ಶಾಸಕ ಬಿ.ಆರ್ ಪಾಟೀಲ್ ಅವರ ಹೆಸರಲ್ಲಿ ಹರಿಡಾದುತ್ತಿರುವ ಫೇಕ್ ಲೆಟರ್

Fake Letter Circulating: ಶಾಸಕ ಬಿ.ಆರ್ ಪಾಟೀಲ್ ಅವರು ಶಾಸಕರ ಕುಂದುಕೊರತೆಗಳನ್ನು ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿದು ಬಿಟ್ಟಿರುತ್ತಾರೆ. 

Written by - Zee Kannada News Desk | Last Updated : Jul 25, 2023, 06:40 PM IST
ಶಾಸಕ ಬಿ.ಆರ್ ಪಾಟೀಲ್ ಅವರ ಹೆಸರಲ್ಲಿ ಹರಿಡಾದುತ್ತಿರುವ ಫೇಕ್ ಲೆಟರ್ title=

ಬೆಂಗಳೂರು: ಶಾಸಕ ಬಿ.ಆರ್ ಪಾಟೀಲ್ ಅವರು ಶಾಸಕರ ಕುಂದುಕೊರತೆಗಳನ್ನು ಆಲಿಸಲು ಮುಖ್ಯಮಂತ್ರಿಗಳಿಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯುವಂತೆ ಬರೆದ ಮನವಿ ಪತ್ರವನ್ನು ತಿರುಚಿ ಕಿಡಿಗೇಡಿಗಳು ಫೇಕ್ ಲೆಟರ್ ಹರಿದು ಬಿಟ್ಟಿರುತ್ತಾರೆ. 

ಈ ಪತ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಮೇಲೆ ಕೆಲ ಆರೋಪಗಳನ್ನು ಮಾಡುತ್ತಿರುವಂತೆ ಕುತಂತ್ರದಿಂದ ಸುಳ್ಳುಗಳನ್ನು ಹರಿಬಿಡಲಾಗಿದೆ. ಈ ಪತ್ರ ತಮ್ಮದಲ್ಲಾ, ತಾವು ಕೊಟ್ಟ ಪತ್ರಕ್ಕೂ ಈ ಪತ್ರದಲ್ಲಿರುವ ವಿಷಯಕ್ಕೂ ಸಂಬಂಧವಿಲ್ಲಾ. ಈ ಫೇಕ್ ಲೆಟರ್ ನಲ್ಲಿ ನನ್ನ ಸಹಿಯನ್ನು ಫೋಟೋ ಶಾಪ್ ಮೂಲಕ ಅಂಟಿಸಲಾಗಿದೆ. ಅಲ್ಲದೇ ಈ ಫೇಕ್ ಲೆಟರ್ ನಲ್ಲಿ ನನ್ನ ಹಳೆಯ ಮನೆಯ ವಿಳಾಸ ಬರೆಯಲಾಗಿದೆ.

ಇದನ್ನೂ ಓದಿ: Mangalore: ಇತಿಹಾಸದಲ್ಲಿ ಮೊದಲ ಬಾರಿಗೆ ಕರಾವಳಿಯಲ್ಲಿ ದಲಿತ ಸಮುದಾಯಗಳ ಮಹಾಸಂಗಮ..!!

ಪತ್ರವನ್ನು ಡಿಜಿಟಲ್ ನಲ್ಲಿ ಟೈಪ್ ಮಾಡಿ, ಸಹಿಗೆ ಜೆರಾಕ್ಸ್ ನಿಂದ ಸ್ಕ್ಯಾನ್ ಮಾಡಿ ಬಳಸಲಾಗಿದೆ. ಈ ಪತ್ರ ನನ್ನದಲ್ಲಾ. ನನ್ನ ಎಲ್ಲಾ ಅಧಿಕೃತ ಪತ್ರಗಳಲ್ಲಿ ಕ್ರಮ ಸಂಖ್ಯೆಯನ್ನು ಪೂರ್ವನಿಯೋಜಿತವಾಗಿ ಪ್ರಿಂಟ್ ಮಾಡಿರಲಾಗುತ್ತದೆ. ಇದು ಫೇಕ್ ಲೆಟರ್ ಎನ್ನಲು ಅಷ್ಟು ಸಾಕು ಎಂದು ಶಾಸಕ ಬಿ ಆರ್ ಪಾಟೀಲ್ ಸ್ಪಷ್ಟೀಕರಣ ನೀಡಿದ್ದಾರೆ. 

ನನ್ನ ಹಾಗೂ ಪ್ರಿಯಾಂಕ್ ಖರ್ಗೆ ನಡುವೆ ಮನಸ್ಥಾಪ ಹಚ್ಚಲು ಕುತಂತ್ರದಿಂದ ಮಾಡಿರುವಂತಿದೆ. ಇದನ್ನು ಮಾಡಿದವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೂಡ ಕಲಬುರ್ಗಿ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಿದ್ದೇನೆ ಎಂದೂ ಶಾಸಕ ಬಿ.ಆರ್ ಪಾಟೀಲ್ ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News