ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ

 ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕೂತಲ್ಲಿಯೇ ಸಾವನ್ನಪ್ಪಿದ್ದು, ಮೃತ ದೇಹಗಳು ಕಾರಿನೊಳಗೆ ಸಿಲುಕಿಕೊಂಡಿವೆ. 

Last Updated : Apr 30, 2019, 06:33 PM IST
ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರ ದುರ್ಮರಣ title=

ಶಿವಮೊಗ್ಗ: ಕಾರು ಮತ್ತು ಟೆಂಪೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.

ತಾಲೂಕಿನ ಆಯನೂರು ಹೊರವಲಯದ ಚಿಕ್ಕದಾನವಂಡಿ ಬಳಿ ಅಪಘಾತ ಸಂಭವಿಸಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಕೂತಲ್ಲಿಯೇ ಸಾವನ್ನಪ್ಪಿದ್ದು, ಮೃತ ದೇಹಗಳು ಕಾರಿನೊಳಗೆ ಸಿಲುಕಿಕೊಂಡಿವೆ. 

ಅಪಘಾತ ನಡೆದ ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
 

Trending News