ಬೆಂಗಳೂರು : ಜಿಂದಾಲ್ ಕಂಪನಿ(Jindal Land Deal)ಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.
ಈ ಕುರಿತು ಟ್ವಿಟ್ಟರ್ ನಲ್ಲಿ ಬರೆದುಕೊಂಡಿರುವ ಮಾಜಿ ಸಿಎಂ ಕುಮಾರಸ್ವಾಮಿ(HD Kumaraswamy), ಜಿಂದಾಲ್ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪ(BS Yediyurappa)ನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದರು.
ಜಿಂದಾಲ್ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ.
1/3— H D Kumaraswamy (@hd_kumaraswamy) May 28, 2021
ಇದನ್ನೂ ಓದಿ : " ಮಹಿಳೆಯರ ಆತ್ಮಗೌರವ ರಕ್ಷಣೆಗಾಗಿ ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸಲಿ "
ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ 'ಸಂಸ್ಕೃತಿ'. ಬಿಜೆಪಿ(BJP) ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್ ಸಾಕ್ಷಿ ಎಂದು ಹೇಳಿದ್ದಾರೆ.
ಜಿಂದಾಲ್ಗೆ ಲೀಸ್ ಕಂ ಸೇಲ್ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ.
2/3— H D Kumaraswamy (@hd_kumaraswamy) May 28, 2021
ಇದನ್ನೂ ಓದಿ : Ration Card : ಪಡಿತರ ಚೀಟಿದಾರರಿಗೊಂದು ಗುಡ್ ನ್ಯೂಸ್..!
ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ನಡೆದ ಶಾಸಕಾಂಗ ಸಭೆಯಲ್ಲಿ ಜಿಂದಾಲ್ ಕಂಪನಿ(Jindal Company)ಗೆ 3667 ಎಕರೆ ಭೂಮಿಯನ್ನ ನೀಡಲು ನಿರ್ಧರಿಸಿದ್ದ ನಿರ್ಧಾರವನ್ನ ವಾಪಸ್ ಪಡೆಯಲು ನಿರ್ಧರಿಸಿದೆ.
ಇದನ್ನೂ ಓದಿ : Cabinet Meeting : ಜಿಂದಾಲ್ ಗೆ ನೀಡಿದ್ದ 3667 ಎಕರೆ ಜಮೀನು ವಾಪಸ್ ಪಡೆಯಲು ಸರ್ಕಾರ ನಿರ್ಧಾರ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.