ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? - ಕೇಂದ್ರ ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ

#ಕರ್ನಾಟಕದಲ್ಲಿಕನ್ನಡವೇಮೊದಲು: ಕೇಂದ್ರ @BJP4India ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ

Written by - Yashaswini V | Last Updated : Oct 7, 2022, 09:24 AM IST
  • ಟ್ವೀಟ್ ಮೂಲಕ ಕನ್ನಡಿಗರಿಗಾಗಿ ದನಿ ಎತ್ತಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
  • ಸರ್ಕಾರಿ ಹುದ್ದೆಗಳ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ಎರಡು ಬೇಡಿಕೆಗಳ ಬಗ್ಗೆ ಉಲ್ಲೇಖ
  • ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂಬ ಎಚ್ಚರಿಕೆ ಸಂದೇಶ
ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? - ಕೇಂದ್ರ ಸರ್ಕಾರದ ವಿರುದ್ಧ ಹೆಚ್ಡಿಕೆ ಕಿಡಿ  title=
Hindi Imposition (Photo Credit@hd_kumaraswamy)

ಬೆಂಗಳೂರು: ಕೇಂದ್ರದ ಸಿಬ್ಬಂದಿ ಆಯ್ಕೆ ಆಯೋಗ (SSC) 20,000 ಹುದ್ದೆ ಆಯ್ಕೆಗೆ ಹಿಂದಿ-ಇಂಗ್ಲೀಷ್‌ ನಲ್ಲಿ ಮಾತ್ರ ಪರೀಕ್ಷೆ ನಡೆಸುತ್ತಿದೆ. ಆಯ್ಕೆಯಾದ ಅಭ್ಯರ್ಥಿಯನ್ನು ಯಾವ ರಾಜ್ಯಕ್ಕಾದರೂ ಕಳುಹಿಸಬಹುದು. ಕನ್ನಡ ಸೇರಿ ಯಾವುದೇ ಪ್ರಾದೇಶಿಕ ಭಾಷೆಯಲ್ಲಿ ಪರೀಕ್ಷೆಗೆ ಅವಕಾಶವಿಲ್ಲ. ಹಿಂದಿ ಹೇರಿಕೆ, ಭಾಷಾ ತಾರತಮ್ಯಕ್ಕೆ ಇದಕ್ಕಿಂತ ಸಾಕ್ಷಿ ಬೇಕೆ? ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಾಯಕ,  ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಕೇಂದ್ರ @BJP4India ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ. ಒಕ್ಕೂಟ ತತ್ವದಲ್ಲಿ ಆಡಳಿತ ನಡೆಸುವ ಪಕ್ಷಕ್ಕೇ ಒಪ್ಪಿಗೆ ಇಲ್ಲ ಎನ್ನುವುದನ್ನು ಇದು ತೋರಿಸುತ್ತಿದೆ. ಹಿಂದಿ ಭಾಷಿಗರನ್ನು ಕರ್ನಾಟಕ ಹಾಗೂ ದಕ್ಷಿಣ ಭಾರತದಲ್ಲಿ ತುಂಬುವ ದುಸ್ಸಾಹಸವಷ್ಟೇ ಇದು ಎಂದಿದ್ದಾರೆ.

ಇದನ್ನೂ ಓದಿ- K Sudhakar : 'ಕಡು ಬಡವರಿಗಾಗಿ ಡಿ.15 ರ ವೇಳೆಗೆ ರಾಜ್ಯದಲ್ಲಿ 438 'ನಮ್ಮ ಕ್ಲಿನಿಕ್‌' ಫ್ರಾರಂಭ'

ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ರಾಜ್ಯದ ಪ್ರತಿಭಾವಂತ ಯುವಕರಿಗೆ ಅವಕಾಶ: 
ಟ್ವೀಟ್ ಮೂಲಕ ಕನ್ನಡಿಗರಿಗಾಗಿ ದನಿ ಎತ್ತಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಸರ್ಕಾರಿ ಹುದ್ದೆಗಳ ಆಯ್ಕೆಗೆ ಸಂಬಂಧಿಸಿದಂತೆ ತಮ್ಮ ಎರಡು ಬೇಡಿಕೆಗಳ ಬಗ್ಗೆಯೂ ಉಲ್ಲೇಖಿಸಿದ್ದಾರೆ. 
ಈ ವಿಷಯದಲ್ಲಿ ನಮ್ಮ 2 ಬೇಡಿಕೆಗಳಿವೆ. 
1.ಕನ್ನಡದಲ್ಲೂ ಪರೀಕ್ಷೆ ನಡೆಸಬೇಕು.
2.ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರನ್ನೇ ನೇಮಿಸಬೇಕು ಎಂದು ಆಗ್ರಹಿಸಿದ್ದಾರೆ.
ಈ ಬದಲಾವಣೆ ನಂತರವಷ್ಟೇ ಸಿಬ್ಬಂದಿ ಆಯ್ಕೆ ಆಯೋಗ ಪರೀಕ್ಷೆ ನಡೆಸಬೇಕು. ಕನ್ನಡದಲ್ಲೇ ಪರೀಕ್ಷೆ ನಡೆಸಿದರೆ ಕರ್ನಾಟಕದ ಅನೇಕ ಪ್ರತಿಭಾವಂತ ಯುವಜನರು ಆಯ್ಕೆ ಆಗಲು ಅನುಕೂಲವಾಗುತ್ತದೆ ಎಂದಿದ್ದಾರೆ.

ಇದನ್ನೂ ಓದಿ- DK Shivakumar : ಡಿಕೆ ಶಿವಕುಮಾರ್​ಗೆ ಶಾಕ್ ನೀಡಿದ ಇಡಿ!

#ಕರ್ನಾಟಕದಲ್ಲಿಕನ್ನಡವೇಮೊದಲು:
ಕರ್ನಾಟಕದ ಹುದ್ದೆಗಳಿಗೆ ಕನ್ನಡಿಗರ ನೇಮಕವಾದರೆ, ಕರ್ನಾಟಕದ ಜನರಿಗೆ ಕನ್ನಡದಲ್ಲಿ ಸೇವೆ ದೊರೆಯುತ್ತದೆ. ತಪ್ಪಿದರೆ, ಕೇಂದ್ರವು ಕನ್ನಡಿಗರ ಆಗ್ರಹಕ್ಕೆ ಗುರಿಯಾಗಬೇಕಾಗುತ್ತದೆ ಎಂದವರು ಎಚ್ಚರಿಕೆಯನ್ನೂ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News