ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕ ಬಸ್ ವ್ಯವಸ್ಥೆ..!

ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಈಗ ಹಲವಾರು ಭಾರತೀಯ ವಿದ್ಯಾರ್ಥಿಗಳು ಈಗ ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.ಹಲವಾರು ವಿದ್ಯಾರ್ಥಿಗಳಿಗೆ ಈಗ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಅವರು ಯುದ್ಧ ಪೀಡಿತ (Ukraine) ಪ್ರದೇಶದಲ್ಲಿ ಪರದಾಡುವಂತಾಗಿದೆ.

Last Updated : Mar 5, 2022, 09:19 PM IST
  • ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಈಗ ಹಲವಾರು ಭಾರತೀಯ ವಿದ್ಯಾರ್ಥಿಗಳು ಈಗ ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
  • ಹಲವಾರು ವಿದ್ಯಾರ್ಥಿಗಳಿಗೆ ಈಗ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಅವರು ಯುದ್ಧ ಪೀಡಿತ (Ukraine) ಪ್ರದೇಶದಲ್ಲಿ ಪರದಾಡುವಂತಾಗಿದೆ.
 ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕದ ವಿದ್ಯಾರ್ಥಿಗಳಿಗೆ ಕೊನೆಗೂ ಸಿಕ್ಕ ಬಸ್ ವ್ಯವಸ್ಥೆ..!  title=

ಬೆಂಗಳೂರು: ರಷ್ಯಾ-ಉಕ್ರೇನ್ ಯುದ್ಧದಿಂದಾಗಿ ಈಗ ಹಲವಾರು ಭಾರತೀಯ ವಿದ್ಯಾರ್ಥಿಗಳು ಈಗ ಅಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ.ಹಲವಾರು ವಿದ್ಯಾರ್ಥಿಗಳಿಗೆ ಈಗ ಸೂಕ್ತ ಸಾರಿಗೆ ವ್ಯವಸ್ಥೆ ಇಲ್ಲದಿರುವುದರಿಂದಾಗಿ ಅವರು ಯುದ್ಧ ಪೀಡಿತ (Ukraine) ಪ್ರದೇಶದಲ್ಲಿ ಪರದಾಡುವಂತಾಗಿದೆ.

ಈಗ ಖಾರ್ಕೀವ್ ಬಳಿಯ ಪೆಸೊಚಿನ್ (Russia-Ukraine War) ಪ್ರದೇಶದಿಂದ ಹೊರಟ ವಿದ್ಯಾರ್ಥಿಗಳು ಸ್ವಲ್ಪಮಟ್ಟಿಗೆ ನೆಮ್ಮದಿಯ ನಿಟ್ಟುಸಿರುವ ಬಿಡುವಂತಾಗಿದೆ.ಹೌದು ಈಗ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಕಿರಣ ಸವದಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಭಾರತೀಯ ವಿದ್ಯಾರ್ಥಿಗಳಿಗೆ ಈಗ ಬಸ್ ಸೌಲ್ಯಭ್ಯ ದೊರೆತಿದ್ದರಿಂದಾಗಿ ಅವರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಗಾಯನ ಗಂಗೆ ಗಂಗೂಬಾಯಿ ಹಾನಗಲ್ ನೆನಪಿನಲ್ಲಿ....

ಈಗ ಲೆವಿವ್ ಮಾರ್ಗದ ಕಡೆ ಹೊರಡಲು ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವ್ಯಸ್ಥೆ ಮಾಡಲಾಗಿದ್ದು, ಪೆಸೋಚಿನ್ ನಲ್ಲಿ ನೆಲೆಸಿದ್ದ ಸುಮಾರು 1 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಲೆವಿವ್ ತಲುಪಿ ನಂತರ ಪೊಲ್ಯಾಂಟ್ ಅಥವಾ ರೊಮೇನಿಯಾ ಮಾರ್ಗವಾಗಿ ಭಾರತದ ಕಡೆ ಪ್ರಯಾಣ ಬೆಳೆಸಲಿದ್ದಾರೆ ಎನ್ನಲಾಗಿದೆ.

ಈಗ ಬಸ್ ಗಾಗಿ ಕಾಯುತ್ತಿರುವ ವೀಡಿಯೋವನ್ನು ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ನಾವಲಗಿ ಗ್ರಾಮದ ನಿವಾಸಿ ಕಿರಣ ಸವದಿ ಎನ್ನುವ ವಿದ್ಯಾರ್ಥಿ ಬಸ್ ಗಾಗಿ ಸರತಿ ಸಾಲಿನಲ್ಲಿ ನಿಂತಿರುವ ವಿಡೀಯೋವೊಂದನ್ನು ಹಂಚಿಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News