ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2019ನೇ ಕ್ಯಾಲೆಂಡರ್ ವರ್ಷದಿಂದ 2023ನೇ ಕ್ಯಾಲೆಂಡರ್ ವರ್ಷಗಳಿಗೆ ಟೀಯೆಸ್ಸಾರ್ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚಿಸಲಾಗಿದ್ದು, ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಆಹ್ವಾನಿಸಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಾಧೀಶರಾದ ಪಿ.ಎನ್.ದೇಸಾಯಿ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತರಾದ ಡಾ. ಈಶ್ವರ ದೈತೋಟ, ಶಾಂತಲಾ ಧರ್ಮರಾಜ್ ಹಾಗೂ ಎಂ.ಎಸ್. ಮಣಿ ಸದಸ್ಯರಾಗಿದ್ದಾರೆ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಸದಸ್ಯ ಕಾರ್ಯದರ್ಶಿಗಳಾಗಿರುತ್ತಾರೆ.
ಇದನ್ನೂ ಓದಿ : ಕಾವೇರಿ ನದಿಯಲ್ಲಿ ಎದುರಾದ ಪ್ರವಾಹ ಆತಂಕ :ನದಿ ಪಾತ್ರದ ಜನರಿಗೆ ರವಾನೆಯಾಯಿತು ಎಚ್ಚರಿಕೆಯ ಸಂದೇಶ
ಕನ್ನಡದ ಹಿರಿಯ ಪರ್ತಕರ್ತ ಟಿ.ಎಸ್. ರಾಮಚಂದ್ರರಾವ್ ಅವರ ನೆನಪಿನಲ್ಲಿ ಸರ್ಕಾರ ಟೀಯೆಸ್ಸಾರ್ ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತ 2 ಲಕ್ಷ ರೂ. ಆಗಿದ್ದು, ಕನ್ನಡ ಪತ್ರಿಕೋದ್ಯಮ, ಮುದ್ರಣ ಹಾಗೂ ವಿದ್ಯುನ್ಮಾನ ಮಾಧ್ಯಮದಲ್ಲಿ ಅಥವಾ ಎರಡರಲ್ಲೂ ಒಟ್ಟಿಗೆ ಕನಿಷ್ಠ 30 ವರ್ಷಗಳ ಸೇವೆ ಸಲ್ಲಿಸಿರಬೇಕು. ಜೊತೆಗೆ ಕನ್ನಡ ಕ್ಷೇತ್ರಕ್ಕೆ ಭಾಷೆಯ ಬೆಳವಣಿಗೆಗೆ ವಿಶೇಷ ಕೊಡುಗೆ ನೀಡಿರುವವರನ್ನು ಪ್ರಶಸ್ತಿಗೆ ಪರಿಗಣಿಸಲಾಗುವುದು.ಪ್ರತಿ ಕ್ಯಾಲೆಂಡರ್ ವರ್ಷಕ್ಕೆ ಒಬ್ಬರಿಗೆ ಮಾತ್ರ ಈ ಪ್ರಶಸ್ತಿಯನ್ನು ನೀಡಲಾಗುವುದು.
ಇದನ್ನೂ ಓದಿ : ಸಭಾಧ್ಯಕ್ಷರ ಪೀಠದ ಪಕ್ಕ ಫೋಟೋ ಶೂಟ್! ಸ್ಪೀಕರ್ ಸರ್ ಏನಿದು?
ಪತ್ರಿಕಾ ರಂಗದ ಭೀಷ್ಮರೆಂದೇ ಹೆಸರಾದ ಮೊಹರೆ ಹಣಮಂತರಾಯ ಅವರ ನೆನಪಿನಲ್ಲಿ ಸರ್ಕಾರವು ಪ್ರಶಸ್ತಿ ನೀಡುತ್ತಾ ಬಂದಿದೆ. ಪ್ರಶಸ್ತಿಯ ಮೊತ್ತವು 2 ಲಕ್ಷ ರೂ. ಆಗಿದ್ದು, ಕನ್ನಡದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಯಾವುದೇ ಪತ್ರಿಕೆಯನ್ನು ಅಥವಾ ಪತ್ರಿಕಾ ಸಮೂಹವನ್ನು ಸಮರ್ಥವಾಗಿ ಕಟ್ಟಿ ಬೆಳೆಸಿದ ಹಾಗೂ ಪ್ರವೃತ್ತಿಯಲ್ಲಿ ಪತ್ರಕರ್ತರಾಗಿ, ವೃತ್ತಿಯಲ್ಲಿ ಪತ್ರಿಕಾಲಯದ ಮಾಲೀಕರು, ಆಡಳಿತಗಾರರಾಗಿ ಕನಿಷ್ಠ 30 ವರ್ಷ ಸೇವೆ ಸಲ್ಲಿಸಿರಬೇಕು.
ಪ್ರಶಸ್ತಿಗಳಿಗೆ ನಾಮ ನಿರ್ದೇಶನಗಳನ್ನು, ಮಾಧ್ಯಮ ಸಂಸ್ಥೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಮತ್ತು ವ್ಯಕ್ತಿಗಳು ಪೂರ್ಣ ದಾಖಲೆಗಳೊಂದಿಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು – 560 001 ಇಲ್ಲಿಗೆ 2024ನೇ ಜುಲೈ 25ರ ಸಂಜೆ 5.30 ರೊಳಗಾಗಿ ಕಳುಹಿಸಿಕೊಡಬಹುದಾಗಿದೆ. ಅಥವಾ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿ ಮೂಲಕ ಇಲ್ಲವೇ tsraward@gmail.com ಇಮೇಲ್ ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಕಳುಹಿಸಿಕೊಡಬಹುದಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.