ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ಅಗ್ನಿ ಅವಘಡ

ಮಂಗಳೂರಿನ ಕೆ ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್‌ನ ನಾಲ್ಕನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

Last Updated : Feb 21, 2019, 01:27 PM IST
ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ಅಗ್ನಿ ಅವಘಡ title=

ಮಂಗಳೂರು: ಮಂಗಳೂರಿನ ಸಿಟಿ ಸೆಂಟರ್ ಮಾಲ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ತಕ್ಷಣವೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇಂದು ಮಧ್ಯಾಹ್ನ ಮಂಗಳೂರಿನ ಕೆ ಎಸ್ ರಾವ್ ರಸ್ತೆಯಲ್ಲಿರುವ ಸಿಟಿ ಸೆಂಟರ್ ಮಾಲ್‌ನ ನಾಲ್ಕನೇ ಮಹಡಿಯಲ್ಲಿಯಲ್ಲಿರುವ ಫುಡ್ ಕೋರ್ಟ್‌ನಲ್ಲಿ ಈ ಅವಘಡ ಸಂಭವಿಸಿದೆ. ಫುಡ್ ಕೋರ್ಟ್‌ನ ಅಡುಗೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿರುವ ಮೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. 

ಘಟನೆ ಬಳಿಕ ಮಾಲ್ ತುಂಬಾ ಭಾರೀ ಪ್ರಮಾಣದಲ್ಲಿ ಹೊಗೆ ಆವರಿಸಿಕೊಂಡಿದ್ದರಿಂದ ಮಾಲ್ ಒಳಗಿದ್ದ ಜನರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರಗೆ ಕಳುಹಿಸಿದ್ದಾರೆ.
 

Trending News