಲೆ ಏರಿಕೆ ಸಮರ ಹೂಡಿದೆಯಾ ಎನ್ನುವ ಅನುಮಾನ ನನ್ನದು. ರೈತರು ತಾವು ಬೆಳೆದ ಬೆಳೆಗೆ ನ್ಯಾಯಯುತ ಬೆಲೆ ಇಲ್ಲದೆ ಬೀದಿಯಲ್ಲಿದ್ದಾರೆ. ರಾಗಿ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ. ಜನರನ್ನು ಬೆಲೆ ಏರಿಕೆ(Price Hike) ಬಿಸಿಗೆ ಸಿಲುಕಿಸಿ ಬೆಲೆ ಬಾರುಕೋಲು ಅಭಿಯಾನವನ್ನು ಬಿಜೆಪಿ ಸರ್ಕಾರ ಶುರು ಮಾಡಿದೆ. ಲೋಡ್ ಶೆಡ್ಡಿಂಗ್ ತೆಗೆದು ಗುಣಮಟ್ಟದ ವಿದ್ಯುತ್ ಪೂರೈಕೆ ಸರ್ಕಾರದ ಕರ್ತವ್ಯ’ವೆಂದು ಎಚ್‍ಡಿಕೆ ಟೀಕಾಪ್ರಹಾರ ನಡೆಸಿದ್ದಾರೆ.

ಇದನ್ನೂ ಓದಿ: ಅಗ್ಗವಾಗಲಿದೆ ಪೆಟ್ರೋಲ್, ಡಿಸೇಲ್ ಬೆಲೆ, ಹಣಕಾಸು ಸಚಿವರು ಹೇಳಿದ್ದೇನು ?

‘ವಿದ್ಯುತ್ ಕೊರತೆಯೇ ಇಲ್ಲ ಎನ್ನುವ ಸರ್ಕಾರ(BJP Government), ಈಗ ದರ ಏರಿಕೆ ಮಾಡಿದ್ದು ಏಕೆ? ಜನರ ಮೇಲೆ ಭಾರ ಹೊರೆಸಿ ವಿದ್ಯುತ್ ಅನ್ನು ಸರ್ಕಾರ ಕಳ್ಳ ಮಾರ್ಗದಲ್ಲಿ ಮಾರಿಕೊಳ್ಳುತ್ತಿದೆಯಾ? ಇಲ್ಲ ಎನ್ನುವುದಾದರೆ ದರ ಏರಿಕೆ ಹಿಂಪಡೆಯಲಿ’ ಎಂದು ಆಗ್ರಹಿಸಿದ್ದಾರೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News