ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರಕಾರ 100 ದಿನಗಳನ್ನು ಪೂರೈಸಿದ ಬೆನ್ನಲ್ಲೇ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಸಾಮಾಜಿಕ ಮಾಧ್ಯಮ ಟ್ವಿಟ್ಟರ್'ನಲ್ಲಿ ಖಾತೆ ತೆರೆದಿದ್ದಾರೆ.
ಇದುವರೆಗೂ ಯಾವುದೇ ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯರಾಗಿರದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಇದೀಗ @H_D_Devegowda ಎಂಬ ಹೆಸರಿನಲ್ಲಿ ಟ್ವಿಟ್ಟರ್ ಖಾತೆ ತೆರೆದಿದ್ದು, 100 ದಿನಗಳನ್ನು ಪೂರೈಸಿದ ಸಮ್ಮಿಶ್ರ ಸರ್ಕಾರಕ್ಕೆ ಶುಭ ಹಾರೈಸಿದ್ದಾರೆ.
"ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿಕೂಟ ಸರಕಾರ ಶತದಿನಗಳನ್ನು ಪೂರೈಸಿದೆ. ಈ ಸಂದರ್ಭದಲ್ಲಿ ಮೈತ್ರಿಕೂಟದಲ್ಲಿರುವ ಸಚಿವರು ಹಾಗೂ ಶಾಸಕರೆಲ್ಲರಿಗೂ ಶುಭ ಕೋರುತ್ತೇನೆ. ಈ ಸರಕಾರ ಐದು ವರ್ಷಗಳ ಕಾಲ ಜನಪರವಾಗಿ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲಿ" ಎಂದು ಹೆಚ್.ಡಿ.ದೇವೇಗೌಡರು ಹಾರೈಸಿದ್ದಾರೆ.
ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ನೇತ್ರತ್ವದ ಮೈತ್ರಿಕೂಟ ಸರಕಾರ ಶತದಿನಗಳನ್ನು ಪೂರೈಸಿದೆ.ಈ ಸಂದರ್ಭದಲ್ಲಿ ಮೈತ್ರಿಕೂಟದಲ್ಲಿರುವ ಸಚಿವರು ಹಾಗೂ ಶಾಸಕರೆಲ್ಲರಿಗೂ ಶುಭ ಕೋರುತ್ತೇನೆ. ಈ ಸರಕಾರ ಐದು ವರ್ಷಗಳ ಕಾಲ ಜನಪರವಾಗಿ ಆಡಳಿತ ನಡೆಸುವ ಮೂಲಕ ರಾಜ್ಯದ ಅಭಿವೃದ್ಧಿ ಹೊಸ ಎತ್ತರಕ್ಕೇರಲೆಂದು ಹಾರೈಸುತ್ತೇನೆ.
— H D Devegowda (@H_D_Devegowda) August 30, 2018
@H_D_Devegowda ಹೆಸರಿನಲ್ಲಿ ತೆರೆದಿರುವ ಖಾತೆಯಲ್ಲಿ ಆಗಸ್ಟ್ 22ರಂದು ಪ್ರವಾಹ ಪೀಡಿತ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಬಗ್ಗೆ ಪೋಸ್ಟ್ ಮಾಡಿರುವ ದೇವೇಗೌಡರು, ಕಳೆದ ಒಂದು ವಾರದಿಂದ ಟ್ವಿಟ್ಟರ್'ನಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಇನ್ನೂ @H_D_Devegowda ಖಾತೆ ಅಧಿಕೃತ (ವೆರಿಫೈಡ್ ಅಕೌಂಟ್) ಆಗಿಲ್ಲ.