ಕೆಡಿಪಿ ಸಭೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ದ ಹೆಚ್ ಡಿಕೆ ತೀವ್ರ ವಾಗ್ದಾಳಿ

Former CM Attended The KDP Meeting: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

Written by - Zee Kannada News Desk | Last Updated : Jun 12, 2023, 06:22 PM IST
  • ಕೆಡಿಪಿ ಸಭೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ದ ಹೆಚ್ ಡಿಕೆ ತೀವ್ರ ವಾಗ್ದಾಳಿ
  • ಡಿಸಿಎಂ ಡಿಕೆ ಶಿವಕುಮಾರ್ 40% ಆರೋಪದ ಬಗ್ಗೆ ತನಿಖೆ ನಡೆಸುವಂತೆ ಸವಾಲು
  • ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಕೆಡಿಪಿ ಸಭೆಯಲ್ಲಿ ಡಿಸಿಎಂ ಡಿಕೆಶಿ ವಿರುದ್ದ ಹೆಚ್ ಡಿಕೆ ತೀವ್ರ ವಾಗ್ದಾಳಿ  title=

ರಾಮನಗರ: ಕಾಂಗ್ರೆಸ್ ಸರಕಾರದ ವಿರುದ್ಧ ಪರ್ಸಂಟೇಜ್ ಆರೋಪ ಮಾಡಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಅವರು ತಮ್ಮ ಆರೋಪಗಳ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಹೇಳಿಕೆಗೆ ತಿರುಗೇಟು ನೀಡಿದ ಅವರು: ಹಿಂದೆ ಇದೇ ಜನ ಬಿಜೆಪಿ ಸರಕಾರದ ವಿರುದ್ಧ 40% ಆರೋಪ ಮಾಡಿದ್ದರು. ಆ ಆರೋಪವನ್ನು ಅವರು ಸಾಬೀತು ಮಾಡಿದ್ದರಾ? ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರಾ? ಈಗ ನೋಡಿದರೆ ನನಗೆ ಪುಕ್ಕಟೆ ಸಲಹೆ ನೀಡುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

ಇದನ್ನೂ ಓದಿ: ಈತನ ಮೇಲಿರೋದು ಕೊಲೆ ಕೇಸ್: ಕೊಡೋದು ಬೆಂಗಳೂರು ಇವಂದೇ ಅನ್ನೋ ತರ ಬಿಲ್ಡಪ್..!

ಈಗ ಕಾಂಗ್ರೆಸ್ ನವರದ್ದೇ ಸರ್ಕಾರ ಇದೆ. 40% ವಿಚಾರವನ್ನು ತನಿಖೆ ಮಾಡಿಸಲಿ, ಸತ್ಯ ಜನರ ಮುಂದೆ ಇಡಲಿ. ಆರೋಪ ಮಾಡಿದವರ ಬಳಿ ಸಾಕ್ಷ್ಯ ಇರಲೇಬೇಕಲ್ಲವೇ? ಗುತ್ತಿಗೆದಾರರ ಸಂಘದವರು ದೂರು ಕೊಟ್ಟಿದ್ದರಲ್ಲ, ಅವರು ಸಾಕ್ಷಿ ಇಟ್ಟಿದ್ರಾ.? ಲೋಕಾಯುಕ್ತಕ್ಕೆ ದೂರು ನೀಡಲು ಅಡ್ಡಿ ಮಾಡಿದ್ದವರು ಯಾರು? ಎಂದು ಅವರು ಪ್ರಶ್ನಿಸಿದರು.

ಕಳೆದ ಮೇ 8 ರಂದು ಮಹಾನಗರ ಪಾಲಿಕೆಯಲ್ಲಿ 675 ಕೋಟಿ LOC ಹಣವನ್ನ ಯಾಕೆ ರಿಲೀಸ್ ಮಾಡಿಲ್ಲ? ಅದನ್ನು ಯಾಕೆ ಇಟ್ಟುಕೊಂಡಿದ್ದೀರಿ? ಅದರ ಬಗ್ಗೆ ನೀವು ಮೊದಲು ಜನತೆಗೆ ಹೇಳಿ ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.

ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಮಾಜಿ ಸಿಎಂ:

ಚುನಾವಣೆ ಮುಗಿದು ಹೊಸ ಸರ್ಕಾರ ರಚನೆ ಆದ ನಂತರ ಚನ್ನಪಟ್ಟಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಕುಮಾರಸ್ವಾಮಿ ಅವರು ಭಾಗಿಯಾದರು. ಇಲಾಖಾವಾರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು; ತಾಲೂಕಿನ ಹಲವು ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು. ಆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇದನ್ನೂ ಓದಿ: ಬೆಂಗಳೂರು ನಗರದಲ್ಲಿ 250 ಇಂದಿರಾ ಕ್ಯಾಂಟಿನ್ ಪ್ರಾರಂಭ : ಸಿಎಂ ಸಿದ್ದರಾಮಯ್ಯ

ಚನ್ನಪಟ್ಟಣ ಕ್ಷೇತ್ರದಲ್ಲಿ ಕಾಡಾನೆ ಹಾವಳಿ ಹೆಚ್ಚಾಗಿರುವ ವಿಚಾರದ ಬಗ್ಗೆ ಮಾಜಿ ಮುಖ್ಯಮಂತ್ರಿ ಅವರು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು ಹಾಗೂ ಕಾಡಾನೆ ತಡೆಯಲು ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಸೂಚಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News