ಬೆಂಗಳೂರು: ಕರ್ನಾಟಕದಲ್ಲಿ ಆಪ್ತ-ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಟೆಲಿ-ಕೌನ್ಸಿಲಿಂಗ್”ಸೌಲಭ್ಯವನ್ನು ಕಲ್ಪಿಸಲಾಗಿದ್ದು ಆಪ್ತ ಸಮಾಲೋಚನೆ ಬಯಸುವ ಮಕ್ಕಳು ಹಾಗೂ ಮಕ್ಕಳ ಪೋಷಕರು ಟೋಲ್ ಫ್ರೀ ಸಂಖ್ಯೆ: 18004252244 ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತ ಸಮಾಲೋಚನೆ ಸೌಲಭ್ಯ ಪಡೆಯಬಹುದಾಗಿರುತ್ತದೆ.
ಸಮಗ್ರ ಮಕ್ಕಳ ರಕ್ಷಣಾ ಯೋಜನೆಯ ಈ ಕಾರ್ಯಕ್ರಮದಡಿ ನರ್ಲಕ್ಷ್ಯಕ್ಕೊಳಗಾದ, ಪರಿತ್ಯಜಿಸಲ್ಪಟ್ಟ, ದೌರ್ಜನ್ಯಕ್ಕೆ ಒಳಗಾದ, ಶೋಷಣೆಗೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮಪಡಿಸುವ ಉದ್ದೇಶವನ್ನು ಹೊಂದಿರುತ್ತದೆ.
ಉಚಿತ ಟೆಲಿ-ಆಪ್ತಸಮಾಲೋಚನೆ ಸೌಲಭ್ಯವು ಪ್ರಮುಖವಾಗಿ 2 ಸಿಬ್ಬಂದಿಗಳನ್ನು ಹೊಂದಿದು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ಎರಡು ಪಾಳಿಯಲ್ಲಿ ಕೆಲಸ ನಿರ್ವಹಿಸುವರು. ಇವರು ಮಗುವಿನ ಕರೆಗಳನ್ನು ಸ್ವೀಕರಿಸಿ ಮಗುವಿನ ನಿರ್ದಿಷ್ಟವಾದ ಸಮಾಲೋಚನೆಯ ಅವಶ್ಯಕತೆಯನ್ನು ಆಧರಿಸಿ ಸಂಬಂಧಪಟ್ಟ ಸಮಾಲೀಚಕರಿಗೆ ಸಂಪರ್ಕ ಕಲ್ಪಿಸುತ್ತಾರೆ. ಈ ಉದ್ದೇಶಕ್ಕಾಗಿ ರಾಜ್ಯದಾದ್ಯಂತ ಸಮಗ್ರ ಮಕ್ಕಳ ರಕ್ಷಣಾ ಯೋಜನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಮಾಲೋಚಕರು, ಸಮಾಜ ಕಾರ್ಯಕರ್ತರಿಗೆ ಪ್ರಥಮ ಹಂತದ ತರಬೇತಿಯನ್ನು ನೀಡಲಾಗಿದೆ.
ಮುಂದಿನ ದಿನಗಳಲ್ಲಿ ಅನುಭವದ ಆಧಾರದ ಮೇಲೆ ಮನೋಶಾಸ್ತ್ರ ಬೆಂಬಲದ ಅವಶ್ಯಕತೆ ಇರುವ ಮಕ್ಕಳಿಗೆ ಸೇವೆ ಸಲ್ಲಿಸಲು ಅಗತ್ಯವಿರುವ ಹೆಚ್ಚಿನ ತರಬೇತಿಯನ್ನು ಎಲ್ಲಾ ಸಮಾಲೋಚಕರಿಗೆ ಒದಗಿಸುವ ಮೂಲಕ ಸಮಾಲೋಚಕರ ಸಾಮಥ್ರ್ಯವನ್ನು ಆಗ್ಗಿಂದಾಗ್ಗೆ ಅಭಿವೃದ್ದಿಪಡಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.