ಕೊನೆಗೂ ನಿಗಮ, ಮಂಡಳಿ ಪಟ್ಟಿ ಫೈನಲ್:‌ ಸಿಎಂ ಸಿದ್ದರಾಮಯ್ಯ ಅಭಿನಂದನೆ

ʼನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. ನಮ್ಮ‌ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆʼ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.  

Written by - Puttaraj K Alur | Last Updated : Feb 29, 2024, 05:42 PM IST
  • ನಿಗಮ, ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರ ನೇಮಕ
  • ಆಯ್ಕೆಯಾದವರು ಮುಂದಿನ ೨ ವರ್ಷಗಳವರೆಗೆ ಕಾರ್ಯನಿರ್ವಹಿಸುವಂತೆ ಸೂಚನೆ
  • ನಿಗಮ, ಮಂಡಳಿಗೆ ನೇಮಕಗೊಂಡವರಿಗೆ ಸಿಎಂ ಸಿದ್ದರಾಮಯ್ಯನವರಿಂದ ಅಭಿನಂದನೆ
ಕೊನೆಗೂ ನಿಗಮ, ಮಂಡಳಿ ಪಟ್ಟಿ ಫೈನಲ್:‌ ಸಿಎಂ ಸಿದ್ದರಾಮಯ್ಯ ಅಭಿನಂದನೆ title=
ನಿಗಮ, ಮಂಡಳಿ ನೇಮಕಾತಿ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ನಿಗಮ ಮತ್ತು ಮಂಡಳಿಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡಿ ರಾಜ್ಯ ಸರ್ಕಾರವು ಘೋಷಿಸಿದೆ. ಆಯ್ಕೆಯಾದವರು ನೇಮಕಗೊಂಡ ದಿನಾಂಕದಿಂದ ಮುಂದಿನ 2 ವರ್ಷಗಳ ಅವಧಿಯವರೆಗೆ ಕಾರ್ಯನಿರ್ವಹಿಸುವಂತೆ ತಕ್ಷಣದಿಂದ ಜಾರಿಗೆ ಬರುವಂತೆ ನೇಮಕಾತಿ ಆದೇಶಗಳನ್ನು ಸಂಬಂಧಪಟ್ಟ ಆಡಳಿತ ಇಲಾಖೆಗಳಿಗೆ ಸೂಚಿಸಿಲಾಗಿದೆ.

ಸಿಎಂ ಸಿದ್ದರಾಮಯ್ಯ ಅಭಿನಂದನೆ

ನಿಗಮ, ಮಂಡಳಿಗೆ ನೇಮಕಗೊಂಡವರಿಗೆ ಸಿಎಂ ಸಿದ್ದರಾಮಯ್ಯನವರು ಅಭಿನಂದನೆ ಸಲ್ಲಿಸಿದ್ದಾರೆ. ನಿಗಮ, ಮಂಡಳಿಗೆ ನೇಮಕಗೊಂಡವರ ಅಂತಿಮಪಟ್ಟಿಯನ್ನು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿರುವ ಅವರು, ʼನಿಗಮ / ಮಂಡಳಿ / ಪ್ರಾಧಿಕಾರಗಳ ಅಧ್ಯಕ್ಷರು ಮತ್ತು ಉಪಾಧ್ಯಕ್ಷರಾಗಿ ನೇಮಕಗೊಂಡ ಎಲ್ಲರಿಗೂ ಅಭಿನಂದನೆಗಳು. ನಮ್ಮ‌ ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಮತ್ತು ನಾಡಿನ ಸರ್ವಾಂಗೀಣ ಪ್ರಗತಿಯ ನಮ್ಮ ಪ್ರಯತ್ನಕ್ಕೆ ತಾವೆಲ್ಲರೂ ಬೆಂಬಲವಾಗಿ ನಿಲ್ಲಲಿದ್ದೀರೆಂದು ನಂಬಿದ್ದೇನೆʼ ಎಂದು ಹೇಳಿದ್ದಾರೆ.  

ಇದನ್ನೂ ಓದಿ: Infosys : ಮಾರ್ಚ್ 9 ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಡೆವಲಪ್‌ಮೆಂಟ್ ಸೆಂಟರ್‌ನಲ್ಲಿ ವಾಕ್-ಇನ್ ಇಂಟರ್‌ವ್ಯೂವ್

ನಿಗಮ, ಮಂಡಳಿ ನೇಮಕಗೊಂಡವರ ಪಟ್ಟಿ...  

ಕಾಂತಾ ನಾಯ್ಕ್ - ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ

ಮುಂಡರಗಿ ನಾಗರಾಜು - ಡಾ.ಬಾಬು ಜಗಜೀವನ್​ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ

ವಿನೋದ್ ಕೆ.ಅಸೂಟಿ - ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ

ಬಿ.ಹೆಚ್​.ಹರೀಶ್ - ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷ

ಡಾ.ಅಂಶುಮಂತ್​ - ಭದ್ರಾ ಕಾಡಾದ ಅಧ್ಯಕ್ಷ

ಜೆ.ಎಸ್​.ಆಂಜನೇಯಲು - ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಡಾ.ಬಿ.ಯೋಗೇಶ್ ಬಾಬು - ಕರ್ನಾಟಕ ದ್ರಾಕ್ಷಾರಸ ಮಂಡಳಿಯ ಅಧ್ಯಕ್ಷ

ಮರೀಗೌಡ ಯಾದಗಿರಿ - ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ

ದೇವೇಂದ್ರಪ್ಪ ವರ್ತೂರು - ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ

ರಾಜಶೇಖರ್ ರಾಮಸ್ವರಂ - ಕರ್ನಾಟಕ ಜೈವಿಕ ಇಂಧನ ಮಂಡಳಿಯ ಅಧ್ಯಕ್ಷ

ಕೆ.ಮರೀಗೌಡ - ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಎಸ್​.ಮನೋಹರ್ - ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್

ಅಯೂಬ್ ಖಾನ್ - ಬಣ್ಣ ಮತ್ತು ಅರಗು ಕಾರ್ಖಾನೆಯ ಅಧ್ಯಕ್ಷ

ಮಮತಾ ಗಟ್ಟಿ - ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ

ಜಿ.ಪಲ್ಲವಿ - ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಅಧ್ಯಕ್ಷೆ

ಹೆಚ್.ಸಿ.ಸುಧೀಂದ್ರ - ತೆಂಗು ಅಭಿವೃದ್ಧಿ ಮಂಡಳಿಯ ಅಧ್ಯಕ್ಷ

ಡಾ.ನಾಗಲಕ್ಷ್ಮಿ ಚೌಧರಿ- ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಹೆಚ್‌.ಎಸ್‌.ಸುಂದರೇಶ್‌ - ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಆರ್‌.ಎಂ.ಮಂಜುನಾಥ - ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ

ಜಯಣ್ಣ - ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ

ಆರ್.‌ಸಂಪತ್ ರಾಜ್- ಡಾ.ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮ

ಪದ್ಮಾವತಿ- ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ

ಶ್ರೀನಿವಾಸ್‌ - ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ

ಶಾಕಿರ್‌ ಸನದಿ- ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಸೋಮಣ್ಣ ಬೇವಿನಮರದ - ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಮೆಹಬೂಬ್‌ ಪಾಷಾ- ಬೆಂಗಳೂರಿನ ಕಂಠೀರವ ಸ್ಟುಡಿಯೋದ ಅಧ್ಯಕ್ಷ

ಕೀರ್ತಿ ಗಣೇಶ್-‌ ಡಾ.ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ

ಮಜರ್‌ ಖಾನ್-‌ ದೇವರಾಜು ಅರಸು ಟ್ರಕ್‌ ಟರ್ಮಿನಲ್‌ ಅಧ್ಯಕ್ಷ

ಸವಿತಾ ರಘು- ಕರ್ನಾಟಕ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷೆ

ಲಲಿತ್‌ ರಾಘವ್-‌ ಕರ್ನಾಟಕ ವಿದ್ಯುತ್‌ ಕಾರ್ಖಾನೆಯ ಅಧ್ಯಕ್ಷ

ಜಿ.ಎಸ್‌.ಮಂಜುನಾಥ್ -ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧ್ಯಕ್ಷ

ಮಾಲಾ ನಾರಾಯಣರಾವ್-‌ ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ

ರಿಜ್ವಾನ್‌ - ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಮಗದ ಅಧ್ಯಕ್ಷ

ಕೇಶವ್ ರೆಡ್ಡಿ- ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ತಾಜ್‌ ಪೀರ್-‌ ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಗಂಗಾಧರ್-‌ ಮೈಸೂರು ಸಕ್ಕರೆ ಕಾರ್ಖಾನೆಯ ಅಧ್ಯಕ್ಷ

ಅಲ್ತಾಫ್-‌ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ

ಜಯಸಿಂಹ - ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ

ವಿಜಯ್ ಕೆ.ಮುಳುಗುಂದ್ - ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ

ಮರಿಸ್ವಾಮಿ ಚಾಮರಾಜನಗರ - ಕಾಡಾ ಅಧ್ಯಕ್ಷ

ಸದಾಶಿವ ಉಲ್ಲಾಳ್ - ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ರಘುನಂದನ್ ರಾಮಣ್ಣ - ಬಿಎಂಐಸಿಎಪಿಎ ಅಧ್ಯಕ್ಷ

ಬಸವರಾಜ್ ಜಾಬಶೆಟ್ಟಿ - ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ

ಸಾಧು ಕೋಕಿಲ - ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷ

ಇದನ್ನೂ ಓದಿ: ಜೂನ್ ತಿಂಗಳ ಅವಧಿಯಲ್ಲಿ ಒಟ್ಟು 15 ಮಂದಿ ವಿಧಾನಪರಿಷತ್ ಸದಸ್ಯರ ಅವಧಿ ಮುಕ್ತಾಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News