ಬೆಂಗಳೂರು: ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ದಿನೇಶ್ ಗುಂಡುರಾವ್ ಉಪಸ್ಥಿತಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಭಾರತೀಯ ಜನತಾ ಪಕ್ಷದಿಂದ ಟಿಕೆಟ್ ನಿರಾಕರಿಸಿದ ಕಾರಣಕ್ಕೆ ಬಿಜೆಪಿ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಅವರು ಸಂಸದ ಚಂದ್ರಪ್ಪ, ಮಾಜಿ ಸಚಿವ ಆಂಜನೇಯ, ಶಾಸಕ ರಘುಮೂರ್ತಿ, ಮಾಜಿ ಶಾಸಕ ಡಿ.ಸುಧಾಕರ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ್ದಾರೆ.
ಇದೇ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, "ತಿಪ್ಪೇಸ್ವಾಮಿ ಅವರು ತಮ್ಮ ಜನಪರ ಕಾರ್ಯಗಳ ಕಾರಣದಿಂದ ಮೊಳಕಾಲ್ಮೂರು ಜನರೊಂದಿಗೆ ತಳಮಟ್ಟದಲ್ಲಿ ಸಂಪರ್ಕವಿರಿಸಿಕೊಂಡಿದ್ದಾರೆ. ಹೀಗಾಗಿ ತಿಪ್ಪೇಸ್ವಾಮಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ" ಎಂದು ಹೇಳಿದರು.
"Shri. Thippeswamy has worked at grass root level and has a greater connect with the people because of his good work in Molakalmuru. His decision to join our party is going to help us win Chitradurga constituency with ease.": @KPCCPresident Shri. @dineshgrao pic.twitter.com/H210V6bW4Z
— Karnataka Congress (@INCKarnataka) March 1, 2019