ರೈತರಿಗೆ ಇ-ಕೆವೈಸಿ ಮಾಡಿಕೊಳ್ಳಲು ಅಗಸ್ಟ್ 15 ರವರೆಗೆ ಕಾಲವಕಾಶ

ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಕಡ್ಡಾಯವಾಗಿ ಅಗಸ್ಟ್ 15 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ.

Written by - Manjunath N | Last Updated : Aug 11, 2022, 03:03 PM IST
  • ಈ ಪ್ರಕ್ರಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರು ಎಲ್ಲ ಟ್ಯಾಕ್ಸ್ ಒಳಗೊಂಡಂತೆ, ರೂ.15 ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.
ರೈತರಿಗೆ ಇ-ಕೆವೈಸಿ ಮಾಡಿಕೊಳ್ಳಲು ಅಗಸ್ಟ್ 15 ರವರೆಗೆ ಕಾಲವಕಾಶ title=
file photo

ಧಾರವಾಡ : ಕೃಷಿ ಇಲಾಖೆಯು ಪಿ.ಎಂ.ಕಿಸಾನ್ ಯೋಜನೆಯಡಿ ನೋಂದಾಯಿಸಿದ ಫಲಾನುಭವಿಗಳು ಕಡ್ಡಾಯವಾಗಿ ಅಗಸ್ಟ್ 15 ರೊಳಗಾಗಿ ಇ-ಕೆವೈಸಿ ಮಾಡಿಕೊಳ್ಳಲು ಸೂಚಿಸಿದೆ.

ಇ-ಕೆವೈಸಿ ಮಾಡಿಕೊಳ್ಳಲು ಫಲಾನುಭವಿಗಳು https://pmkisan.gov.in ವೆಬ್‍ಸೈಟ್ ಮುಖಾಂತರ ಅಥವಾ ಪಿ.ಎಂ.ಕಿಸಾನ್ ಮೊಬೈಲ್ ಆ್ಯಪ್ ಮುಖಾಂತರ ಫಲಾನುಭವಿಗಳು ತಾವೇ ಮಾಡಿಕೊಳ್ಳಬಹುದಾಗಿದೆ.

ಇ-ಕೆವೈಸಿಯನ್ನು ಓಟಿಪಿ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾದ ಫಲಾನುಭವಿಗಳು https://pmkisan.gov.in ವೆಬ್‍ಸೈಟ್‍ನಲಿ ಇ-ಕೆವೈಸಿ ಲಿಂಕ್ ಮೇಲೆ ಕ್ಲಿಕಿಸಿ ಆಧಾರ ನಂಬರ್ ಹಾಗೂ ಕ್ಯಾಪ್‍ಚಾ ನಮೂದಿಸಿ ತದನಂತರ ಮೊಬೈಲ್ ಸಂಖ್ಯೆಗೆ ಬರುವ  ಓಟಿಪಿ ದಾಖಲಿಸಿ ಉಚಿತವಾಗಿ  ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ.

ಇದನ್ನೂ ಓದಿ : ಕರೋನಾ ಹೆಚ್ಚಳ: ರಾಷ್ಟ್ರ ರಾಜಧಾನಿಯಲ್ಲಿ ಮಾಸ್ಕ್ ಕಡ್ಡಾಯ

ಇ-ಕೆವೈಸಿಯನ್ನು ಬಯೋಮೆಟ್ರಿಕ್ ಮುಖಾಂತರ ಆಧಾರ ಸಂಖ್ಯೆಯೊಂದಿಗೆ ಮೊಬೈಲ್ ನಂಬರ್ ಜೋಡಣೆಯಾಗದ ರೈತರು ಅಥವಾ ಓಟಿಪಿ ಸೃಜನೆಯಾಗದ ರೈತರು ಹತ್ತಿರದ ಸಾಮಾನ್ಯ ಸೇವಾ ಕೇಂದ್ರಕ್ಕೆ ಭೇಟಿ ನೀಡಿ ಆಧಾರ ಸಂಖ್ಯೆಗೆ ಜೋಡಣೆಯಾದ ಮೊಬೈಲ್ ಸಂಖ್ಯೆ ನಮೂದಿಸಿ ಬಯೋಮೆಟ್ರಿಕ್ ಉಪಕರಣದಲ್ಲಿ ಬೆರಳು ನಮೂದಿಸಿ ಇ-ಕೆವೈಸಿ ಮಾಡಿಕೊಳ್ಳಬಹುದಾಗಿದೆ. ಈ ಪ್ರಕ್ರಿಯೆಗಾಗಿ ಸಾಮಾನ್ಯ ಸೇವಾ ಕೇಂದ್ರದವರು ಎಲ್ಲ ಟ್ಯಾಕ್ಸ್ ಒಳಗೊಂಡಂತೆ, ರೂ.15 ಗಳನ್ನು ಮಾತ್ರ ಪ್ರತಿ ಫಲಾನುಭವಿಯಿಂದ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ರೈತರು, ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು  ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News