ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿಯ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಆಗಮಿಸುತ್ತಿರುವ ಹಿನ್ನಲೆಯಲ್ಲಿ ಕನ್ನಡ ಮತ್ತು ರೈತಪರ ಸಂಘಟನೆಗಳು ಮಹಾದಾಯಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಸ್ಥಿಕೆ ವಹಿಸಬೇಕೆಂದು ಆಗ್ರಹಿಸಿದರು.
ಇದೆ ವೇಳೆ ಪ್ರತಿಭಟನೆಯಲ್ಲಿ ರೈತ ಮುಖಂಡರಾದ ವಿಕಾಸ್ ಸೊಪ್ಪಿನ ಮತ್ತು ಮಹೇಶ ಪತ್ತಾರ ಉಪಸ್ಥಿತರಿದ್ದರು.
Bengaluru: Ahead of PM Narendra Modi's visit, Pro-Kannada activists demand his intervention in the Mahadayi River dispute. #Karnataka pic.twitter.com/vPbDlegvyt
— ANI (@ANI) 4 February 2018
ಸುಮಾರು ಮೂರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಈ ಮಹಾದಾಯಿ ಸಮಸ್ಯೆ ಇಂದಿಗೂ ಕೂಡಾ ಪರಿಹಾರ ಕಂಡಿಲ್ಲ. ಆದರಿಂದ ಈಗ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಉತ್ತರ ಕರ್ನಾಟಕದ ಭಾಗದಲ್ಲಿ ಎರಡು ವರ್ಷಗಳಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಈ ಸಂದರ್ಭದಲ್ಲಿ ಮಹಾದಾಯಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಈ ಭಾಗದ ರೈತರು ರಾಜಕೀಯ ಪಕ್ಷಗಳ ಮೇಲೆ ತೀವ್ರ ಒತ್ತಡ ಹೇರುತ್ತಿದ್ದಾರೆ.