ರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ

G Parameshwar : ರಾಜ್ಯ ನೆನಪಿಡುವಂತಹ ಯಾವ ಯೋಜನೆಗಳನ್ನು ನೀಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

Written by - Prashobh Devanahalli | Last Updated : Apr 20, 2024, 12:46 PM IST
  • ರಾಜ್ಯ ನೆನಪಿಡುವಂತಹ ಯಾವ ಯೋಜನೆಗಳನ್ನು ನೀಡಿಲ್ಲ
  • ರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನಿದೆ?
  • ಗೃಹ ಸಚಿವ ಪರಮೇಶ್ವರ ಹೇಳಿಕೆ
ರಾಜ್ಯಕ್ಕೆ ಪ್ರಧಾನಿ ಮೋದಿಯವರ ಕೊಡುಗೆ ಏನಿದೆ?: ಗೃಹ ಸಚಿವ ಪರಮೇಶ್ವರ title=

ಬೆಂಗಳೂರು: ಪ್ರಧಾನಿ ಮೋದಿಯವರು ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ರಾಜ್ಯ ನೆನಪಿಡುವಂತಹ ಯಾವ ಯೋಜನೆಗಳನ್ನು ನೀಡಿಲ್ಲ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು.

ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ರಾಜ್ಯಕ್ಕೆ ಬರಬೇಕಾದ ಜಿಎಸ್‌ಟಿ ಹಣ ಸಂಪೂರ್ಣವಾಗಿ ಸಿಕ್ಕಿಲ್ಲ. ಬರ ಪರಿಹಾರದ ರೂ. 18 ಸಾವಿರ ಕೋಟಿ ನೀಡುವಂತೆ ಕೋರಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೇಂದ್ರದ ತಂಡವು ಸಹ ಬರ ಅಧ್ಯಯನ ನಡೆಸಿದ್ದು, ಎನ್‌ಡಿಆರ್‌ಎಫ್ ನಿಧಿಯಿಂದ ಒಂದು ರೂ. ಅನುದಾನ ಬಿಡುಗಡೆಯಾಗಿಲ್ಲ ಎಂದರು.

ಇದನ್ನೂ ಓದಿ: Loksabha Polls : ಇಂದು ಚಿಕ್ಕಬಳ್ಳಾಪುರ, ಬೆಂಗಳೂರಿನಲ್ಲಿ ಮೋದಿ ಪ್ರಚಾರ 

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲಾಗುವುದು. ಇದಕ್ಕೆ ರೂ. 5300 ಕೋಟಿ ನೀಡುವುದಾಗಿ ಭರವಸೆ ನೀಡಿದ್ದರು. ಇದಲ್ಲದೇ ಯಾವ ಹೊಸ ಯೋಜನೆಗಳನ್ನು ರಾಜ್ಯಕ್ಕೆ ನೀಡಿಲ್ಲ. ಬಿಜೆಪಿಯ 26 ಸಂಸದರು ಐದು ವರ್ಷ ಏನು ಮಾಡಿದರು.  ರಾಜ್ಯಕ್ಕೆ ಪ್ರಧಾನಿ ಮೋದಿಯ ಕೊಡುಗೆ‌ ಏನಿದೆ?  ಯಾವ ಮುಖ ಹೊತ್ತು ಪದೇಪದೆ ರಾಜ್ಯಕ್ಕೆ ಬರುತ್ತಾರೋ ಎಂದು ಟೀಕಿಸಿದರು.

ಸತ್ಯವನ್ನು ಮುಚ್ಚಿಡಲು ಆಗಲ್ಲ:

ಹುಬ್ಬಳ್ಳಿಯಲ್ಲಿ ನಡೆದ ಯುವತಿ ಹತ್ಯೆ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಅವರು, ಎಬಿವಿಪಿಯವರಿಗೆ ಮತ್ತು ಬಿಜೆಪಿಗೆ ಪ್ರಕರಣದ ಸತ್ಯಾಸತ್ಯತೆ ಗೊತ್ತಿಲ್ಲ. ಇದರಲ್ಲಿ ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ನನಗೂ ಜವಾಬ್ಧಾರಿ ಇದೆ. ಜವಾಬ್ಧಾರಿತನದಿಂದ ನಡೆದುಕೊಳ್ಳುತ್ತಿದ್ದು, ನಮಗೆ ಬಂದಿರುವ ವರದಿಯನ್ನು ನಾವು ತಿಳಿಸಿದ್ದೇವೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ʼಮಗಳ ಸಾವಿʼಗೆ ನ್ಯಾಯ ಕೊಡಿಸುವಂತೆ ಪ್ರಹ್ಲಾದ ಜೋಶಿ ಸಹಾಯ ಕೇಳಿದ ʼಕಾಂಗ್ರೆಸ್‌ʼ ಕಾರ್ಪೋರೇಟರ್‌.! 

ಪ್ರಕರಣದ‌ ಕುರಿತು ಪೊಲೀಸರು ಕೂಲಂಕುಶವಾಗಿ ತನಿಖೆ ನಡೆಸುತ್ತಾರೆ. ಬಳಿಕ ಸತ್ಯಾಂಶ ಹೊರಬರಲಿದೆ. ನನ್ನ ಹೇಳಿಕೆಯಿಂದ ಯುವತಿಯ ತಂದೆ-ತಾಯಿಗೆ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಆದರೆ, ಸತ್ಯವನ್ನು ಮುಚ್ಚಿಡಲು ಆಗುವುದಿಲ್ಲ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News