ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂ

DCM DK Shivakumar: ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ.

Written by - Prashobh Devanahalli | Last Updated : May 6, 2024, 09:04 PM IST
    • ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ
    • ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ
    • ಹೇಳಿಕೆಯಲ್ಲಿ ತಿಳಿಸಿದ ಡಿಸಿಎಂ ಡಿಕೆ ಶಿವಕುಮಾರ್
ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ; ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ: ಡಿಸಿಎಂ  title=
File Photo

ಬೆಂಗಳೂರು: ನನಗೂ ಪೆನ್ ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ. ಬಿಜೆಪಿ ಕಾರ್ಯಕರ್ತ ದೇವರಾಜೇಗೌಡ ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ದೇವರಾಜೇಗೌಡ ಹಿಂದೆ ಬಿಜೆಪಿಯಿಂದ ಚುನಾವಣೆಗೆ ನಿಂತಿದ್ದವರು. ಆ ಪಕ್ಷದ ಸಕ್ರಿಯ ಕಾರ್ಯಕರ್ತ. ಈಗ ಪೆನ್ ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ಜತೆಗೆ ಅದರ ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಈಗ ಆಗಿರುವ ಡ್ಯಾಮೇಜ್ ನಿವಾರಿಸಿಕೊಳ್ಳಲು ಬಿಜೆಪಿ-ಜೆಡಿಎಸ್ ನಾಯಕರು ದೇವರಾಜೇಗೌಡನ ಮೂಲಕ ನನ್ನ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಅಪಾದಿಸಿದರು.

ಇದನ್ನೂ ಓದಿ: ಕಿಡ್ನಿ ಸ್ಟೋನ್ ಇದ್ದರೆ ಮನೆಯಂಗಳದಲ್ಲೇ ಸಿಗುವ ಈ ಎಲೆಯ ರಸ ಕುಡಿಯಿರಿ: ಕಲ್ಲು ಸರಾಗವಾಗಿ ಹೊರಬರುತ್ತೆ! ನೋವು ಕೂಡ ಇರಲ್ಲ

ಇದೇ ದೇವರಾಜೇಗೌಡ ಈ ಹಿಂದೆಯೇ ತಮ್ಮಲ್ಲಿ ಪೆನ್ ಡ್ರೈವ್ ಇರುವ ಬಗ್ಗೆ ಪತ್ರಿಕಾಗೋಷ್ಠಿ ಕರೆದು ಮಾತನಾಡಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಅದನ್ನು ಬಿಡುಗಡೆ ಮಾಡುವುದಾಗಿಯೂ ಹೇಳಿದ್ದರು. ಹೀಗಿರುವಾಗ ನನಗೂ ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಅಪಾದನೆ ಮಾಡುತ್ತಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಎಂಎಸ್ ಧೋನಿ ಅಣ್ಣ ಯಾರು ಗೊತ್ತಾ? ಖ್ಯಾತ ರಾಜಕಾರಣಿ ಇವರು… ಆದ್ರೆ ಅನೇಕ ವರ್ಷಗಳಿಂದ ಮಾತೇ ಬಿಟ್ಟಿದ್ದಾರಂತೆ ಕ್ಯಾಪ್ಟನ್ ಕೂಲ್!

ನಾನೀಗ ಬೆಂಗಳೂರಿಂದ ಹೊರಗೆ ಇದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News