ಬೆಂಗಳೂರು: ನಾವು ಪಾದಯಾತ್ರೆ ಮಾಡಿದರೆ ಬಿಜೆಪಿ ಸರ್ಕಾರ ಜನರೆದುರು ಬೆತ್ತಲಾಗಲಿದೆ ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ. ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಜ.9ರಿಂದ ಹಮ್ಮಿಕೊಂಡಿರುವ ಪಾದಯಾತ್ರೆ ವಿಚಾರವಾಗಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
‘ನಾವು ಪಾದಯಾತ್ರೆ ಮಾಡಬಾರದು ಎಂದು ಕೊವಿಡ್(COVID-19) ನಿರ್ಬಂಧಗಳೆಂಬ ಷಡ್ಯಂತ್ರ ರೂಪಿಸಿದ್ದಾರೆ. ಆದರೂ ನಾವು ಸರ್ಕಾರದ ನಿಯಮಗಳನ್ನು ಗೌರವಿಸಿ, ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಪಾದಯಾತ್ರೆ ಮಾಡುತ್ತೇವೆ. ನಮ್ಮ ಪಾದಯಾತ್ರೆಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಕನಿಷ್ಠ ಅಂತರ ಕಾಪಾಡಿಕೊಳ್ಳುವುದು, ಗ್ಲೌಸ್, ಸ್ಯಾನಿಟೈಸರ್ ಬಳಕೆ ಹೀಗೆ ಎಲ್ಲಾ ರೀತಿಯ ಕೊವಿಡ್ ಸುರಕ್ಷತಾ ಕ್ರಮಗಳನ್ನು ಅನುಸರಿಸುತ್ತಾರೆ’ ಅಂತಾ ಹೇಳಿದ್ದಾರೆ.
ನಾವು ಪಾದಯಾತ್ರೆ ಮಾಡಿದರೆ @BJP4Karnataka ಸರ್ಕಾರ ಜನರೆದುರು ಬೆತ್ತಲಾಗಲಿದೆ. ಹೀಗಾಗಿಯೇ ನಾವು ಪಾದಯಾತ್ರೆ ಮಾಡಬಾರದು ಎಂದು ಕೊವಿಡ್ ನಿರ್ಬಂಧಗಳೆಂಬ ಷಡ್ಯಂತ್ರ ರೂಪಿಸಿದ್ದಾರೆ.
ಆದರೂ ನಾವು ಸರ್ಕಾರದ ನಿಯಮಗಳನ್ನು ಗೌರವಿಸಿ, ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಪಾದಯಾತ್ರೆ ಮಾಡುತ್ತೇವೆ. 1/10#Mekedatu pic.twitter.com/w7xo9l2xhm— Siddaramaiah (@siddaramaiah) January 5, 2022
‘ಕೊರೊನಾ ಸೋಂಕು ತಡೆಗಟ್ಟುವುದೇ ರಾಜ್ಯ ಬಿಜೆಪಿ ಸರ್ಕಾರ(BJP Govt.)ದ ನಿಜವಾದ ಉದ್ದೇಶವಾಗಿದ್ದರೆ ಸಿಎಂ ಬಸವರಾಜ್ ಬೊಮ್ಮಾಯಿ ನಿನ್ನೆ ರಾಮನಗರದಲ್ಲಿ, ಇಂದು ನಾಗಮಂಗಲದಲ್ಲಿ ಸಾರ್ವಜನಿಕ ಸಮಾರಂಭಗಳಲ್ಲಿ ಭಾಗವಹಿಸುತ್ತಿದ್ದರೇ? ತಮ್ಮದೇ ಸರ್ಕಾರದ ನಿಯಮಗಳನ್ನು ಗೌರವಿಸದ ಮುಖ್ಯಮಂತ್ರಿಯನ್ನು ಬೇರೆ ಎಲ್ಲಾದರೂ ನೋಡಿದ್ದೀರ? ಇಂದು ಪ್ರಧಾನಿ ಮೋದಿ ಅವರು ಪಂಜಾಬ್ ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುವವರಿದ್ದರು, ರೈತರ ಪ್ರತಿಭಟನೆಯಿಂದಾಗಿ ಸಭೆ ರದ್ದಾಯಿತು. ಒಂದು ವೇಳೆ ಯಾವುದೇ ಅಡ್ಡಿ ಆಗದಿದ್ದರೆ ಅವರು ಸಭೆ ಮಾಡುತ್ತಿರಲಿಲ್ಲವೇ? ಬಿಜೆಪಿಯವರು ಪ್ರಚಾರ ಸಭೆ ಮಾಡಿದರೆ ಕೊರೊನಾ ಬರೋದಿಲ್ವಾ?’ ಅಂತಾ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಪ್ರಧಾನಿ ಮೋದಿಗೆ ಭದ್ರತಾ ಲೋಪ: ಪಂಜಾಬ್ ಸರ್ಕಾರ ಬರಖಾಸ್ತು ಮಾಡಲು ಸಿಎಂ ಬೊಮ್ಮಾಯಿ ಆಗ್ರಹ
ಕೊರೊನಾ ಮೂರನೇ ಅಲೆಯ ನಿರೀಕ್ಷೆ ಇದ್ದರೂ ಸರಿಯಾದ ತಪಾಸಣೆ ನಡೆಸದೆ, ಅಂತರರಾಷ್ಟ್ರೀಯ ವಿಮಾನ ಸಂಚಾರ ತಡೆಯದೆ, ಮಾಸ್ಕ್ ಬಳಕೆ ಕಟ್ಟುನಿಟ್ಟು ಮಾಡದೆ ಈಗ ವಿರೋಧ ಪಕ್ಷವೊಂದು ತನ್ನ ಜವಾಬ್ದಾರಿ ನಿರ್ವಹಿಸಲು ಹೊರಟಾಗ ದುರುದ್ದೇಶದಿಂದ ನಿರ್ಬಂಧಗಳನ್ನು ಹೇರಿರುವುದು ಖಂಡನೀಯ. 8/10#Mekedatu
— Siddaramaiah (@siddaramaiah) January 5, 2022
‘ರಾಜ್ಯದ ಯಾವೊಬ್ಬ ವ್ಯಕ್ತಿಗೂ ಕೊರೊನಾ(CoronaVirus) ಬರಬಾರದು ಎಂಬುದು ನಮ್ಮ ಆಶಯವೂ ಹೌದು. ಆದರೆ ಬಿಜೆಪಿ ಸರ್ಕಾರ ನಿಬಂಧನೆಗಳನ್ನು ಹೇರಿರುವ ಹಿಂದೆ ಬೇರೆಯೇ ಉದ್ದೇಶ ಇದೆ. ಅವರ ಈ ಷಡ್ಯಂತ್ರವನ್ನು ಬಯಲು ಮಾಡುತ್ತೇವೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮೇಕೆದಾಟು ಯೋಜನೆ ಜಾರಿಮಾಡಬಾರದು ಎಂದು ಪ್ರತಿಭಟನೆಗೆ ಕೂತಿರುವುದೇ ರಾಜ್ಯ ಮತ್ತು ಕೇಂದ್ರದ ಬಿಜೆಪಿ ನಾಯಕರ ಬೆಂಬಲದ ಮೇರೆಗೆ. ಬಿಜೆಪಿ ನಾಯಕರು ತಮಿಳುನಾಡಿನಲ್ಲಿ ತಮ್ಮ ಪಕ್ಷದ ಬಲವರ್ಧನೆಗೆ ರಾಜ್ಯದ ಹಿತಾಸಕ್ತಿ ಬಲಿಕೊಡಲು ಹೊರಟಿದ್ದಾರೆ’ ಅಂತಾ ಆರೋಪಿಸಿದ್ದಾರೆ.
‘ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಒಮ್ಮೆ ಮೇಕೆದಾಟು(Mekedatu Project Dispute) ವಿಚಾರ ಪ್ರಸ್ತಾಪ ಮಾಡಿದ್ದು ಬಿಟ್ಟರೆ ಬಿಜೆಪಿಯವರು ಈವರೆಗೆ ಎಲ್ಲಿಯೂ ಮೇಕೆದಾಟು ಬಗ್ಗೆ ಮಾತನಾಡಿಲ್ಲ. ಯೋಜನೆ ಅನುಷ್ಠಾನಕ್ಕೆ ಆಸಕ್ತಿ ತೋರಿಸಿಲ್ಲ. ಬಿಜೆಪಿ ಈ ಯೋಜನೆಯ ಬಗ್ಗೆ ತನ್ನ ನಿಲುವು ಏನೆಂದು ಮೊದಲು ಸ್ಪಷ್ಟಪಡಿಸಲಿ. ಬೆಂಗಳೂರು ನಗರದ ಶೇ.30ರಷ್ಟು ಜನರಿಗೆ ಈಗಲೂ ಕಾವೇರಿ ನೀರು ಸಿಗುತ್ತಿಲ್ಲ. ಸುಮಾರು ಎರಡೂವರೆ ಕೋಟಿ ಜನರಿಗೆ ಅನುಕೂಲವಾಗುವಂತ ಇಂತಹ ಮಹತ್ವದ ಯೋಜನೆ ಜಾರಿ ಮಾಡದೆ ಬಿಜೆಪಿ ಸರ್ಕಾರ ಕಾಲಾಹರಣ ಮಾಡುತ್ತಿದೆ. ಇದನ್ನು ವಿರೋಧಿಸುವುದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ನಮ್ಮ ಕರ್ತವ್ಯ’ ಅಂತಾ ಹೇಳಿದ್ದಾರೆ.
ನಾವು ಪಾದಯಾತ್ರೆ ಘೋಷಣೆ ಮಾಡಿದ್ದು ಸರ್ಕಾರ ಕೊವಿಡ್ ನಿರ್ಬಂಧಗಳನ್ನು ಹೇರಿದ ಮೇಲಲ್ಲ. ತಿಂಗಳ ಮೊದಲೇ ದಿನಾಂಕ ನಿಗದಿ ಮಾಡಿ, ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ.
ನಮ್ಮನ್ನೇ ಗುರಿಮಾಡಿ ನಿಯಮ ಹೇರಿದರೆ ನಾವು ಹೆದರಿ ಪಾದಯಾತ್ರೆ ಕೈಬಿಡೋಕಾಗುತ್ತಾ? 9/10#Mekedatu— Siddaramaiah (@siddaramaiah) January 5, 2022
‘ಕೊರೊನಾ 3ನೇ ಅಲೆ(Corona 3rd Wave)ಯ ನಿರೀಕ್ಷೆ ಇದ್ದರೂ ಸರಿಯಾದ ತಪಾಸಣೆ ನಡೆಸದೆ, ಅಂತಾರಾಷ್ಟ್ರೀಯ ವಿಮಾನ ಸಂಚಾರ ತಡೆಯದೆ, ಮಾಸ್ಕ್ ಬಳಕೆ ಕಟ್ಟುನಿಟ್ಟು ಮಾಡದೆ ಈಗ ವಿರೋಧ ಪಕ್ಷವೊಂದು ತನ್ನ ಜವಾಬ್ದಾರಿ ನಿರ್ವಹಿಸಲು ಹೊರಟಾಗ ದುರುದ್ದೇಶದಿಂದ ನಿರ್ಬಂಧಗಳನ್ನು ಹೇರಿರುವುದು ಖಂಡನೀಯ. ನಾವು ಪಾದಯಾತ್ರೆ(Mekedatu Project) ಘೋಷಣೆ ಮಾಡಿದ್ದು ಸರ್ಕಾರ ಕೊವಿಡ್ ನಿರ್ಬಂಧಗಳನ್ನು ಹೇರಿದ ಮೇಲಲ್ಲ. ತಿಂಗಳ ಮೊದಲೇ ದಿನಾಂಕ ನಿಗದಿ ಮಾಡಿ, ಅಗತ್ಯ ತಯಾರಿ ಮಾಡಿಕೊಂಡಿದ್ದೇವೆ. ನಮ್ಮನ್ನೇ ಗುರಿಮಾಡಿ ನಿಯಮ ಹೇರಿದರೆ ನಾವು ಹೆದರಿ ಪಾದಯಾತ್ರೆ ಕೈಬಿಡೋಕಾಗುತ್ತಾ?’ ಅಂತಾ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಹರಿಯೋ ನೀರನ್ನು, ಉರಿಯೋ ಸೂರ್ಯನನ್ನು ಯಾರು ನಿಲ್ಲಿಸಲಾಗಲ್ಲ: ಡಿ.ಕೆ.ಶಿವಕುಮಾರ್
144 ಸೆಕ್ಷನ್ ಹೇರಿದರೆ ಐದಕ್ಕಿಂತ ಹೆಚ್ಚು ಮಂದಿ ಸೇರಬಾರದು ಎಂದಿದೆಯಲ್ವಾ? ನಾನು, @DKShivakumar, @RLR_BTM, ಧ್ರುವನಾರಾಯಣ ಸೇರಿ ನಾಲ್ಕೇ ಮಂದಿ ನಡೆದುಕೊಂಡು ಹೋಗ್ತೇವೆ. ಆಗಲೂ ನಮ್ಮನ್ನು ತಡೆಯುತ್ತಾರಾ? ಬಲಪ್ರಯೋಗ ಮಾಡಿದರೆ ನಮ್ಮ ಸಂವಿಧಾನದತ್ತ ಹಕ್ಕುಗಳನ್ನು ಉಲ್ಲಂಘನೆ ಮಾಡಿದ ಹಾಗಾಗುವುದಿಲ್ಲವೇ? 10/10#Mekedatu
— Siddaramaiah (@siddaramaiah) January 5, 2022
‘ಬಿಜೆಪಿ ಸರ್ಕಾರ 144 ಸೆಕ್ಷನ್ ಹೇರಿದರೆ ಐದಕ್ಕಿಂತ ಹೆಚ್ಚು ಮಂದಿ ಸೇರಬಾರದು ಎಂದಿದೆಯಲ್ವಾ? ನಾನು, ಡಿ.ಕೆ.ಶಿವಕುಮಾರ್(DK Shivakumar), ರಾಮಲಿಂಗಾ ರೆಡ್ಡಿ ಹಾಗೂ ಆರ್.ಧ್ರುವನಾರಾಯಣ ಸೇರಿ ನಾಲ್ಕೇ ಮಂದಿ ನಡೆದುಕೊಂಡು ಹೋಗ್ತೇವೆ. ಆಗಲೂ ನಮ್ಮನ್ನು ತಡೆಯುತ್ತಾರಾ? ಬಲಪ್ರಯೋಗ ಮಾಡಿದರೆ ನಮ್ಮ ಸಂವಿಧಾನದತ್ತ ಹಕ್ಕುಗಳನ್ನು ಉಲ್ಲಂಘನೆ ಮಾಡಿದ ಹಾಗಾಗುವುದಿಲ್ಲವೇ?’ ಅಂತಾ ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.