Bed Blocking ಬಗ್ಗೆ 10 ದಿನಗಳಿಂದ ಗೊತ್ತಿದ್ದೂ ಸಂಸದ ತೇಜಸ್ವಿ ಸೂರ್ಯ ಸುಮ್ಮನಿದ್ದುದು ಏಕೆ: ಸಿದ್ದರಾಮಯ್ಯ

ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು  ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾವೈರಸ್ ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ ಎಂದು ಸಂಸದ ತೇಜಸ್ವಿ ಸೂರ್ಯಗೆ ಸಿದ್ದರಾಮಯ್ಯ ಅವರು ಪಾಠ ಮಾಡಿದ್ದಾರೆ.

Written by - Yashaswini V | Last Updated : May 5, 2021, 11:30 AM IST
  • 11 ಟ್ವೀಟ್ ಗಳ ಮೂಲಕ ಸಂಸದ ತೇಜಸ್ವಿ ಸೂರ್ಯಗೆ ತಿರುಗೇಟು ನೀಡಿರುವ ಸಿದ್ದರಾಮಯ್ಯ
  • ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೂ ಸಿದ್ದರಾಮಯ್ಯ ಅವರಿಂದ ಪ್ರಶ್ನೆಗಳ ಸರಮಾಲೆ
  • ಕೊರೊನಾ ಕಾಲದ ಅವ್ಯವಹಾರದ ಬಗ್ಗೆ ಸೂಕ್ತ ತನಿಖೆಯಾಗುವಂತೆ ಸಿದ್ದರಾಮಯ್ಯ ಒತ್ತಾಯ
Bed Blocking ಬಗ್ಗೆ 10 ದಿನಗಳಿಂದ ಗೊತ್ತಿದ್ದೂ ಸಂಸದ ತೇಜಸ್ವಿ ಸೂರ್ಯ ಸುಮ್ಮನಿದ್ದುದು ಏಕೆ: ಸಿದ್ದರಾಮಯ್ಯ title=
File Image

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ (Bed Blocking) ಬಗ್ಗೆ ಸಂಸದ ತೇಜಸ್ವಿ ಸೂರ್ಯ ಗಮನಕ್ಕೆ ಬಂದು 10 ದಿನ ಆಗಿತ್ತಂತೆ‌. ಆದರೂ ಅವರು ಈವರೆಗೆ ಏಕೆ‌ ಸುಮ್ಮನಿದ್ದರು?  ಯಾರನ್ನು ಬಚಾವ್ ಮಾಡೋಕೆ ಸುಮ್ಮನಿದ್ದರು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಪ್ರಶ್ನಿಸಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ (Siddaramaiah) ಅವರು, '@Tejasvi_Surya, ರವಿಸುಬ್ರಹ್ಮಣ್ಯ,‌ ಸತೀಶ್ ರೆಡ್ಡಿ‌ ಅವರೇ, ಕೋವಿಡ್ ನಿರ್ವಹಣೆಯ  ಗುಪ್ತ ಕಾರ್ಯಾಚರಣೆ‌ ನಡೆಸಬೇಕಾಗಿರುವುದು BBMPಯ ಅಧಿಕಾರಿಗಳ ವಿರುದ್ಧವಲ್ಲ,‌ ವಿಧಾನಸೌಧದಲ್ಲಿ ಕೂತಿರುವ ಮುಖ್ಯಮಂತ್ರಿ,‌ ಸಚಿವರು ಮತ್ತು @BJP4Karnataka ಶಾಸಕರು‌,ಸಂಸದರ ವಿರುದ್ಧ. ಸಣ್ಣಮಿಕಗಳನ್ನು ಹಿಡಿದಿರುವುದು ದೊಡ್ಡ ತಿಮಿಂಗಲಗಳ ರಕ್ಷಣೆಗಾ?' ಎಂದು ಪ್ರಶ್ನಿಸಿದ್ದಾರೆ.

'ಕೋವಿಡ್ ಪ್ರಾರಂಭದ ದಿನಗಳಲ್ಲಿಯೇ ನಾನು ಪತ್ರಿಕಾಗೋಷ್ಠಿ ನಡೆಸಿ ಕೋವಿಡ್ ನಿರ್ವಹಣೆಯಲ್ಲಿನ ಭ್ರಷ್ಟಾಚಾರವನ್ನು ದಾಖಲೆ‌ಸಹಿತ ಬಹಿರಂಗಗೊಳಿಸಿದ್ದೆ. ಅದರ ಜೊತೆ ಈಗ ನೀವು ಹೇಳುತ್ತಿರುವುದನ್ನೂ ಸೇರಿಸಿ‌ ಹೈಕೋರ್ಟ್ ಹಾಲಿ‌ ನ್ಯಾಯಾಧೀಶರಿಂದ ತನಿಖೆ ನಡೆಸಲು @CMofKarnataka ಮೇಲೆ ಒತ್ತಡ ಹೇರಿ @Tejasvi_Surya' ಎಂದು ಆಗ್ರಹಿಸಿದ್ದಾರೆ. 

ಇದನ್ನೂ ಓದಿ -  Corona Variant: ಕರೋನಾ ರೂಪಾಂತರದ ಮೊದಲ ಫೋಟೋ ಬಹಿರಂಗ, ಇದು ಭಾರತದ ಎರಡನೇ ತರಂಗಕ್ಕೆ ಕಾರಣ

'ಬೆಡ್ ಬ್ಲಾಕಿಂಗ್ ನಿಮ್ಮ ಗಮನಕ್ಕೆ ಬಂದು ಹತ್ತು ದಿನ ಆಯ್ತು ಅಂತೀರಿ. ಇಷ್ಟು ದಿನ ಅಧಿಕಾರಿಗಳ ಮನವೊಲಿಸುತ್ತಿದ್ದೀರಾ? ಬೇರೇನಾದರೂ ವ್ಯವಹಾರದ ಮಾತುಕತೆ ನಡೆದಿತ್ತಾ?  ನಿಮ್ಮ ನಿಗೂಢ ಮೌನವನ್ನು ಹೇಗೆ ಅರ್ಥೈಸುವುದು @Tejasvi_Surya?' ಎಂದು ಸಿದ್ದರಾಮಯ್ಯ ಅವರು ಖಡಕ್ ಪ್ರಶ್ನೆ ಎತ್ತಿದ್ದಾರೆ.

'ತಿನ್ನುವ ಅನ್ನದಿಂದ ಹಿಡಿದು ಮನುಷ್ಯನ ಪ್ರಾಣದ ವರೆಗೆ ಎಲ್ಲದರಲ್ಲಿಯೂ ಜಾತಿ-ಧರ್ಮವನ್ನು  ಎಳೆದು ತರುವ ನಿಮ್ಮ ಕೊಳಕು ಬುದ್ದಿಯನ್ನು ಕೊರೊನಾ ರೋಗಕ್ಕೂ ಯಾಕೆ ಎಳೆದು ತರ್ತೀರಿ ತೇಜಸ್ವಿ ಸೂರ್ಯ? ಕೊರೊನಾ ವೈರಸ್ (Coronavirus) ಗಿಂತಲೂ ಅಪಾಯಕಾರಿ ನಿಮ್ಮ ಮೆದುಳಲ್ಲಿರುವ ಕೋಮು ವೈರಸ್, ಅದಕ್ಕೆ ಚಿಕಿತ್ಸೆ ಪಡ್ಕೊಳ್ಳಿ' ಎಂದು ಪಾಠ ಮಾಡಿದ್ದಾರೆ. 

'ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಷಾಮೀಲಾಗಿರುವವರು ಒಂದೇ ಕೋಮಿನವರು ಎನ್ನುವ ರೀತಿಯಲ್ಲಿ ಆರೋಪಿಗಳ ಪಟ್ಟಿ ಓದಿದ @Tejasvi_Surya ಅವರೇ, ಮುಖ್ಯ ಆರೋಪಿಗಳಾದ @CMofKarnataka ಅವರಿಂದ ಹಿಡಿದು ಸಚಿವರು, ಶಾಸಕರು, ಸಂಸದರೆಲ್ಲರೂ ಯಾವ ಧರ್ಮದವರು? ಅದನ್ನೂ ಓದಿ ಹೇಳಿಬಿಡಿ' ಎಂದು ಒತ್ತಾಯಿಸಿದ್ದಾರೆ. 

ಇದನ್ನೂ ಓದಿ - Coronavirus: ಶಾಕಿಂಗ್! ನಿಮ್ಮ ತೂಕದಿಂದಲೂ ಕರೋನ ಅಪಾಯ

''ಯಥಾ ರಾಜಾ ತಥಾ‌ ಮಂತ್ರಿ'. 'ಮೈ ಬೀ ಕಾವೂಂಗಾ, ತುಮ್ ಬಿ ಕಾವೋ' ಎನ್ನುವುದೇ ನಿಮ್ಮ @narendramodi ಅವರ ನಿಜವಾದ ಘೋಷಣೆ.‌ ಅದನ್ನೇ ನೀವೆಲ್ಲ ಮಾಡ್ತಿದ್ದೀರಿ. ಪಾಲು ಹಂಚಿಕೆಯಲ್ಲಿ ಜಗಳವಾದಾಗ ಇಂತಹ ಕಿಡಿಗಳು ಸಿಡಿಯುತ್ತವೆ ಅಷ್ಟೆ ಅಲ್ಲವೇ @Tejasvi_Surya ?' ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ. 

'ಮುಖ್ಯಮಂತ್ರಿಗಳಿಂದ ಕರ್ತವ್ಯಲೋಪ-ಭ್ರಷ್ಟತೆ ನಡೆದಿದ್ದರೆ ಅವರ ವಿರುದ್ಧ ನೇರ ಆರೋಪ‌ಪಟ್ಟಿ ಸಲ್ಲಿಸಿ ಅವರನ್ನು ಕಿತ್ತು ಹಾಕಿ. ಇದಕ್ಕಾಗಿ ಸರ್ಕಾರಿ ಅಧಿಕಾರಿ-ಸಿಬ್ಬಂದಿಗಳನ್ನು‌ ಯಾಕೆ ಬಳಸಿಕೊಳ್ತೀರಿ? ನಿಮ್ಮ ಆಂತರಿಕ ಕಿತ್ತಾಟಕ್ಕೆ ಕೊರೊನಾವನ್ನು ಯಾಕೆ ಬಳಸಿಕೊಳ್ತೀರಿ @Tejasvi_Surya?' ಎಂದು ಕೇಳಿದ್ದಾರೆ.

'ಕೋವಿಡ್ ನಿರ್ವಹಣೆಯಲ್ಲಿ‌ ರಾಜ್ಯ @BJP4Karnataka ಸರ್ಕಾರ ಸಂಪೂರ್ಣ ವಿಫಲವಾಗಿದೆ ಎನ್ನುವುದು ಜಗಜ್ಜಾಹೀರಾಗಿದೆ. ನಿಮ್ಮ ಕೇಂದ್ರ ಸರ್ಕಾರ ಏನು ಕಡಿದು ಕಟ್ಟೆ ಹಾಕಿದೆ‌‌ ಅದನ್ನೂ ರಾಜ್ಯದ ಜನತೆಗೆ ತಿಳಿಸಿ @Tejasvi_Surya' ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. 

ಇದನ್ನೂ ಓದಿ - Steam ಪಡೆಯುವುದರಿಂದ ಕರೋನಾದಿಂದ ರಕ್ಷಣೆ ಪಡೆಯಬಹುದೇ? ಇಲ್ಲಿದೆ ಸತ್ಯಾಸತ್ಯತೆ

'ಕೇಂದ್ರ ಮತ್ತು ರಾಜ್ಯದಲ್ಲಿ‌ ಬಿಜೆಪಿ ಅಧಿಕಾರಕ್ಕೆ ಬಂದರೆ ರಾಜ್ಯದ ಜನತೆಯ ಭಾಗ್ಯದ ಬಾಗಿಲು ತೆರೆಯುತ್ತೆ ಎಂದು ಮತದಾರರ ದಿಕ್ಕುತಪ್ಪಿಸಿ ಅಧಿಕಾರಕ್ಕೆ ಬಂದಿದ್ದೀರಿ, ಈಗ ರಾಜ್ಯದಲ್ಲಿ ದೌರ್ಭಾಗ್ಯದ ಬಾಗಿಲು ತೆರೆದಿದೆ,‌ ಸ್ಮಶಾನದಲ್ಲಿ‌ ಹೆಣಗಳ ಸಾಲು ಬೆಳೆಯುತ್ತಿದೆ. ಇದೇನಾ @narendramodi ಅವರ ಅಚ್ಚೇ ದಿನ್ @Tejasvi_Surya?' ಎಂದು ವ್ಯಂಗ್ಯ ಮಾಡಿದ್ದಾರೆ. 

'ಪಿಎಂ ಕೇರ್ಸ್ ನಿಧಿಗೆ ರಾಜ್ಯದಿಂದ ಎಷ್ಟು‌ ಹಣ ಸಂದಾಯವಾಗಿದೆ? ಅದರಿಂದ ರಾಜ್ಯಕ್ಕೆ ಎಷ್ಟು ನೆರವು ಹರಿದು ಬಂದಿದೆ? ರಾಜ್ಯಕ್ಕೆ ವೆಂಟಿಲೇಟರ್,‌ ಐಸಿಯು,‌ ಆಕ್ಸಿಜನ್ ಎಷ್ಟು ಸಿಕ್ಕಿದೆ? ಮಾಹಿತಿ ಹಕ್ಕಿಗೆ ನಿಷೇಧ ಹೇರಿ @narendramodi ರಕ್ಷಿಸುತ್ತಿರುವುದು ಯಾರನ್ನು ತಮ್ಮನ್ನೋ? ಅಧಿಕಾರಿಗಳನ್ನೋ?' ಎಂದು ಕೇಳಿದ್ದಾರೆ.

'ರಾಜ್ಯದ ಕೊರೊನಾ ರೋಗಿಗಳಿಗೆ ಬೆಡ್ ಕೊಡಿ,‌ ವೆಂಟಿಲೇಟರ್ ಕೊಡಿ, ಆಕ್ಸಿಜನ್ ಕೊಡಿ ಎಂದು @BSYBJP ಭಿಕ್ಷುಕರ ರೀತಿ ಪ್ರಧಾನಿಯನ್ನು ಬೇಡುತ್ತಿದ್ದಾರೆ. ರಾಜ್ಯದ 25 @BJP4Karnataka ಸಂಸದರು ಯಾವ ಬಿಲ ಸೇರಿದ್ದಾರೆ? ಇಲ್ಲಿ ಹುಲಿಯಂತೆ ಕಿರುಚಾಡುವ ಸಂಸದರು ಪ್ರಧಾನಿ @narendramodi ಎದುರು ಇಲಿಗಳಾಗಿ ಬಿಲ ಸೇರುವುದು ಯಾಕೆ?' ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News