ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದಲ್ಲಿ (Bengaluru university) ವಿದ್ಯಾರ್ಥಿ ಸಂಘಟನೆಗಳ ಮಧ್ಯೆಯೇ ಮಾರಾಮಾರಿ ನಡೆದಿದೆ. ಪ್ರತ್ಯೇಕ ವಿಚಾರಗಳನ್ನು ಮುಂದಿಟ್ಟುಕೊಂಡು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿದ್ದ ವೇಳೆ ಘಟನೆ ಸಂಭವಿಸಿದೆ. ಗಲಾಟೆಯಲ್ಲಿ (Students fight) ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಎಬಿವಿಪಿ (ABVP) ಮತ್ತು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದೆ. ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಅನೇಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಪ್ರಜಾಪ್ರಭುತ್ವ ಆಚರಣೆ (Republic day celebration)
ವೇಳೆ, ಅಂಬೇಡ್ಕರ್ ಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ,
ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳು ಪ್ರತಿಭಟನೆ ಹಮ್ಮಿಕೊಂಡಿದ್ದರು. ಮತ್ತೊಂದೆಡೆ,
ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗಿ ಬರುತ್ತಿರುವ ಹಿನ್ನೆಲೆಯಲ್ಲಿ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ (ABVP Protest) ಕೈಗೊಂಡಿದ್ದರು.
ಇದನ್ನೂ ಓದಿ : Ravi Channannavar: ‘ನನ್ನ ಮೇಲಿನ ಆರೋಪ ಸುಳ್ಳು, ಕಾನೂನು ಬದ್ಧವಾಗಿಯೇ ಆಸ್ತಿ ಖರೀದಿಸಿದ್ದೇನೆ’
ಈ ಸಂದರ್ಭದಲ್ಲಿ ಯಾರು ಪ್ರತಿಭಟನೆ ನಡೆಸಬೇಕು ಎನ್ನುವ ವಿಚಾರಕ್ಕೆ ಸಬಂಧಿಸಿದಂತೆ ಮಾತಿಗೆ ಮಾತು ಬೆಳೆದು ಘರ್ಷಣೆ ನಡೆದಿದೆ. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ವಿಚಾರ ದೊಡ್ಡದು, ಮಾರ್ಕ್ಸ್ ಕಾರ್ಡ್, ಫಲಿತಾಂಶ ತಡವಾಗೋದು ಸಾಮಾನ್ಯ ಸಮಸ್ಯೆ, ಹಾಗಾಗಿ ಇಂದು ನಮ್ಮ ಪ್ರತಿಭಟನೆ ಇದೆ.. ನೀವು ನಾಳೆ ಬನ್ನಿ ಎಂದು ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳು (Bengaluru VV Students) ಎಂದಿದ್ದಾರೆ. ಈ ಸಂದರ್ಭದಲ್ಲಿ ಎರಡು ಸಂಘಟನೆಗಳ ನಡುವೆ ಮಾತಿಗೆ ಮಾತು ಬೆಳೆದು ಅದು ಘರ್ಷಣೆಗೆ ತಿರುಗಿದೆ.
ಅಂಬೇಡ್ಕರ್ ಭಾವಚಿತ್ರವನ್ನ ವಿವಿ ಗಣರಾಜೋತ್ಸವ ದಿನ ಇಟ್ಟಿಲ್ಲ ಅನ್ನುವ ಕಾರಣಕ್ಕೆ ಸಂಶೋಧನಾ ವಿದ್ಯಾರ್ಥಿಗಳು, ಕಳೆದ ಎರಡು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ಮಧ್ಯೆ, ಇಂದು, ಹಾಸ್ಟೆಲ್ ಸಮಸ್ಯೆ, ವಿದ್ಯಾರ್ಥಿ ವೇತನ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ, ಎಬಿವಿಪಿ ವಿದ್ಯಾರ್ಥಿಗಳು ವಿವಿ ಮುತ್ತಿಗೆಗೆ ಮುಂದಾಗಿದ್ದರು. ಈ ಸಂದರ್ಭದಲ್ಲಿ
ಅಂಬೇಡ್ಕರ್ ಅವಮಾನ ವಿಚಾರ ಬಿಟ್ಟು ಬೇರೆ ಪ್ರತಿಭಟನೆಗೆ ಮುಂದಾಗಿರೊದಕ್ಕೆ ಗಲಾಟೆ ಆರಂಭವಾಗಿದೆ ಎನ್ನಲಾಗಿದೆ.
ಇದನ್ನೂ ಓದಿ : ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಬಗ್ಗೆ ಸಿಎಂ ಜೊತೆ ಚರ್ಚೆ: ಎಚ್ಡಿಕೆ ಭರವಸೆ
ಸ್ಥಳಕ್ಕೆ ಜ್ಞಾನ ಭಾರತಿ ಪೊಲೀಸರು (Police) ಆಗಮಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.