ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಿಂದ ರಾಜ್ಯದ ಲೂಟಿ: ಹೆಚ್ಡಿಕೆ

ಬಿಜೆಪಿ ಅಧಿಕಾರದಲ್ಲಿದ್ದಾಗ ಇದ್ದ ಮುಖ್ಯಮಂತ್ರಿಗಳು ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

Last Updated : Jul 9, 2018, 12:46 PM IST
ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಿಂದ ರಾಜ್ಯದ ಲೂಟಿ: ಹೆಚ್ಡಿಕೆ title=

ಬೆಂಗಳೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಇದ್ದ ಮುಖ್ಯಮಂತ್ರಿಗಳು ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದರು.

ಇಂದು ಸದನದಲ್ಲಿ ನಡೆಯುತ್ತಿರುವ ಬಜೆಟ್ ಅಧಿವೇಶನದಲ್ಲಿ ಮಾತನಾಡಿದ ಅವರು, ಈ ಹಿಂದೆ ಸದಾನಂದಗೌಡರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಅಕ್ರಮ ನಡೆದಿದೆ ಎಂದು ಯಡಿಯೂರಪ್ಪನವರು ಹೇಳಿಕೆ ನೀಡಿದ್ದರು. ಮತ್ತೊಂದೆಡೆ ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡಲು ಬಿ.ಎಸ್.ಯಡಿಯೂರಪ್ಪ ಕಾರಣ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರೇ ಈ ಹಿಂದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ನಾನೇನು ಹೊಸ ಆರೋಪ ಮಾಡುತ್ತಿಲ್ಲ ಎಂದು ಕುಮಾರಸ್ವಾಮಿ ಲೇವಡಿ ಮಾಡಿದರು. 

ರಾಜ್ಯದ ಜನತೆಯನ್ನು ವಿರೋಧ ಪಕ್ಷ ದಿಕ್ಕು ತಪ್ಪಿಸುತ್ತಿದೆ: ಸಿಎಂ ಕುಮಾರಸ್ವಾಮಿ

2006ರಲ್ಲಿ ನನ್ನ ಮೇಲೆ 150 ಕೋಟಿ ರೂ. ಗಣಿ ಲಂಚದ ಆರೋಪ ಮಾಡಿದ್ದರು. ಆದರೆ ನಾನು ಅಂದು ಮಿತ್ರ ಪಕ್ಷ ಬಿಜೆಪಿಯನ್ನು ದೂಷಿಸಲಿಲ್ಲ. ಅವರೊಂದಿಗೇ 18 ತಿಂಗಳು ಅಧಿಕಾರದಲ್ಲಿ ಮುಂದುವರೆದೆ. ಒಂದು ವೇಳೆ ನಾನು ವಚನ ಭ್ರಷ್ಟನಾಗಿದ್ದರೆ ನನ್ನನು ಏಕೆ ಸರ್ಕಾರದಿಂದ ಕಿತ್ತು ಹಾಕಲಿಲ್ಲ ಎಂದು ಪ್ರಶ್ನಿಸಿದ ಕುಮಾರಸ್ವಾಮಿ ಅವರು, ನಾನು ಅಂದು ಎಲ್ಲವನ್ನೂ ಸಹಿಸಿಕೊಂಡು ಜನರಿಗಾಗಿ ಕೆಲಸ ಮಾಡಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

Trending News