ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ; ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜೂನ್ 06 : ಇನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ  ಬಿಲ್ ಕಟ್ಟುವ ಅಗತ್ಯವಿಲ್ಲ. ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ. ವಾಣಿಜ್ಯ ಕಟ್ಟಡಗಳಿಗೆ ಮಾತ್ರ ಇದು ಅನ್ವಯಿಸುವುದಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.   

Written by - Savita M B | Last Updated : Jun 6, 2023, 12:03 PM IST
  • ನ್ನೂರು ಯೂನಿಟ್ ಗಳ ಒಳಗೆ ವಿದ್ಯುತ್ ಬಳಕೆ ಮಾಡುವ ಬಿಲ್ ಕಟ್ಟುವ ಅಗತ್ಯವಿಲ್ಲ
  • ಬಾಡಿಗೆದಾರರಿಗೂ ಇದು ಅನ್ವಯವಾಗುತ್ತದೆ.
  • ಗೃಹಜ್ಯೋತಿ ಯೋಜನೆಯ ಗೈಡ್‌ಲೈನ್ಸ್‌ ತಿಳಿಸಿದ ಸಿಎಂ
ಬಾಡಿಗೆದಾರರಿಗೂ ಉಚಿತ ವಿದ್ಯುತ್ ಅನ್ವಯ; ಮುಖ್ಯಮಂತ್ರಿ ಸಿದ್ದರಾಮಯ್ಯ title=

Siddaramaiah  : ಇಂದು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ 41 ನೇ ಪುಣ್ಯಸ್ಮರಣೆ  ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ  ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 

ದೇವರಾಜ ಅರಸು ಅವರು ನಾಡು ಕಂಡ ಮುತ್ಸದಿ ರಾಜಕಾರಣಿ. ಸರ್ಕಾರ ಗೌರವಯುತವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರ ಸ್ಮರಣೆ ಮಾಡಿದೆ. ಅವರು ಮುಖ್ಯ ಮಂತ್ರಿಯಾಗಿ ಹಾಗೂ ಅವರ ಜೀವಿತ ಕಾಲದಲ್ಲಿ ಮಾಡಿದ ಕೆಲಸ ನಮಗೆ ಸ್ಪೂರ್ತಿ. ಸಾಮಾಜಿಕ ನ್ಯಾಯದ ಹರಿಕಾರ. ಅನೇಕ ಸಾಮಾಜಿಕ, ಕ್ರಾಂತಿಕಾರಿ ತೀರ್ಮಾನಗಳನ್ನು ಕೈಗೊಂಡಿದ್ದರು.

ಇದನ್ನೂ ಓದಿ-ರಾಜ್ಯದಲ್ಲಿ ಮುಂಗಾರು ಪ್ರವೇಶಕ್ಕೆ ಕೌಂಟ್’ಡೌನ್: ಈ ಭಾಗಗಳಲ್ಲಿ ಗುಡುಗು, ಗಾಳಿ ಸಹಿತ ಮಳೆಯ ಎಚ್ಚರಿಕೆ

ಭೂ ಸುಧಾರಣಾ ಕಾಯ್ದೆ, ಜೀತಪದ್ಧತಿ ಮುಕ್ತಿ, ಮಲಹೊರುವ ಪದ್ಧತಿಯನ್ನು ನಿಲ್ಲಿಸಿದ್ದು, ರೈತರ ಸಾಲ ವಿಮೋಚನಾ ಕಾಯ್ದೆ, ಹಾವನೂರು ಆಯೋಗ ರಚಿಸಿ ಹಿಂದುಳಿದ ಜಾತಿಗಳಿಗೆ ಮೀಸಲಾತಿ, ಧ್ವನಿಯಿಲ್ಲದ ಜನರ ದನಿಯಾದರು  ಎಂದರು. 

ರಾಜಕೀಯ ವ್ಯವಸ್ಥೆಯಲ್ಲಿ ಸಾಮಾಜಿಕ ನ್ಯಾಯ
ಅನೇಕ ಜನರನ್ನು ಶಾಸಕರನ್ನಾಗಿಸಿ ಅವರಿಗೆ ಪ್ರಾತಿನಿಧ್ಯ ನೀಡುವ ಕೆಲಸ  ಮಾಡಿದರು. ರಾಜಕೀಯ ವ್ಯವಸ್ಥೆಯಲ್ಲಿಯೂ ಸಾಮಾಜಿಕ ನ್ಯಾಯ ತರಲು ಶ್ರಮಿಸಿದರು. ಅಧಿಕಾರ ಎಲ್ಲರಿಗೂ ದೊರೆಯಬೇಕೆಂಬ ನಂಬಿಕೆ ಉಳ್ಳವರಾಗಿದ್ದರು. ಉಳುವುವವನೆ ಭೂಮಿ ಒಡೆಯ ಎಂಬ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡಿದವರು.  ಅವರ ಕೆಲಸಗಳನ್ನು ಮುಂದುವರೆಸಿಕೊಂಡು ಹೋಗುವ ಕೆಲಸ ನಮ್ಮ ಸರ್ಕಾರ ಮಾಡುತ್ತಿದೆ  ಎಂದರು. 

ದೇವರಾಜ ಅರಸು ಅವರು ಕಾಂಗ್ರೆಸ್ ಪಕ್ಷದಿಂದ 1982 ರಿಂದ 80 ರವರೆಗೆ ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳು ಜನರ ಮನಸ್ಸಿನಲ್ಲಿ ಸದಾ ಉಳಿದಿವೆ ಎಂದು ತಿಳಿಸಿದರು.

ಇದನ್ನೂ ಓದಿ-ಠೇವಣಿ ಅವಧಿ ಮುಗಿದರೂ ಹಣ ಹಿಂದಿರುಗಿಸದ ಸಹಕಾರಿ ಪತ್ತಿನ ಸಂಘಕ್ಕೆ ಒಟ್ಟು 2 ಲಕ್ಷ 71 ಸಾವಿರ ರೂ.ದಂಡ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News