ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್ ಹಾಗೂ ಮಹಿಳೆಯರ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ ದಿ: 27/12/2021 ರಿಂದ 30 ದಿನಗಳ “ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್” ಮತ್ತು ದಿ: 30/12/2021 ರಿಂದ 30 ದಿನಗಳ “ಮಹಿಳೆಯರ ಟೈಲರಿಂಗ್” ಕುರಿತು ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

Written by - Zee Kannada News Desk | Last Updated : Dec 9, 2021, 11:59 PM IST
  • ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ಪ್ರಯೋಗಿಕವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ.
  • ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವತಿಯರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.
ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್ ಹಾಗೂ ಮಹಿಳೆಯರ ಟೈಲರಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ ದಿ: 27/12/2021 ರಿಂದ 30 ದಿನಗಳ “ಬ್ಯೂಟಿಪಾರ್ಲರ್ ಮ್ಯಾನೇಜ್‍ಮೆಂಟ್” ಮತ್ತು ದಿ: 30/12/2021 ರಿಂದ 30 ದಿನಗಳ “ಮಹಿಳೆಯರ ಟೈಲರಿಂಗ್” ಕುರಿತು ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಇದನ್ನೂ ಓದಿ :ದೇಶಾದ್ಯಂತ 23 ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದ ಆರೋಗ್ಯ ಸಚಿವಾಲಯ

ತರಬೇತಿಯಲ್ಲಿ ಊಟ, ವಸತಿ ಸಂಪೂರ್ಣವಾಗಿ ಉಚಿತವಾಗಿದ್ದು, ಸಂಬಂಧಿಸಿದ ಕ್ಷೇತ್ರದ ಬಗ್ಗೆ ಪ್ರಯೋಗಿಕವಾಗಿ ತಿಳಿಸುವುದರ ಜೊತೆಗೆ ಉದ್ಯಮಶೀಲತೆ ಹಾಗೂ ವ್ಯಕ್ತಿತ್ವ ವಿಕಸನಕ್ಕೆ ಸಂಬಂಧಿಸಿ ಮಾಹಿತಿ ನೀಡಲಾಗುತ್ತದೆ. ಗ್ರಾಮೀಣ ಪ್ರದೇಶದಲ್ಲಿ ನೆಲೆಸಿರುವ 18 ರಿಂದ 45 ರೊಳಗಿನ ವಯೋಮಾನದ ನಿರುದ್ಯೋಗಿ ಯುವತಿಯರು ಈ ತರಬೇತಿಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.

ಇದನ್ನೂ ಓದಿ : IIT-Bombay Placement: ಮೊದಲ ದಿನದಂದೇ 2.05 ಕೋಟಿ ರೂ ಪ್ಯಾಕೇಜ್ ನೀಡಿದ Uber

ಆಸಕ್ತ ಅರ್ಹ ಅಭ್ಯರ್ಥಿಗಳು ಕೂಡಲೇ ತಮ್ಮ ಹೆಸರು, ಪೂರ್ಣವಿಳಾಸ, ಪಿನ್ ಕೋಡ್, ಸಂಪರ್ಕಕ್ಕೆ ಲಭ್ಯವಿರುವ ದೂರವಾಣಿ ಸಂಖ್ಯೆ, ವಯಸ್ಸು, ವಿದ್ಯಾರ್ಹತೆ, ಪಡೆಯಲಿಚ್ಚಿಸಿರುವ ತರಬೇತಿಯ ಹೆಸರು, ಮುಂತಾದ ಮಾಹಿತಿಯೊಂದಿಗೆ ಖಾಲಿ ಹಾಳೆಯಲ್ಲಿ ಅರ್ಜಿಯನ್ನು ಬರೆದು ದಿನಾಂಕ 25.12.2021ರೊಳಗೆ  ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, (CBRSETI), ಕೆನರಾ ಬ್ಯಾಂಕ್ ಪ್ರ್ರಧಾನ ಕಛೇರಿ (ಅನೆಕ್ಸ್) ಸಂಕೀರ್ಣ, ಮಣಿಪಾಲ - 576104 ಇಲ್ಲಿಗೆ ಕಳುಹಿಸುವುದು.

ಇದನ್ನೂ ಓದಿ : OMG: ಈ ಸ್ವೆಟರ್ ಬೆಲೆ 30 ಲಕ್ಷ ರೂಪಾಯಿಯಂತೆ, ಅಂಥದ್ದೇನಿದೆ ಇದರಲ್ಲಿ?

ಒಬ್ಬ ಅಭ್ಯರ್ಥಿಗೆ ಒಂದು ತರಬೇತಿಯನ್ನು ಪಡೆಯಲು ಅವಕಾಶವಿರುತ್ತದೆ. ಆಸಕ್ತ ಕ್ಷೇತ್ರಕ್ಕೆ ಅರ್ಜಿಯನ್ನು ಕಳುಹಿಸುವುದು. ದೂರವಾಣಿ ಮುಖಾಂತರವೂ ತರಬೇತಿಗೆ ನೋದಾಯಿಸಿಕೊಳ್ಳಬಹುದು. ಗ್ರ್ರಾಮೀಣ ಪ್ರದೇಶದ ಬಿ.ಪಿ.ಎಲ್ ಕುಟುಂಬದ ಅಭ್ಯರ್ಥಿಗಳಿಗೆ ಮೊದಲ ಪ್ರಾಶಸ್ತ್ಯ ನೀಡಲಾಗುವುದು.ಸಂಸ್ಥೆಯ ದೂರವಾಣಿ ಸಂಖ್ಯೆ: 0820-2570455, 9449862665 ಗಳನ್ನು ಸಂಪರ್ಕಿಸಬಹುದಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News