ಬೆಂಗಳೂರು: ಸಂಸತ್ ಭವನದ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮಕ್ಕೆ ನಾನು ಹಾಜರಾಗುತ್ತಿದ್ದೇನೆ. ಅದು ದೇಶದ ಆಸ್ತಿ. ಯಾರೊಬ್ಬರ ವೈಯಕ್ತಿಕ ವಿಷಯಕ್ಕೆ ಸಂಬಂಧಿಸಿದ್ದು ಅದಲ್ಲ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡ ಅವರು ಹೇಳಿದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಕ್ಷದ ಆತ್ಮಾವಲೋಕನ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಪ್ರಧಾನಮಂತ್ರಿಗಳು, ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರು ಆಹ್ವಾನ ನೀಡಿದ್ದಾರೆ ನಿಜ, ಆದರೆ; ಅದು ಅವರ ವೈಯಕ್ತಿಕ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ ಎಂದರು.
ಇದನ್ನೂ ಓದಿ: HD Kumaraswamy: ಸುಳ್ಳು ಗ್ಯಾರಂಟಿಗಳ ವಿರುದ್ಧ ಹೋರಾಟ; ಮುಖಂಡರಿಗೆ ರಣವೀಳ್ಯ ನೀಡಿದ ಕುಮಾರಸ್ವಾಮಿ
ಆ ಭವ್ಯ ಕಟ್ಟಡ ದೇಶದ ಜನರ ತೆರಿಗೆ ಹಣದಿಂದ ನಿರ್ಮಾಣವಾಗಿದೆ. ಅದು ದೇಶಕ್ಕೆ ಸೇರಿದ್ದು. ಅದು ಬಿಜೆಪಿ ಅಥವಾ ಆರೆಸ್ಸೆಸ್ ಕಚೇರಿ ಅಲ್ಲ. ಸಂಸತ್ ಭವನದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಓರ್ವ ಮಾಜಿ ಪ್ರಧಾನಮಂತ್ರಿಯಾಗಿ, ದೇಶದ ಪ್ರಜೆಯಾಗಿ ಭಾಗಿಯಾಗುತ್ತಿದ್ದೇನೆ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಬಿಜೆಪಿಯನ್ನು ರಾಜಕೀಯವಾಗಿ ವಿರೋಧ ಮಾಡಲಿಕ್ಕೆ ನನ್ನಲ್ಲಿ ಅನೇಕ ಕಾರಣಗಳಿವೆ. ಆದರೆ, ಸಂಸತ್ ಭವನ ಉದ್ಘಾಟನೆ ವಿಷಯದಲ್ಲಿ ರಾಜಕೀಯ ತರುವುದು ನನಗೆ ಇಷ್ಟವಿಲ್ಲ. ನಾನು ಸಂಸತ್ತಿನ ಎರಡು ಸದನಗಳಿಗೆ ಆಯ್ಕೆಯಾಗಿದ್ದೇನೆ. ಅಲ್ಲಿ ಸಾಂವಿಧಾನಿಕ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿದ್ದೇನೆ, ಈಗಲೂ ಸದಸ್ಯನಾಗಿದ್ದೇನೆ. ಸಂವಿಧಾನದ ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಿದ್ದೇನೆ. ಹೀಗಾಗಿ ಸಂವಿಧಾನದ ವಿಷಯದಲ್ಲಿ ನಾನು ರಾಜಕೀಯ ತರಲಾರೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟಪಡಿಸಿದರು.
ಇದನ್ನೂ ಓದಿ: Basavaraja Bommai : ಜನ ಮೆಚ್ಚುವ ರಾಜಕಾರಣ ಮಾಡಿ: ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ಕಿಡಿ
ಅನೇಕ ಪಕ್ಷಗಳು ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಓರ್ವ ಮಾಜಿ ಪ್ರಧಾನಿಯಾಗಿ ನೀವು ಹೋಗುತ್ತೀರಾ? ಇಲ್ಲವಾ? ಎಂದು ಅನೇಕರು ಪ್ರಶ್ನೆ ಮಾಡಿದ್ದಾರೆ. ಹೌದು, ನಾನು ಸಂವಿಧಾನಕ್ಕೆ ಬದ್ಧನಾಗಿದ್ದೇನೆ. ಅದಕ್ಕಾಗಿ ಸಂಸತ್ ಭವನ ಉದ್ಘಾಟನೆಗೆ ಹೋಗುತ್ತೇನೆ ಎಂದು ಅವರಿಗೆ ಹೇಳಲು ಬಯಸುತ್ತೇನೆ ಎಂದು ಅವರು ನುಡಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ