ಉಚಿತ ಮಹಿಳಾ ಹೊಲಿಗೆ ತರಬೇತಿಗೆ ಇಲ್ಲಿದೆ ಸದಾವಕಾಶ...! ತಡ ಮಾಡದೇ ನೀವು ಅರ್ಜಿ ಸಲ್ಲಿಸಿ

ಕೊಪ್ಪಳ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲಾ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ``ಮಹಿಳಾ ಹೊಲಿಗೆ ತರಬೇತಿ'' ನೀಡಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

Last Updated : Jul 9, 2020, 01:49 AM IST
ಉಚಿತ ಮಹಿಳಾ ಹೊಲಿಗೆ ತರಬೇತಿಗೆ ಇಲ್ಲಿದೆ ಸದಾವಕಾಶ...! ತಡ ಮಾಡದೇ ನೀವು ಅರ್ಜಿ ಸಲ್ಲಿಸಿ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೊಪ್ಪಳ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಜಿಲ್ಲಾ ಗ್ರಾಮೀಣ ಭಾಗದ ಆಸಕ್ತರಿಗೆ 30 ದಿನಗಳ ಉಚಿತ ``ಮಹಿಳಾ ಹೊಲಿಗೆ ತರಬೇತಿ'' ನೀಡಲು ಆಸಕ್ತರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷ ವಯೋಮಿತಿಯಲ್ಲಿರಬೇಕು. ಕನಿಷ್ಠ ಎಂಟನೆ ತರಗತಿ ಪಾಸ್ ಆಗಿರಬೇಕು. ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ನರೇಗಾ ಜಾಬ್ ಕಾರ್ಡ್ ಹೊಂದಿರಬೇಕು. ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.

ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ಅರ್ಜಿ ವಿತರಿಸುವ ಹಾಗೂ ಸ್ವೀಕರಿಸುವ ಕೋನೆಯ ದಿನಾಂಕ ಜುಲೈ. 19 ಆಗಿದ್ದು, ಜು. 20 ರಂದು ಬೆಳಿಗ್ಗೆ 10-30ಕ್ಕೆ ಸಂದರ್ಶನ ನಡೆಸಲಾಗುವುದು. ಹಾಗೂ ಜು. 21 ರಿಂದ ತರಬೇತಿಗಳು ಪ್ರಾರಂಭಗೊಳ್ಳುವವು. ಆಯ್ಕೆಯಾದ ಅಭ್ಯರ್ಥಿಗಳಿಗೆ ಊಟ ಮತ್ತು ವಸತಿಯನ್ನು ಉಚಿತವಾಗಿ ನೀಡಲಾಗುವುದು.

ಅರ್ಜಿಯನ್ನು ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಆಶೋಕ ಸರ್ಕಲ್ ಹತ್ತಿರ ಕೊಪ್ಪಳ ದೂ.ಸಂ. 08539-231038, ಮೊ.ಸಂ. 9448960002 ಕ್ಕೆ ಸಂಪರ್ಕಿಸಬಹುದು ಎಂದು ಕೊಪ್ಪಳ ಎಸ್.ಬಿ.ಐ. ರ‍್ಸೆಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Trending News