ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ಸಾವಿನ ಮನೆಯಲ್ಲಿ ಸಂಭ್ರಮಿಸುವ ವಿಕೃತಿ ಬೇಡವೆಂದು ನಾನು ಹೇಳಿದ್ದೆ. ಪಾಪ.. ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿಯಲ್ಲೇ ಜ್ಞಾನೋದಯವಾಗಿದೆ. ‘ಸಾವುಗಳನ್ನೇ ಸಾಧನೆʼಗಳನ್ನಾಗಿ ಮಾಡಿಕೊಂಡು, ಅವುಗಳನ್ನೇ ಅಧಿಕಾರದ ಏಣಿ ಮಾಡಿಕೊಂಡವರಿಗೆ ಅಂತೂ ಪಾಪಪ್ರಜ್ಞೆ ಕಾಡಿತಲ್ಲ ಎನ್ನುವ ಸಮಾಧಾನ, ಸರ್ಕಾರ ಮುಖ ಉಳಿಸಿಕೊಂಡಿದೆ’ ಎಂದು ಹೇಳಿದ್ದಾರೆ.
ಸರಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ʼಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರಕಾರದ ವರ್ಷದ ಸಾಧನೆ!! 2/8
— H D Kumaraswamy (@hd_kumaraswamy) July 28, 2022
ಇದನ್ನೂ ಓದಿ: ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಮಾಜಿ ಸಚಿವ ಟಿ.ಬಿ ಜಯಚಂದ್ರಗೆ ಶಾಕ್!
‘ಸರ್ಕಾರದ ಕಾಳಜಿಯಲ್ಲಿ ಸಾಚಾತನವಿಲ್ಲ. ‘ಸಾವಿನಲ್ಲೂ ಸಿಂಪಥಿʼ ಗಿಟ್ಟಿಸುವ ವ್ಯರ್ಥ ಪ್ರಯತ್ನ ವಾಕರಿಕೆ ತರಿಸುತ್ತದೆ. ಸಾಧನಾ ಸಮಾವೇಶ ನಿಂತಿತಲ್ಲ ಎನ್ನುವ ಹತಾಶೆ ಎದ್ದು ಕಾಣುತ್ತಿದೆ. ರಾಜ್ಯದಲ್ಲಿ ಸಾವುಗಳ ಮೆರವಣಿಗೆ ನಡೆಯುತ್ತಿರುವುದಷ್ಟೇ ಬಿಜೆಪಿ ಸರ್ಕಾರದ ವರ್ಷದ ಸಾಧನೆ!! ಜಾತಿ-ಧರ್ಮ, ಆಚಾರ-ವಿಚಾರ, ಆಹಾರ-ವ್ಯಾಪಾರ, ಉಡುಗೆ-ತೊಡುಗೆ ನೆಪದಲ್ಲಿ ರಾಜ್ಯವನ್ನು ಭಾವನಾತ್ಮಕವಾಗಿ ಛಿದ್ರ ಛಿದ್ರ ಮಾಡಿದ್ದಾ ಸಾಧನೆ? ತಿನ್ನುವ ಅನ್ನದಲ್ಲಿ, ಕಲಿಯುವ ಅಕ್ಷರದಲ್ಲಿ, ಉರಿಯುವ ಮನೆಯಲ್ಲಿ ‘ಮತಕ್ಕಾಗಿ ಕೋಮು ಗಳʼ ಇರಿಯುವುದಾ ಸಾಧನೆ? ಸಾಧನೆ ನೆಪದಲ್ಲಿ ನಲಿಯುವ ಮುನ್ನ ಕನಿಷ್ಠ ನಾಚುವ ಸೂಕ್ಷ್ಮತೆಯೂ ಇಲ್ಲವಲ್ಲ’ವೆಂದು ಕುಮಾರಸ್ವಾಮಿ ಕುಟುಕಿದ್ದಾರೆ.
ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ʼಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? 4/8
— H D Kumaraswamy (@hd_kumaraswamy) July 28, 2022
‘ಇನ್ನೆಷ್ಟು ಯುವಕರ ಕಗ್ಗೊಲೆ ಆಗಬೇಕು? ಅದೆಷ್ಟು ಬಡಮನೆಗಳ ದೀಪಗಳು ಆರಬೇಕು? ಮತ್ತೆಷ್ಟು ಹೆತ್ತ ಕರುಳುಗಳು ಕಣ್ಣೀರಿಡಬೇಕು? ಹರ್ಷ, ಚಂದ್ರು ತಾಯಿಂದರ ಆರ್ತನಾದ ಸರ್ಕಾರಕ್ಕೆ ಕೇಳಿಸಿದ್ದಿದ್ದರೆ ಪ್ರವೀಣ್ ನೆಟ್ಟಾರು ಅಮ್ಮನ ಆರ್ತನಾದ ಕೇಳುವ ಸ್ಥಿತಿ ಬರುತ್ತಿತ್ತಾ? ಕೊಲೆಯನ್ನೇ ತಡೆಯಲಾಗದೇ ಈಗ ‘ಕೃತಕ ಸಾಂತ್ವನʼ ಹೇಳಿದರೇನು ಪ್ರಯೋಜನ? ತಾಯಿಂದಿರ ಆರ್ತನಾದ ಸರ್ಕಾರದ ಕಿವಿಗೆ ಇಂಪಾದ ‘ನಾದʼದಂತೆ ಕೇಳುತ್ತಿವೆಯಾ? ಬಿಜೆಪಿಯ ‘ಮತಕ್ಕಾಗಿ ಮರಣಮೃದಂಗʼದ ಆಳ-ಅಗಲ ಈಗ ಜನರಿಗೂ ಅರ್ಥವಾಗುತ್ತಿದೆ. ಬಿಜೆಪಿ ಅಧ್ಯಕ್ಷರು ಸೇರಿ ಸಚಿವರಿಬ್ಬರಿಗೆ ಎದುರಾದ ಪ್ರತಿರೋಧವೇ ಜನರ ತಾಳ್ಮೆ ಕಟ್ಟೆಯೊಡೆದಿದೆ ಎನ್ನುವುದಕ್ಕೆ ಸಾಕ್ಷಿ. ಕರಾವಳಿ ಕೆರಳಿದೆ. ಕರ್ನಾಟಕ ಕೆರಳುವುದು ಬಾಕಿ ಇದೆ’ ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಸಾವಿನ ಮನೆಯಲ್ಲಿ ಸಂಭ್ರಮ ಬೇಕಾ?: ಹೆಚ್.ಡಿ.ಕುಮಾರಸ್ವಾಮಿ
ಏನು ಸಾಧನೆ ಅಂತ ಸರಕಾರ ಜನರಿಗೆ ಹೇಳುತ್ತದೆ?
*40% ಕಮಿಷನ್
*ಕೋವಿಡ್ ಹೆಸರಿನಲ್ಲಿ ಕೊಳ್ಳೆ
*ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್ ಕೋಟಾ
*ಪಿಎಸ್ಐ ನೇಮಕದಲ್ಲಿ ಕಾಸಿನಾಟ
*ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರಕಾರ ಮಾಡಿದ್ದೇನು? 6/8
— H D Kumaraswamy (@hd_kumaraswamy) July 28, 2022
‘40% ಕಮಿಷನ್, ಕೋವಿಡ್ ಹೆಸರಿನಲ್ಲಿ ಕೊಳ್ಳೆ, ಅಧಿಕಾರಿಗಳ ವರ್ಗದಲ್ಲಿ ಪೇಮೆಂಟ್ ಕೋಟಾ, ಪಿಎಸ್ಐ ನೇಮಕದಲ್ಲಿ ಕಾಸಿನಾಟ, ಸಹಾಯಕ ಪ್ರಾಧ್ಯಾಕರ ನೇಮಕದಲ್ಲೂ ನೋಟಿನಾಟ. ಏನು ಸಾಧನೆ ಅಂತ ಸರ್ಕಾರ ಜನರಿಗೆ ಹೇಳುತ್ತದೆ? ಜೇಬು ತುಂಬಿಸಿಕೊಳ್ಳುವ ಧನದಾಟ ಬಿಟ್ಟರೆ, ಜನರಿಗೆ ಸರ್ಕಾರ ಮಾಡಿದ್ದೇನು? ನಡುರಸ್ತೆಯಲ್ಲಿ ಹರಿದ ಪ್ರವೀಣ್ ನೆಟ್ಟಾರು ನೆತ್ತರು, ನಾಡಿನ ಆತ್ಮಸಾಕ್ಷಿಯನ್ನು ಕಲಕಿದೆ. ಒಂದೇ ಊರಿನಲ್ಲಿ ಎಂಟೇ ದಿನದಲ್ಲಿ 2 ಕೊಲೆ ನಡೆದಿವೆ ಎಂದರೆ ಈ ಸರ್ಕಾರ ಬದುಕಿದೆಯಾ? ಸತ್ತಿದೆಯಾ? ಸತ್ತ ಸರ್ಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ. ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ‘ನರಹಂತಕ ರಾಜಕಾರಣʼ ನಿಲ್ಲಲಿ’ ಎಂದು ಕುಮಾರಸ್ವಾಮಿ ಕುಟುಕಿದ್ದಾರೆ.
ಸತ್ತ ಸರಕಾರದ ಸಾಹುಕಾರನಿಗೆ ಸಂಭ್ರಮದ ಚಿಂತೆ, ಆಗದ ಸಾಧನೆ ಹೇಳಿಕೊಳ್ಳುವ ಅನಿವಾರ್ಯತೆ..
ಇನ್ನಾದರೂ ಕಂಡೋರ ಮಕ್ಕಳನ್ನು ಸಾವಿನ ದವಡೆಗೆ ನೂಕಿ ಮತ ಫಸಲು ತೆಗೆಯುವ ʼನರಹಂತಕ ರಾಜಕಾರಣʼ ನಿಲ್ಲಲಿ. 8/8#ಕರಾವಳಿ_ಕೆರಳಿದೆ— H D Kumaraswamy (@hd_kumaraswamy) July 28, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.