ಬೆಂಗಳೂರು: ರಾಜ್ಯದಲ್ಲಿ ದುರಾಡಳಿತ ಮತ್ತು ಭ್ರಷ್ಟಾಚಾರ ಎರಡೂ ಒಟ್ಟಿಗೆ ಸಾಗುತ್ತಿವೆ. ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ. ಒಂದು ಬಿ.ಎಸ್. ಯಡಿಯೂರಪ್ಪ (BS Yediyurappa) ನಾಮಕಾವಸ್ತೆ ಮುಖ್ಯಮಂತ್ರಿ. ಇನ್ನೊಬ್ಬರು ಅವರ ಪುತ್ರ ಬಿ.ವೈ. ವಿಜಯೇಂದ್ರ (BY Vijayendra) ಸೂಪರ್ ಸಿಎಂ. ಇದಲ್ಲದೆ ಯಡಿಯೂರಪ್ಪ ಅವರ ಮೊಮ್ಮಕ್ಕಳು ಕೂಡ ನೇರವಾಗಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಗುರುತರವಾದ ಆರೋಪ ಮಾಡಿದ್ದಾರೆ.
ಕೆಪಿಸಿಸಿ (KPCC) ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಯಡಿಯೂರಪ್ಪ ಮತ್ತು ಅವರ ಪುತ್ರ ವಿಜಯೇಂದ್ರ ಮಾತ ಭ್ರಷ್ಟಾಚಾರ ನಡೆಸುತ್ತಿಲ್ಲ. ಅವರ ಬದಲಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಇಡೀ ಕುಟುಂಬವೇ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ 3ತಿಂಗಳಾಯಿತು. ಈ ಅವಧಿಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದಲ್ಲಿ ಮುಖ್ಯಮಂತ್ರಿ ಕುಟುಂಬದವರು ಶಾಮೀಲಾಗಿದ್ದಾರೆ ಎಂದರು. ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ, ಅಳಿಯ ವೀರೂಪಾಕ್ಷಪ್ಪ ಮರಡಿ, ಮೊಮ್ಮಗ ಶಶಿಧರ್ ಮರಡಿ ಲಂಚ ಪಡೆಯುವಾಗ ಸಿಕ್ಕಿದ್ದಾರೆ ಎಂದು ಹೇಳಿದರು.
ಮುಂದಿನ ಮೂರು ವರ್ಷವೂ ಯಡಿಯೂರಪ್ಪ ಅವರೇ ಮುಖ್ಯಮಂತ್ರಿ: ಸಚಿವ ವಿ. ಸೋಮಣ್ಣ
ಬಿಡಿಎ ನಿಂದ 576 ಕೋಟಿ ರೂಪಾಯಿಗೆ ಹೌಸಗ್ ಪ್ರಾಜೆಕ್ಟ್ ಟೆಂಡರ್ ಘೋಷಣೆ ಮಾಡಲಾಗಿದೆ. ಟೆಂಡರ್ ನಲ್ಲಿ ಇಬ್ಬರು ಬಿಲ್ಡರ್ ಪಾರ್ಟಿಸಿಪೇಟ್ ಮಾಡ್ತಾರೆ. ರಾಮಲಿಂಗಂ ಕನ್ ಸ್ಟ್ರಕ್ಷನ್ ಕಂಪನಿ ಕೂಡ ಇರುತ್ತೆ. ರಾಮಲಿಂಗಂ ಕನ್ಸ್ ಸ್ಟ್ರಕ್ಷನ್ ಕಂಪನಿಗೆ 22/02/2020ರಲ್ಲಿ ಒಪ್ಪಿಗೆ ಪತ್ರವನ್ನು ನೀಡಲಾಗುತ್ತೆ. ಆ ಬಳಿಕ ವಿಜಯೇಂದ್ರ ರಾಮಲಿಂಗಂ ಕಂಪನಿ ಮಾಲೀಕರಿಗೆ ಕರೆ ಮಾಡಿ ಟೆಂಡರ್ ಕ್ಲೋಸ್ ಮಾಡುವ ಬೆದರಿಕೆ ಹಾಕುತ್ತಾರೆ. ತಮ್ಮ ಆಪ್ತ ಹೊಟೇಲ್ ಮಾಲಿಕನಿಗೆ ಹಣ ನೀಡುವಂತೆ ಸೂಚನೆ ನೀಡುತ್ತಾರೆ. ವಿಜಯೇಂದ್ರನಿಗೆ ಕೊಡುವುದಾಗಿ ಹೇಳಿ ಬಿಡಿಎ ಆಯುಕ್ತ ಪ್ರಕಾಶ್ 12 ಕೋಟಿ ಹಣ ಪಡೆಯುತ್ತಾರೆ. ಈ ವೇಳೆ ಕಂಟ್ರಾಕ್ಟರ್ ಗೆ ವಿಜಯೇಂದ್ರ ಫೋನ್ ಮಾಡಿ 'ಹಣ ಬಂದಿಲ್ಲವಲ್ಲ' ಅಂತಾ ಕೇಳುತ್ತಾರೆ. ಪ್ರಕಾಶ್ ಗೆ ಕೊಟ್ಟೆ ಅಂತಾ ಕಂಟ್ರಾಕ್ಟರ್ ಹೇಳುತ್ತಾರೆ. ವಿಜಯೇಂದ್ರ ಪ್ರಾಮಾಣಿಕರಾಗಿದ್ದರೆ ಬಿಡಿಎ ಕಮೀಷನರ್, ಕಂಟ್ರಾಕ್ಟರ್ ಮೇಲೆ ಕೇಸ್ ಯಾಕೆ ಹಾಕಲಿಲ್ಲ. ಏಕೆಂದರೆ ಪ್ರಕಾಶ್ ಬಿಡಿಎ ಕಮೀಷನರ್ ಆಗೋಕೆ 15 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಆನಂತರ ಕಂಟ್ರಾಕ್ಟರ್ ಯಡಿಯೂರಪ್ಪ ಮೊಮ್ಮಗ ಶಶಿಧರ್ ಮರಡಿ ಅಕೌಂಟಿಗೆ 7.40 ಕೋಟಿ ರೂಪಾಯಿಗಳನ್ನು ಆರ್ ಟಿಜಿಎಸ್ (RTGS) ಮಾಡುತ್ತಾರೆ. ಇದು ಶೇಷಾದ್ರಿಪುರಂನ HDFC ಬ್ಯಾಂಕ್ ಅಕೌಂಟ್ ಗೆ ಹಣ ಸಂದಾಯವಾಗುತ್ತದೆ ಎಂದು ಭ್ರಷ್ಟಾಚಾರದ ಕರ್ಮಕಾಂಡವನ್ನು ಬಿಚ್ಚಿಟ್ಟರು.
ಪಿಎಂ ಭೇಟಿಯನ್ನು ಕುರ್ಚಿ ಉಳಿಸಿಕೊಳ್ಳುವ ಬದಲು ರಾಜ್ಯದ ಸಮಸ್ಯೆ ಬಗ್ಗೆ ಚರ್ಚಿಸಲು ಬಳಸಿಕೊಳ್ಳಿ: ಸಿದ್ದರಾಮಯ್ಯ
ರಾಜ್ಯದಲ್ಲಿ ಇಬ್ಬರು ಮುಖ್ಯಮಂತ್ರಿಗಳಿದ್ದಾರೆ ಎಂಬ ಮಾತು ಈಗ ನಡೆಯುತ್ತಿರುವ ಭ್ರಷ್ಟಾಚಾರದ ಮೂಲಕ ಸಾಬೀತಾಗಿದೆ. ಕೊರೊನಾ ಸಂದರ್ಭದಲ್ಲೂ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ನಡೆಸುತ್ತಿದೆ. ಮೆಡಿಕಲ್ ಕಿಟ್ ಹಗರಣದ ಬಗ್ಗೆ ದಾಖಲೆ ಬಿಡುಗಡೆ ಮಾಡಿದ್ದೆವು. ಆದರೆ ಅವರು ರೇಟ್ ನಲ್ಲಿ ವೆರಿಯೇಶನ್ ಇದೆ ಅಂತ ನೆಪ ಹೇಳುತ್ತಿದ್ದಾರೆ. ದರದಲ್ಲಿ ಅಷ್ಟೊಂದು ಪ್ರಮಾಣದ ವ್ಯತ್ಯಾಸ ಇರೋಕೆ ಸಾಧ್ಯವೇ? ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.