SM Krishna : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು

Former CM SM Krishna : ತೀವ್ರ ಜ್ವರದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Written by - Prashobh Devanahalli | Edited by - Chetana Devarmani | Last Updated : Sep 25, 2022, 09:28 AM IST
  • ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು
  • ತೀವ್ರ ಜ್ವರದಿಂದ ಬಳಲುತ್ತಿರುವ ಬಿಜೆಪಿಯ ಹಿರಿಯ ಮುಖಂಡ
  • ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ ಕುಟುಂಬಸ್ಥರು
SM Krishna : ಮಾಜಿ ಸಿಎಂ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲು title=
ಎಸ್.ಎಂ.ಕೃಷ್ಣ

ಬೆಂಗಳೂರು : ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಜ್ವರದಿಂದ ಬಳಲುತ್ತಿರುವ ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಎಸ್.ಎಂ.ಕೃಷ್ಣ ಅವರನ್ನು ನಿನ್ನೆ ತಡರಾತ್ರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ ಎಸ್​.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಅವರನ್ನು ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಗೆ ಅಡ್ಮಿಟ್‌ ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಜ್ವರ ಹೆಚ್ಚಾಗಿದ್ದ ಹಿನ್ನೆಲೆ ನಿನ್ನೆ ರಾತ್ರಿ ಬೆಂಗಳೂರಿನ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.  

ಇದನ್ನೂ ಓದಿ : ಬ್ಯಾಂಕ್ ಗಳಿಂದ ರೈತರ ಆಸ್ತಿಪಾಸ್ತಿ ಜಪ್ತಿಗೆ ನಿಷೇಧ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ನಿನ್ನೆ ಸಂಜೆ ಎಸ್.ಎಂ.ಕೃಷ್ಣರಿಗೆ ತೀವ್ರ ಜ್ವರ, ತಲೆ ನೋವು ಬಾಧಿಸಿತ್ತು. ಅವರನ್ನು ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆದುಕೊಂಡು ಹೋಗಲಾಯಿತು. ವೈದ್ಯರು ನಿಗಾವಹಿಸಬೇಕೆಂದು ಸೂಚಿಸಿದ ಹಿನ್ನೆಲೆ ನಿನ್ನೆ ತಡರಾತ್ರಿ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಇನ್ನು ಎಸ್‌.ಎಂ.ಕೃಷ್ಣ ಅವರು ಚಿಕಿತ್ಸೆ ಸ್ಪಂದಿಸುತ್ತಿದ್ದು, ಯಾವುದೇ ಆತಂಕವಿಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಎಸ್.ಎಂ.ಕೃಷ್ಣ ಅವರಿಗೆ ಜ್ವರ ಕಡಿಮೆಯಾದ ಬಳಿಕ ಡಿಸ್ಚಾರ್ಜ್ ಮಾಡುವ ಸಾಧ್ಯತೆಯಿದೆ ಎಂದು ಆಸ್ಪತ್ರೆಯ ಮೂಲಗಳು ಮಾಹಿತಿ ನೀಡಿವೆ.

ಇದನ್ನೂ ಓದಿ : "ರಮೇಶ್ ಜಾರಕಿಹೊಳಿಗೆ ಸರ್ಕಾರ ಉರಳಿಸುವ ಶಕ್ತಿ ಇದೆ"

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News