ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ಇನ್ನೋವಾ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ

ಶುಕ್ರವಾರ ರಾತ್ರಿ ಗದಗದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬೊಲೆನೋ ಕಾರಿನ ನಡುವೆ ಮುಖಾಮುಖಿಯಾಗಿ ಅಪಘಾತ ಸಂಭವಿಸಿದೆ. 

Last Updated : Nov 21, 2020, 10:22 AM IST
  • ಶುಕ್ರವಾರ ರಾತ್ರಿ ಹುಬ್ಬಳ್ಳಿ ಹೊರವಲಯದಲ್ಲಿ ಅಪಘಾತ ಸಂಭವಿಸಿದೆ.
  • ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
  • ಅಪಘಾತಕ್ಕೀಡಾದ ಕಾರು ಮಾಜಿ ಸಚಿವೆ ಹಾಗೂ ಚಿತ್ರನಟಿ ಉಮಾಶ್ರಿಯವರಿಗೆ ಸೇರಿದ್ದು ಎಂದು ಪೊಲೀಸ್ ಮೂಲಗಳು ತಿಳಿಸಿವೆ
ಮಾಜಿ ಸಚಿವೆ, ನಟಿ  ಉಮಾಶ್ರೀ ಅವರ ಇನ್ನೋವಾ ಕಾರು ಅಪಘಾತ: ಇಬ್ಬರು ಸ್ಥಳದಲ್ಲೇ ಮೃತ title=
File Image

ಹುಬ್ಬಳ್ಳಿ: ಮಾಜಿ ಸಚಿವೆ ಹಾಗೂ ಖ್ಯಾತ ನಟಿ ಉಮಾಶ್ರೀ ಅವರಿಗೆ ಸೇರಿದ ಇನ್ನೋವಾ ಕಾರು ಶುಕ್ರವಾರ ರಾತ್ರಿ ಹುಬ್ಬಳ್ಳಿ ಹೊರವಲಯದಲ್ಲಿ  ಅಪಘಾತಕ್ಕೀಡಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಶುಕ್ರವಾರ ರಾತ್ರಿ ಗದಗದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬೊಲೆನೋ ಕಾರಿನ ನಡುವೆ ಮುಖಾಮುಖಿಯಾಗಿ ಅಪಘಾತ (Car Accident) ಸಂಭವಿಸಿದೆ. ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಖ್ಯಾತ ನಟಿ, ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಕಾರು ಅಪಘಾತ

ಪೊಲೀಸ್ ಮೂಲಗಳಿಂದ ತಿಳಿದಿರುವ ಮಾಹಿತಿ ಪ್ರಕಾರ ಅಪಘಾತಕ್ಕೀಡಾದ ಕಾರು ಮಾಜಿ ಸಚಿವೆ  ಹಾಗೂ ಚಿತ್ರನಟಿ ಉಮಾಶ್ರಿ (Umashree) ಯವರಿಗೆ ಸೇರಿದ್ದು. ಉಮಾಶ್ರೀ ಅವರನ್ನು ಬಿಟ್ಟು ಕಾರಿನ ಚಾಲಕ ತಮ್ಮೂರಿಗೆ ಹೊರಟಿದ್ದ ವೇಳೆ ಹುಬ್ಬಳ್ಳಿ ತಾಲ್ಲೂಕಿನ ಬಂಡಿವಾಡ ಸಮೀಪದಲ್ಲಿ ಈ ಅಪಘಾತ ಸಂಭವಿಸಿದೆ. 

ಲಾಕ್ ಡೌನ್ ನಡುವೆ ಜಾಲಿ‌ ರೈಡ್ ಮಾಡುತ್ತಿದ್ದ ನಟಿ ಶರ್ಮಿಳಾ ಮಾಂಡ್ರೆ ಕಾರು ಅಪಘಾತ

ಘಟನೆಯಲ್ಲಿ ಸಾವನ್ನಪ್ಪಿದವರಲ್ಲಿ ಒಬ್ಬರು ಧಾರವಾಡ ಮೂಲದ ಸ್ಮಿತಾ ಕಟ್ಟಿ ಎಂದು ತಿಳಿದುಬಂದಿದೆ. ಇನ್ನೊಬ್ಬ ವ್ಯಕ್ತಿಯ ಗುರುತು ಪತ್ತೆಹಚ್ಚಲಾಗುತ್ತಿದೆ. ಮೃತರು ಮತ್ತು ಗಾಯಾಳುಗಳೆಲ್ಲರೂ ಬಲೇನೋ ಕಾರಿನಲ್ಲಿದ್ದವರೂ ಎಂದು ತಿಳಿದುಬಂದಿದೆ. ಹುಬ್ಬಳ್ಳಿ (Hubli) ಗ್ರಾಮೀಣ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರೆಸಿದ್ದಾರೆ.

Trending News