ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ರಾಜ್ಯ ಕುರುಬರ ಸಂಘದ ನಿರ್ದೇಶಕ ಪಿ.ರಾಜಕುಮಾರ ನಿಧನ

ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಪಿ.ರಾಜಕುಮಾರ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

Written by - Zee Kannada News Desk | Last Updated : Oct 23, 2022, 09:14 AM IST
  • ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತ, ಕಾಂಗ್ರೆಸ್ ಮುಖಂಡ ಪಿ.ರಾಜಕುಮಾರ್ ನಿಧನ
  • ರಾಜ್ಯ ಕುರುಬರ ಸಂಘದ ನಿರ್ದೇಶಕರಾಗಿದ್ದ ಪಿ.ರಾಜಕುಮಾರ್‍ಗೆ 63 ವರ್ಷ ವಯಸ್ಸಾಗಿತ್ತು
  • ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತ
ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ, ರಾಜ್ಯ ಕುರುಬರ ಸಂಘದ ನಿರ್ದೇಶಕ ಪಿ.ರಾಜಕುಮಾರ ನಿಧನ title=
ಸಿದ್ದರಾಮಯ್ಯ ಆಪ್ತ ಪಿ.ರಾಜಕುಮಾರ ನಿಧನ

ದಾವಣಗೆರೆ: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯ ಕುರುಬರ ಸಂಘದ ನಿರ್ದೇಶಕ  ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಪಿ.ರಾಜಕುಮಾರ (63) ನಿಧನರಾಗಿದ್ದಾರೆ.

ತಡರಾತ್ರಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲು ಪ್ರಯತ್ನಿಸಲಾಗಿತ್ತು. ಆದರೆ ಅಸ್ಪತ್ರೆಗೆ ಹೋಗುವಷ್ಟರಲ್ಲಿ ಹೃದಯಾಘಾತದಿಂದ ಪಿ.ರಾಜಕುಮಾರ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ವಿಧಾ‌ನಸಭೆಯ ಉಪ ಸಭಾಧ್ಯಕ್ಷ ಆನಂದ ಚಂದ್ರಶೇಖರ ಮಾಮನಿ ವಿಧಿವಶ

ದಾವಣಗೆರೆ ನಗರದ ಜೆ.ಎಚ್.ಪಟೇಲ್ ಬಡಾವಣೆಯ ನಿವಾಸದಲ್ಲಿ ಮಧ್ಯಾಹ್ನ 2 ಗಂಟೆಯವರೆಗೆ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಂತರ ಸ್ವಗ್ರಾಮ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರನಕುಂಟೆ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ ಎಂದು ಕುಟಂಬ ಮೂಲಗಳು ತಿಳಿಸಿವೆ.

ಪಿ‌.ರಾಜಕುಮಾರ ಅವರು ಪತ್ನಿ ಹಾಗೂ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.  ರಾಜಕುಮಾರು ಅವರು ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತರಾಗಿ ಗುರುತಿಸಿಕೊಂಡಿದ್ದರು.

ಇದನ್ನೂ ಓದಿ: ರಾಜ್ಯಕ್ಕೆ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಬಂಡವಾಳ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News