ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ವೈ.ವಿಜಯೇಂದ್ರ

ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. "ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Written by - Puttaraj K Alur | Last Updated : Aug 7, 2024, 11:03 PM IST
  • ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರೆಯಲಿದೆ
  • ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಬಿಜೆಪಿಯಿಂದ ಮೈಸೂರು ಚಲೋ
  • ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರವೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ವೈ.ವಿಜಯೇಂದ್ರ title=
ನಮ್ಮ ಹೋರಾಟ ಮುಂದುವರೆಯಲಿದೆ!

ಬೆಂಗಳೂರು: ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. "ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ʼಭ್ರಷ್ಟ ಕಾಂಗ್ರೆಸ್ ಹಗರಣಗಳ ಸರ್ಕಾರದ ವಿರುದ್ಧದ ʼಮೈಸೂರು ಚಲೋ ಪಾದಯಾತ್ರೆʼಯು ಸತತ 5 ದಿನಗಳು ನಮ್ಮ ತಪಸ್ವೀ ಕಾರ್ಯಕರ್ತರೊಂದಿಗೆ ಹೆಜ್ಜೆ ಹಾಕುತ್ತಾ ಬುಧವಾರ ಮದ್ದೂರು ತಾಲೂಕಿನ ತೂಬಿನಕೆರೆಯಲ್ಲಿ ಇಂದಿನ ಪಾದಯಾತ್ರೆ ಅಂತ್ಯಗೊಂಡಿತು. ದಿನಕ್ಕೊಂದು ಬೆಲೆ ಏರಿಕೆಯ ಬರೆ ಎಳೆಯುತ್ತಾ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ಹಾಗೂ ಭ್ರಷ್ಟ ಮುಖ್ಯಮಂತ್ರಿಗಳ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಜನಬೆಂಬಲ ದೊಂದಿಗೆ ಮುಂದುವರಿಯಲಿದೆʼ ಎಂದು ಹೇಳಿದ್ದಾರೆ. 

ಇದನ್ನೂ ಓದಿ: ಜನಾಂದೋಲನ ಬಳಿಕ ಅಭಿಮಾನಿಗಳಿಂದ ಸಿಎಂ ಪರ ಪ್ರತಿಭಟನೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಮತ್ತು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರು ಕೂಡಲೇ ರಾಜೀನಾಮೆ ನೀಡುವಂತೆ ಬಿಜೆಪಿ ನಾಯಕರು ಆಗ್ರಹಿಸಿದ್ದಾರೆ. ಮಾನ ಮರ್ಯಾದೆ ಇದ್ದರೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಅಂತಾ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಹ ಆಗ್ರಹಿಸಿದ್ದಾರೆ. ಮುಡಾ ಅಕ್ರಮ ಅಕ್ಷಮ್ಯ ಅಪರಾಧ ಅನ್ನಿಸಿದರೆ ರಾಜೀನಾಮೆ ಕೊಡಬೇಕು. ಇಲ್ಲದಿದ್ದರೆ ರಾಜ್ಯದ ಜನರು ಸಹಿಸಲ್ಲ. ಕಾಂಗ್ರೆಸ್ ಸರ್ಕಾರ ಮುಂದುವರಿದರೆ ರಾಜ್ಯದ ಹಿತಕ್ಕೆ ಮಾರಕ. ಹೀಗಾಗಿ ಮಾನ ಮರ್ಯಾದೆ ಇದ್ದರೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮರ್ಯಾದೆ ಉಳಿಯಬಹುದುʼ ಅಂತಾ ಬಿಎಸ್‌ವೈ ಕಿಡಿಕಾರಿದ್ದರು.  

ʼಮೈಸೂರು ಚಲೋ ಪಾದಯಾತ್ರೆʼ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್‌, ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥ್‌ ನಾರಾಯಣ್‌, ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ್, ಮಾಜಿ ಸಚಿವರಾದ ಬಿ ಶ್ರೀರಾಮುಲು, ಸಿ.ಟಿ.ರವಿ, ಭೈರತಿ ಬಸವರಾಜು, ಕೆ.ಸಿ.ನಾರಾಯಣಗೌಡ, ರಾಜುಗೌಡ, ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಸಿ.ಬಿ.ಸುರೇಶ್ ಬಾಬು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಪ್ರಮುಖರು, ಶಾಸಕರು, ಮಾಜಿ ಶಾಸಕರು, ಮಾಜಿ ಸಂಸದರು, ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ: ಮೂಡಾ ಪ್ರಕರಣದ ಬಗ್ಗೆ ಸಿದ್ದರಾಮಯ್ಯ ಮಾತು

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News